ಜಂಟಿ CSIR UGC NET ಡಿಸೆಂಬರ್ 2025ರ ಕೀ ಉತ್ತರ ಪ್ರಕಟ

2025ರ ಡಿಸೆಂಬರ್ ಮಾಹೆಯ ಜಂಟಿ CSIR UGC NET ಕಂಪ್ಯೂಟರ್ ಆಧಾರಿತ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರವನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಅಧಿಕೃತವಾಗಿ ಮಂಗಳವಾರ ಪ್ರಕಟಿಸಿದೆ. ಪರೀಕ್ಷೆಯನ್ನು ಡಿ.18ರಂದು ಭಾರತದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು.ಒಟ್ಟು 2,12,552 ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಸಂಸ್ಥೆ ತಿಳಿಸಿದೆ. ಇದೀಗ ಸದರಿ ಪರೀಕ್ಷೆಯ ಕೀ ಉತ್ತರವನ್ನು CISR ಅಧಿಕೃತ ಜಾಲತಾಣ https://csirnet.nta.nic.in/ದಲ್ಲಿ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಲಾಗಿನ್‌ ವಿವರಗಳನ್ನು ಬಳಸಿಕೊಂಡು ಕೀ ಉತ್ತರಗಳನ್ನು ಪರಿಶೀಲನೆ … More

ಆಧಾರ್ ಕೌಶಲ್ ವಿದ್ಯಾರ್ಥಿವೇತನ 2025-26

ಆಧಾರ್ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (AHFL)ವತಿಯಿಂದ 2025-26ನೇ ಸಾಲಿಗೆ ಆಧಾರ್ ಕೌಶಲ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ಅಥವಾ ವೃತ್ತಿಪರ ಪದವಿ ಕೋರ್ಸ್‌ ಅಧ್ಯಯನ ಮಾಡುತ್ತಿರುವ ದೈಹಿಕ ವಿಕಲಚೇತನ ವಿದ್ಯಾರ್ಥಿಗಳಿಗೆ ಸಾಮಾಜಿಕ–ಆರ್ಥಿಕ ಪರಿಸ್ಥಿತಿ ಯಾವುದೇ ಇರಲಿ, ಎಲ್ಲರಿಗೂ ಸಮಾನ ಶಿಕ್ಷಣಾವಕಾಶಗಳನ್ನು ಒದಗಿಸುವ ಗುರಿ ಹೊಂದಿದೆ. ಅರ್ಹರಿಗೆ ₹10,000 ರಿಂದ ₹50,000 ರವರೆಗೆ ವಿದ್ಯಾರ್ಥಿವೇತನ ಸಿಗಲಿದೆ. ವಿದ್ಯಾರ್ಥಿಗಳು ಜ.13ರೊಳಗೆ http://www.b4s.in/knah/AKSP2ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಬೇಕಾದ ಅರ್ಹತೆಗಳೇನು.? • ಭಾರತದ ಎಲ್ಲಾ ಪ್ರದೇಶಗಳ ವಿದ್ಯಾರ್ಥಿಗಳು … More

ಮೆಕ್ಯಾನಿಕ್‌ಗಳ ಮಕ್ಕಳಿಗೆ ವಾರ್ಷಿಕ 6000ರೂ. ವಿದ್ಯಾರ್ಥಿವೇತನ

2025-26ನೇ ಸಾಲಿಗೆ ಮಹೀಂದ್ರ ಬಿಗ್ ಬಾಸ್ ನಯೀ ಪೆಹಚಾನ್ ವಿದ್ಯಾರ್ಥಿವೇತನಕ್ಕೆ ಮಹೀಂದ್ರಾ ಮತ್ತು ಮಹೀಂದ್ರಾ ಲಿಮಿಟೆಡ್‌ ಸಂಸ್ಥೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವತಂತ್ರೋದ್ಯೋಗಿ ಟ್ರಾಕ್ಟರ್ ಮೆಕ್ಯಾನಿಕ್‌ಗಳ ಮಕ್ಕಳ ಶೈಕ್ಷಣಿಕ ಪ್ರಮಾಣವನ್ನು ಬೆಂಬಲಿಸಲು ವಾರ್ಷಿಕವಾಗಿ 6,000 ರೂ.ಗಳ ವಿದ್ಯಾರ್ಥಿವೇತನ ನೀಡುವ ಮೂಲಕ ಅವರನ್ನು ಸಬಲೀಕರಣಗೊಳಿಸಲು ವಿನ್ಯಾಸಗೊಳಿಸಲಾದ ಉಪಕ್ರಮವಾಗಿದೆ. ಅರ್ಹ ವಿದ್ಯಾರ್ಥಿಗಳು ಜ.15ರೊಳಗೆ http://www.b4s.in/knah/MAMF1ನ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ: ಬೇಕಾದ ದಾಖಲೆಗಳು → ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ→ ಅರ್ಜಿದಾರರ ಗುರುತಿನ ಪುರಾವೆ (PAN, … More

ಪಿಎಚ್.ಡಿ ಅಭ್ಯರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ನೀಡಲು ಅರ್ಜಿ ಆಹ್ವಾನಿಸಿದೆ. ರಾಜ್ಯದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಹಾಗೂ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-I, II(ಎ), III(ಎ) ಹಾಗೂ III(ಬಿ)ಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಮಾಹೆಯಾನ 10,000ರೂ. ವರೆಗೆ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ನೀಡಲಾಗುತ್ತದೆ. ಸದರಿ ಯೋಜನೆಯಡಿ ಸೌಲಭ್ಯವನ್ನು ಪಡೆಯಲು … More

IOCLನಲ್ಲಿ 501 ಅಭ್ಯರ್ಥಿಗಳಿಗೆ ‘ಅಪ್ರೆಂಟಿಸ್‌ಶಿಪ್‌’

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)ನ ಮಾರ್ಕೆಟಿಂಗ್ ವಿಭಾಗದಲ್ಲಿ 1961ರ ಅಪ್ರೆಂಟಿಸ್‌ ಕಾಯ್ದೆಯಡಿ ವಿವಿಧ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಹಾಗೂ ಗ್ರಾಜುಯೇಟ್ ಅಪ್ರೆಂಟಿಸ್‌ ಸೇರಿದಂತೆ 501 ಅಭ್ಯರ್ಥಿಗಳಿಗೆ ತರಬೇತಿ ನೀಡಲಿದೆ. ಅರ್ಜಿ ಸಲ್ಲಿಕೆಗೆ ಜ.12 ಕೊನೆಯ ದಿನವಾಗಿದೆ. ಆಸಕ್ತ ಐಟಿಐ ಅಭ್ಯರ್ಥಿಗಳು https://www.apprenticeshipindia.gov.in/ಗೆ ಹಾಗೂ ಡಿಪ್ಲೊಮಾ, ಪದವೀಧರ ಅಭ್ಯರ್ಥಿಗಳು https://nats.education.gov.in/ಗೆ ಭೇಟಿ ನೀಡಿ ಅರ್ಜಿ ಸಲ್ಲಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ … More

ಗಡಿ ಭದ್ರತಾ ಪಡೆ(BSF)ಯಲ್ಲಿ ಕಾನ್‌ಸ್ಟೇಬಲ್ (GD) ಹುದ್ದೆಗಳ ಭರ್ತಿ

ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದಡಿ ಬರುವ ಗಡಿ ಭದ್ರತಾ ಪಡೆ(BSF)ಯಲ್ಲಿ ಕ್ರೀಡಾ ಕೋಟಾದಡಿ 549 ಕಾನ್‌ಸ್ಟೇಬಲ್ (ಸಾಮಾನ್ಯ ಕರ್ತವ್ಯ) ಹುದ್ದೆಗಳ ನೇಮಕಾತಿಗಾಗಿ ಬಿಎಸ್‌ಎಫ್ ನೇಮಕಾತಿ ಮಂಡಳಿ ಅರ್ಜಿ ಆಹ್ವಾನಿಸಿದೆ. 277 ಪುರುಷ ಸ್ಥಾನಗಳು ಹಾಗೂ 272 ಮಹಿಳಾ ಸ್ಥಾನಗಳಿಗೆ ನಿಗದಿತ ಕ್ರೀಡೆ/ಆಟಗಳ ವಿಭಾಗಗಳಲ್ಲಿ ಸಾಧನೆಗೈದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿರುವವರು ಜನವರಿ 15 ರೊಳಗೆ BSF ಅಧಿಕೃತ ವೆಬ್ಸೈಟ್ https://rectt.bsf.gov.in/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ … More

ಪಂಜಾಬ್ ನ್ಯಾಷನಲ್ ಬ್ಯಾಂಕ್ LBO ಲಿಖಿತ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಪಂಜಾಬ್ ನ್ಯಾಷನಲ್ ಬ್ಯಾಂಕಿನ ಸ್ಥಳೀಯ ಬ್ಯಾಂಕ್ ಅಧಿಕಾರಿ(LBO) ಹುದ್ದೆಗಳ ಭರ್ತಿಗಾಗಿ ಜ.4ರಂದು ನಡೆಯಲಿರುವ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(IBPS) ಶುಕ್ರವಾರ ಅಧಿಕೃತವಾಗಿ ಬಿಡುಗಡೆಗೊಳಿಸಿದೆ. ನ.03 ಅಧಿಸೂಚಿತ 750 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಕ್ಕಾಗಿ ಮೊದಲ ಹಂತದಲ್ಲಿ ನಡೆಸಲಾಗುವ ಆನ್‌ಲೈನ್‌ ಲಿಖಿತ ಪರೀಕ್ಷೆ 2026ರ ಜನವರಿ 04 (ಭಾನುವಾರ)ರಂದು ದೇಶದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನು IBPS ಅಧಿಕೃತ ಜಾಲತಾಣದ ಲಿಂಕ್‌ https://ibpsreg.ibps.in/pnboct25/oecla_dec25/login.php?appid=d895fc056a5b47a5444ca97a9d50fd51ನಲ್ಲಿ ಅಭ್ಯರ್ಥಿಗಳು … More

ಕೆಪಿಸಿಎಲ್ ಮರು ಪರೀಕ್ಷೆಯ ವೇಳಾಪಟ್ಟಿ, ಬೆಲ್ ಸಮಯ ಪ್ರಕಟ

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ(ಕೆಪಿಸಿಎಲ್)ದಲ್ಲಿನ ವಿವಿಧ ಹುದ್ದೆಗಳ ಭರ್ತಿಗಾಗಿ ನಡೆಸಲಿರುವ ಮರು ಪರೀಕ್ಷೆ ಮತ್ತು ಕಡ್ಡಾಯ ಕನ್ನಡ ಪರೀಕ್ಷೆಯ ವೇಳಾಪಟ್ಟಿ ಹಾಗೂ ಬೆಲ್ ಸಮಯಗಳ ವಿವರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಬಿಡುಗಡೆಗೊಳಿಸಿದೆ. ಕೆಪಿಸಿಎಲ್‌ನ ಎಇ, ಜೆಇ (ವಿವಿಧ ವಿಭಾಗಗಳಲ್ಲಿನ), ಕೆಮಿಸ್ಟ್ ಮತ್ತು ಕೆಮಿಕಲ್ ಸೂಪರ್ ವೈಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಲಾಗುವ (ವಿವಿಧ ವಿಷಯಗಳ) ಮರು ಪರೀಕ್ಷೆ ಡಿಸೆಂಬರ್ 27 ಹಾಗೂ 28 ರಂದು ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಪರೀಕ್ಷೆಯ ವೇಳಾಪಟ್ಟಿ ಹಾಗೂ … More

ಕೆಇಎ ಕೆಎಸ್‌ಡಿಎಲ್‌ ಮತ್ತು ಕೃಷಿ ಮಾರಾಟ ಇಲಾಖೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಕಿರಿಯ ಅಧಿಕಾರಿ (ಉತ್ಪಾದನೆ & ನಿರ್ವಹಣೆ), ಕಿರಿಯ ಅಧಿಕಾರಿ (ಸಾಮಾಗ್ರಿ & ಉಗ್ರಾಣ) ಹಾಗೂ ಕೃಷಿ ಮಾರಾಟ ಇಲಾಖೆಯ ಮಾರುಕಟ್ಟೆ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ. 2026ರ ಜನವರಿ 18ರಂದು ಪರೀಕ್ಷೆ ನಡೆಯಲಿದೆ. ಕೆ.ಎಸ್‌.ಡಿ.ಎಲ್‌ನ ಕಿರಿಯ ಅಧಿಕಾರಿ (ಉತ್ಪಾದನೆ & ನಿರ್ವಹಣೆ), ಕಿರಿಯ ಅಧಿಕಾರಿ (ಸಾಮಾಗ್ರಿ & ಉಗ್ರಾಣ) ಹುದ್ದೆಗಳಿಗೆ ಸಂಬಂಧಿಸಿದಂತೆ ನಿರ್ದಿಷ್ಟ ಪತ್ರಿಕೆ-2 ಅನ್ನು ಬೆಳಗ್ಗೆ 10:30 ರಿಂದ … More

ಹಿಂದೂಸ್ತಾನ್ ಶಿಪ್‌ಯಾರ್ಡ್(HSL)ನಲ್ಲಿ ಉದ್ಯೋಗ

ರಕ್ಷಣಾ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರವರ್ತಕ ಹಡಗು ನಿರ್ಮಾಣ ಮತ್ತು ಹಡಗು ದುರಸ್ತಿ ಯಾರ್ಡ್ ಆಗಿರುವ ಹಿಂದೂಸ್ತಾನ್ ಶಿಪ್‌ಯಾರ್ಡ್ ಲಿಮಿಟೆಡ್ (HSL)ನಲ್ಲಿ ವಿವಿಧ ವೃಂದದ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 11 ಸ್ಥಾನಗಳಿಗೆ ಖಾಲಿ ಇದ್ದು, ಹುದ್ದೆಗಳಿಗೆ ಅನುಗುಣವಾಗಿ ಖಾಯಂ ನೇಮಕಾತಿ ಆಧಾರ, ನಿಶ್ಚಿತ ಅವಧಿಯ ಒಪ್ಪಂದ ಆಧಾರ ಮತ್ತು ಅರೆಕಾಲಿಕ ಆಧಾರದ ಮೇಲೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜ.13ರೊಳಗೆ HSL ಅಧಿಕೃತ ಜಾಲತಾಣ … More