DRDO ಫೆಲೋಶಿಪ್: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯ ಮನೋವಿಜ್ಞಾನ ಸಂಶೋಧನಾ ರಕ್ಷಣಾ ಸಂಸ್ಥೆ(DIPR)ಯು ಜೂನಿಯರ್‌ ರಿಸರ್ಚ್‌ ಫೆಲೋಶಿಪ್‌(JRF), ರಿಸರ್ಚ್‌ ಅಸೋಸಿಯೇಟ್‌(RA) ಫೆಲೋಶಿಪ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಫೆಲೋಶಿಪ್‌ ಆರಂಭದಲ್ಲಿ ಎರಡು ವರ್ಷದ ಅವಧಿವರೆಗೆ ಇರುತ್ತದೆ, ನಿಯಮಗಳ ಪ್ರಕಾರ ಅವಧಿ ವಿಸ್ತರಿಸಬಹುದಾಗಿದೆ. ಜೆಆರ್‌ಎಫ್‌ಗಾಗಿ ಮನೋವಿಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ನೇಟ್‌/ಗೇಟ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ರಿಸರ್ಚ್‌ ಅಸೋಸಿಯೇಟ್‌ ಫೆಲೋಶಿಪ್‌ಗಾಗಿ ಮನೋವಿಜ್ಞಾನದಲ್ಲಿ ಪಿಎಚ್‌.ಡಿ ಹೊಂದಿರುವವರು ಅರ್ಜಿ ಸಲ್ಲಿಕೆಗೆ ಅರ್ಹರು. ಅಧಿಕೃತ ವೆಬ್‌ಸೈಟ್‌https://www.drdo.gov.in/drdoನಲ್ಲಿ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ನಿರ್ದೇಶಕರು … More

ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ; ಸಂದರ್ಶನಕ್ಕೆ ಕರೆ

ಹೊಸಕೋಟೆ: ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಪುರುಷ ಮತ್ತು ಮಹಿಳೆಯರಿಗೆ ಜ.19 ರಿಂದ 13 ದಿನಗಳ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕನ್ನಡ ಓದಲು, ಬರೆಯಲು ತಿಳಿದಿರುವ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 50 ವರ್ಷ ವಯೋಮಾನದವರು ಭಾಗವಹಿಸಬಹುದು. ಗ್ರಾಮೀಣ ಭಾಗದ ಬಿಪಿಎಲ್‌ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. … More

ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ{CUET UG}ಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು 2026-27ನೇ ಶೈಕ್ಷಣಿಕ ಸಾಲಿನ ಪದವಿಪೂರ್ವ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆಸುವ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ[CUET (UG)]ಯ ನೋಂದಣಿ ಜ.03ರಿಂದ ಆರಂಭವಾಗಿದೆ. ಪ್ರವೇಶ ಪರೀಕ್ಷೆಯು ಮೇ.11 ರಿಂದ 31ರವರೆಗೆ ನಡೆಯಲಿದೆ. ಭಾರತದ ಎಲ್ಲಾ ಕೇಂದ್ರೀಯ ವಿಶ್ವವಿದ್ಯಾಲಯಗಳು/ಭಾಗವಹಿಸುವ ವಿಶ್ವವಿದ್ಯಾಲಯಗಳಲ್ಲಿ (ರಾಜ್ಯ/ಡೀಮ್/ಖಾಸಗಿ) ಪದವಿ ಪೂರ್ವ ಕಾರ್ಯಕ್ರಮಗಳ ಪ್ರವೇಶಾತಿಗಾಗಿ ನಡೆಸಲಾಗುವ ಪ್ರವೇಶ ಪರೀಕ್ಷೆಯಾಗಿದೆ. ಕನ್ನಡ ಭಾಷೆ ಸೇರಿ 13 ಭಾಷೆಗಳನ್ನೊಳಗೊಂಡ ಒಟ್ಟು 37 ವಿಷಯಗಳು ಕುರಿತು ಪರೀಕ್ಷೆ ಇದಾಗಿದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು NTA ಅಧಿಕೃತ ವೆಬ್‌ಸೈಟ್ … More

ಎಸ್‌ಬಿಐ ಸ್ಪೇಷಲಿಸ್ಟ್‌ ಕೇಡರ್‌ ಆಫೀಸರ್‌(SO) ನೇಮಕ; 1146 ಹುದ್ದೆಗಳು ಖಾಲಿ…

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ(SBI)ದಲ್ಲಿ ವಿವಿಧ ಸ್ಪೇಷಲಿಸ್ಟ್‌ ಕೇಡರ್‌ ಆಫೀಸರ್‌ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿಪಿ ವೇಲ್ತ್‌(SRM), ಎವಿಪಿ ವೇಲ್ತ್‌(RM), ಕಸ್ಟಮರ್‌ ರಿಲೇಷನ್‌ಶಿಪ್‌ ಎಕ್ಸಿಕ್ಯೂಟಿವ್‌ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಒಟ್ಟು 1146 ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಪದವೀಧರರು ಜ.10ರೊಳಗೆ ಬ್ಯಾಂಕಿನ ಅಧಿಕೃತ ಜಾಲತಾಣದ ಲಿಂಕ್‌ https://recruitment.sbi.bank.in/crpd-sco-2025-26-17/applyಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ … More

SSC ಜಿಡಿ, ಎಂಟಿಎಸ್‌ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗವು 2026ನೇ ಸಾಲಿನಲ್ಲಿ ನಡೆಸಲಿರುವ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಶನಿವಾರ ಬಿಡುಗಡೆಗೊಳಿಸಿದೆ. ಬಹು-ಕಾರ್ಯ ಸಿಬ್ಬಂದಿ(MTS) ಮತ್ತು ಹವಾಲ್ದಾರ್ ಹುದ್ದೆಗಳಿಗೆ ಸಂಬಂಧಿಸಿದ ಪರೀಕ್ಷೆಯು ಫೆ.04 ರಂದು ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(CAPFs), ಎಸ್‌ಎಸ್‌ಎಫ್‌ನಲ್ಲಿನ ಕಾನ್ಸ್‌ಟೇಬಲ್(GD) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿನ ರೈಫಲ್‌ಮನ್(GD) ಹುದ್ದೆಗಳ ಭರ್ತಿಗಾಗಿ ಫೆ.23ರಂದು ಪರೀಕ್ಷೆ ನಡೆಯಲಿವೆ ಎಂದು ಆಯೋಗ ಹೊರಡಿಸಿದ ಪ್ರಕಟಣೆ ತಿಳಿಸಿದೆ. ಸದರಿ ಪರೀಕ್ಷೆಗಳ ವೇಳಾಪಟ್ಟಿಯನ್ನು SSC ಅಧಿಕೃತ ವೆಬ್ಸೈಟ್ https://ssc.gov.in/ನಲ್ಲಿ ಬಿಡುಗಡೆಯಾಗಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವೇಳಾಪಟ್ಟಿಯನ್ನು … More

ಫೆಡರಲ್ ಬ್ಯಾಂಕಿನಲ್ಲಿ ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಉದ್ಯೋಗಾವಕಾಶ

ಖಾಸಗಿ ವಲಯದ ಪ್ರಮುಖ ಬ್ಯಾಂಕಾಗಿರುವ ಫೆಡರಲ್ ಬ್ಯಾಂಕ್(Federal Bank)ನಲ್ಲಿ ಆಫೀಸ್ ಅಸಿಸ್ಟೆಂಟ್ ಹುದ್ದೆಗಳ ನೇಮಕಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿನ ಅಧಿಸೂಚಿತ ಶಾಖೆಗಳು/ಕಚೇರಿಗಳಿಗೆ 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಜ.08ರೊಳಗೆ ಫೆಡರಲ್ ಬ್ಯಾಂಕ್ ಅಧಿಕೃತ ಜಾಲತಾಣ https://federalbankcareers.zappyhire.com/apply ಕ್ಕೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ … More

ನೌಕಾಪಡೆಯಲ್ಲಿ ಕಮಿಷನ್ಡ್ ಆಫೀಸರ್ ಹುದ್ದೆಗಳ ನೇಮಕ

ಭಾರತೀಯ ನೌಕಾಪಡೆಯು 2026ರ ಜುಲೈ ಮಾಹೆಯ 10+2 ಬಿ.ಟೆಕ್ ಕೆಡೆಟ್ ಪ್ರವೇಶ ಯೋಜನೆಯಡಿ ಕಮಿಷನ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಗೊಳಿಸಿದೆ. ಕೇರಳದ ಎಜಿಮಲದ ಭಾರತೀಯ ನೌಕಾಪಡೆ ಅಕಾಡೆಮಿಯ ಕಾರ್ಯನಿರ್ವಾಹಕ ಮತ್ತು ತಾಂತ್ರಿಕ ಶಾಖೆಗೆ ಅವಿವಾಹಿತ 37 ಪುರುಷ ಅಭ್ಯರ್ಥಿಗಳನ್ನು ಹಾಗೂ 07 ಮಹಿಳಾ ಅಭ್ಯರ್ಥಿಗಳು ಸೇರಿದಂತೆ 44 ಸ್ಥಾನಗಳನ್ನು ಶಾಶ್ವತ ಕಮಿಷನ್ಡ್ ಆಫೀಸರ್ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತರು ಜ.19ರೊಳಗೆ ಭಾರತೀಯ ನೌಕಾಪಡೆಯ ಅಧಿಕೃತ ವೆಬ್ಸೈಟ್ … More

ಕರ್ನಾಟಕ ಆದಾಯ ತೆರಿಗೆ ಇಲಾಖೆಯಲ್ಲಿ ಉದ್ಯೋಗ; ಅರ್ಜಿ ಹೀಗೆ ಸಲ್ಲಿಸಿ…

ಕರ್ನಾಟಕ ಮತ್ತು ಗೋವಾ ಪ್ರದೇಶದ ಆದಾಯ ತೆರಿಗೆ ಇಲಾಖೆಯು ಕೇಂದ್ರ ನೇರ ತೆರಿಗೆ ಮಂಡಳಿಯ (CBDT) ಯುವ ವೃತ್ತಿಪರ ಯೋಜನೆಯಡಿ ಯುವ ವೃತ್ತಿಪರರ ಭರ್ತಿಗಾಗಿ ಬೆಂಗಳೂರು ಪ್ರಧಾನ ಮುಖ್ಯ ಆದಾಯ ತೆರಿಗೆ ಆಯುಕ್ತರ ಕಚೇರಿ ಅಧಿಸೂಚನೆ ಹೊರಡಿಸಿದೆ. ಒಟ್ಟು 03 ಯುವ ವೃತ್ತಿಪರ(Young Professional) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಒಪ್ಪಂದದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಅಧಿಕೃತ ಜಾಲತಾಣದಲ್ಲಿ ಅರ್ಜಿ ನಮೂನೆಯನ್ನು ಪಡೆದು ತುಂಬಿ ಇ-ಮೇಲ್‌ ವಿಳಾಸ benqaluru.vos@incometax.qov.inಕ್ಕೆ … More

ಕೆಇಎ ಗ್ರೂಪ್‌ ಸಿ ಪರೀಕ್ಷೆ; ತಾತ್ಕಾಲಿಕ ಫಲಿತಾಂಶ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆಯ ಕ.ಕ ವೃಂದದ ಗ್ರೂಪ್‌ ಸಿ ಹುದ್ದೆಗಳ ಭರ್ತಿಗಾಗಿ ಡಿ.20 ರಿಂದ ಡಿ.22ರವೆರೆಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ತಾತ್ಕಾಲಿಕ ಫಲಿತಾಂಶವನ್ನು ಮಂಗಳವಾರ ಪ್ರಕಟಿಸಿದೆ. ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಫಲಿತಾಂಶವನ್ನು https://cetonline.karnataka.gov.in/vaoresult/hkrec2025.aspxನಲ್ಲಿ ಬಿಡುಗಡೆಗೊಳಿಸಲಾಗಿದೆ. ಸದರಿ ಫಲಿತಾಂಶಕ್ಕೆ ಜ.1ರ ಮಧ್ಯಾಹ್ನ 12ರೊಳಗೆ https://forms.gle/eHjMwSMML874KaUG9ನ ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕೆಇಎ ಹೊರಡಿಸಿದ ಪ್ರಕಟಣೆ ತಿಳಿಸಿದೆ. KEA KK Various Posts Provisional Result 2025 Link … More

BELನಲ್ಲಿ ಟ್ರೈನಿ ಎಂಜಿನಿಯರ್/ಆಫೀಸರ್-I ಹುದ್ದೆಗಳ ಭರ್ತಿ

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ತನ್ನ ಘಾಜಿಯಾಬಾದ್ ಘಟಕದಲ್ಲಿ ಟ್ರೈನಿ ಎಂಜಿನಿಯರ್, ಆಫೀಸರ್-I ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ವಿವಿಧ ವಿಭಾಗಗಳಲ್ಲಿ 117 ಟ್ರೈನಿ ಎಂಜಿನಿಯರ್ ಹಾಗೂ 02 ಟ್ರೈನಿ ಆಫೀಸರ್-I ಸೇರಿದಂತೆ ಒಟ್ಟು 119 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲಿ ಜ.09 ಕೊನೆಯ ದಿನವಾಗಿದೆ. ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು BEL ನ ಅಧಿಕೃತ ವೆಬ್ಸೈಟ್ https://coecmamsupport.com/bel/scanqrಗೆ ಭೇಟಿ … More