ಸಾರ್ವಜನಿಕ ವಲಯದ ಪ್ರಮುಖ ವಿಮಾ ಕಂಪನಿಯಾದ ದಿ ಓರಿಯಂಟಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ (OICL) ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.
285 ಜನರಲಿಸ್ಟ್ ಹುದ್ದೆಗಳು ಹಾಗೂ 15 ಹಿಂದಿ ಅಧಿಕಾರಿ ಹುದ್ದೆಗಳು ಸೇರಿ ಒಟ್ಟು 300 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.18 ರೊಳಗೆ OICL ಅಧಿಕೃತ ಜಾಲತಾಣ https://orientalinsurance.org.in/careersಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಡಿಸೆಂಬರ್ 03 (ಮುಂದೂಡಲಾಗಿದೆ)
ನೇಮಕಾತಿಗೆ ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆ ದಿನಾಂಕ – ಡಿಸೆಂಬರ್ 18 (ಮುಂದೂಡಲಾಗಿದೆ)
ಶ್ರೇಣಿ I ಆನ್ಲೈನ್ ಪರೀಕ್ಷೆಯ (ತಾತ್ಕಾಲಿಕ) ದಿನಾಂಕ – ಜನವರಿ 10, 2026
ಶ್ರೇಣಿ II ಆನ್ಲೈನ್ ಪರೀಕ್ಷೆಯ (ತಾತ್ಕಾಲಿಕ) ದಿನಾಂಕ – 28ನೇ ಫೆಬ್ರವರಿ, 2026
ಶೈಕ್ಷಣಿಕ ಅರ್ಹತೆ:
✓ ಜನರಲಿಸ್ಟ್ (285) ಹುದ್ದೆಗೆ; OICL ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
✓ ಹಿಂದಿ ಅಧಿಕಾರಿ (15) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹಿಂದಿ/ಇಂಗ್ಲಿಷ್/ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿ, ಹಿಂದಿ ಮತ್ತು ಇಂಗ್ಲಿಷ್ ಕಡ್ಡಾಯ ಅಥವಾ ಐಚ್ಛಿಕ ವಿಷಯಗಳಾಗಿ ಅಥವಾ ಎರಡರಲ್ಲಿ ಯಾವುದಾದರೂ ಒಂದು ಪರೀಕ್ಷಾ ಮಾಧ್ಯಮವಾಗಿ ಮತ್ತು ಇನ್ನೊಂದನ್ನು ಕಡ್ಡಾಯ ಅಥವಾ ಐಚ್ಛಿಕ ವಿಷಯವಾಗಿ ಕನಿಷ್ಠ 60% ಅಂಕಗಳೊಂದಿಗೆ ಪೂರ್ಣಗೊಳಿಸಬೇಕು.
ವಯೋಮಿತಿ:
30-11-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು