ಆಯಿಲ್ ಇಂಡಿಯಾ ಲಿಮಿಟೆಡ್(OIL) ನೇಮಕಾತಿ 2026: ಪದವೀಧರರಿಂದ ಅರ್ಜಿ ಆಹ್ವಾನ

Published on:

ಆಯಿಲ್ ಇಂಡಿಯಾ ಲಿಮಿಟೆಡ್‌ನ ಕಾರ್ಯನಿರ್ವಾಹಕ ಕೇಡರ್‌ನಲ್ಲಿ ಖಾಲಿ ಇರುವ ಗ್ರೇಡ್ ಡಿ/ಇ/ಎಫ್ ಸೇರಿದಂತೆ ಒಟ್ಟು 10 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಜೂ.28ರವೆರೆಗೆ ಗಡುವು ನೀಡಲಾಗಿದೆ.

ಡೆಪ್ಯುಟಿ ಚೀಫ್ ಕೆಮಿಸ್ಟ್, ಡೆಪ್ಯುಟಿ ಚೀಫ್ ಜಿಯೋಲಜಿಸ್ಟ್, ಡೆಪ್ಯುಟಿ ಚೀಫ್ ಎಂಜಿನಿಯರ್, ಡೆಪ್ಯುಟಿ ಚೀಫ್ ಜಿಯೋಫಿಸಿಸ್ಟ್ ಹಾಗೂ ಎಕನಾಮಿಸ್ಟ್ ಹುದ್ದೆಗಳಿಗೆ ನೇಮಕ ನಡೆಯಲಿದೆ. ಸದರಿ ಹುದ್ದೆಗಳ ಅರ್ಹತೆಗಳನ್ನು ಪೂರೈಸುವ ಆಸಕ್ತ ಅಭ್ಯರ್ಥಿಗಳು ಒಐಎಲ್‌ ಅಧಿಕೃತ ವೆಬ್ಸೈಟ್ https://www.oil-india.com/advertisement-listಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಮೇ 28, 2026
  • • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ – ಜೂನ್ 28, 2026

ಖಾಲಿ ಇರುವ ಹುದ್ದೆಗಳ ವಿವರ:

• ಡೆಪ್ಯುಟಿ ಚೀಫ್ ಕೆಮಿಸ್ಟ್ – 01
• ಡೆಪ್ಯುಟಿ ಚೀಫ್ ಜಿಯೋಲಜಿಸ್ಟ್ – 01
• ಡೆಪ್ಯುಟಿ ಚೀಫ್ ಎಂಜಿನಿಯರ್ (ರಿಸರ್ವರ್) – 01
• ಡೆಪ್ಯುಟಿ ಚೀಫ್ ಜಿಯೋಫಿಸಿಸ್ಟ್ – 01
• ಡೆಪ್ಯುಟಿ ಚೀಫ್ ಎಂಜಿನಿಯರ್ (S&E) – 05
• ಎಕನಾಮಿಸ್ಟ್ – 01

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ/ಡಿಪ್ಲೊಮಾ/ಬಿ.ಇ ಪದವಿಯನ್ನು ಪೂರ್ಣಗೊಳಿಸಿರಬೇಕು ಜೊತೆಗೆ ಕನಿಷ್ಠ 09 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.

ವಯೋಮಿತಿ:

28-06-2026 ರಂತೆ;

ಗರಿಷ್ಠ ವಯಸ್ಸಿನ ಮಿತಿ – 39 ವರ್ಷಗಳು

ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಆಯ್ಕೆ ವಿಧಾನ:

  • ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್
  • ವೈಯಕ್ತಿಕ ಸಂದರ್ಶನ
  • ವೈದ್ಯಕೀಯ ಪರೀಕ್ಷೆ
  • ದಾಖಲಾತಿ ಪರಿಶೀಲನೆ

ಸಂಬಳ:

ಗ್ರೇಡ್‌ ಆಧಾರಿತಾವಗಿ ಮಾಹೆಯಾನ ರೂ.90,000 ರಿಂದ 2,60,000ವರೆಗೆ ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಉಲ್ಲೇಖಿಸಲಾಗಿರುವುದಿಲ್ಲ

ಅರ್ಜಿ‌ ಸಲ್ಲಿಸುವ ವಿಧಾನ

• ಮೊದಲಿಗೆ ಅಭ್ಯರ್ಥಿಗಳು OIL ಅಧಿಕೃತ ವೆಬ್ಸೈಟ್ https://oileservice.oilindia.in/HRARecruitmentPortal/Account/?id=225fb5ff-be78-4fe8-82db-ac46846759b5 ಗೆ ಭೇಟಿ ನೀಡಿ.

• ಅರ್ಜಿ ಸಂಖ್ಯೆ ಹಾಗೂ ಕ್ಯಾಪ್ಚ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.

• ನಂತರ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.

• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.

Important Direct Links:

Official Notification PDFDownload
Online Application Form LinkApply Now
Official Websitewww.oil-india.com
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment