SSC ದೆಹಲಿ ಪೊಲೀಸ್ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗವು 2025-26ನೇ ಸಾಲಿನ ದೆಹಲಿ ಪೊಲೀಸ್ ಪರೀಕ್ಷೆಯ ಪರೀಕ್ಷಾ ವೇಳಾಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. ಪ್ರತಿ ವರ್ಷ ಸಿಬ್ಬಂದಿ ಆಯ್ಕೆ ಆಯೋಗವು ನಡೆಸುವ ನೇಮಕಾತಿ ಪರೀಕ್ಷೆಗಳಿಗೆ ಲಕ್ಷಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಿ ಪರೀಕ್ಷೆಯನ್ನು ಬರೆಯುತ್ತಾರೆ. ಈ ವರ್ಷದ 2025ರ ದೆಹಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗಾಗಿ ನಡೆಸಲಾಗುವ ಪರೀಕ್ಷೆಯ ದಿನಾಂಕಗಳನ್ನು ನಿಗದಿ ಪಡಿಸಿಲಾಗಿದ್ದು ಅಧಿಕೃತ ವೇಳಾಪಟ್ಟಿಯನ್ನು SSC ವೆಬ್ಸೈಟ್ https://ssc.gov.in/ನಲ್ಲಿ ಬಿಡುಗಡೆಯಾಗಿದೆ. ಸದರಿ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವೇಳಾಪಟ್ಟಿಯನ್ನು ಪರಿಶೀಲಿಸಬಹುದು. 2025ರ ದೆಹಲಿ … More

ಕರ್ನಾಟಕ ವಿದ್ಯುತ್‌ ನಿಗಮ(KPCL)ದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತದಲ್ಲಿ ಕಲ್ಯಾಣ ಕರ್ನಾಟಕ ಮತ್ತು ಮಿಕ್ಕುಳಿದ ವೃಂದದಲ್ಲಿ ಖಾಲಿ ಇರುವ ವಿವಿಧ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ.ಜಾತಿ ಮತ್ತು ಪ.ಪಂಗಡ ವರ್ಗಕ್ಕೆ ಮೀಸಲಾಗಿದ್ದ, ಭರ್ತಿಯಾಗದ ಖಾಲಿ ಹುದ್ದೆಗಳಿವು. ಫ್ಯಾಕ್ಟರಿ ಮೆಡಿಕಲ್‌ ಆಫೀಸರ್‌(02), ಮೆಡಿಕಲ್‌ ಆಫೀಸರ್‌(01), ಅಂಕೌಟ್ಸ್‌ ಆಫೀಸರ್‌(01), ಬಾಯ್ಲರ್‌ ಅಟೆಂಡೆಂಟ್‌ ಗ್ರೇಡ್‌-2 ಸೇರಿದಂತೆ ಒಟ್ಟು 5 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಎಸ್ಸೆಸ್ಸೆಲ್ಸಿ, ವೈದ್ಯಕೀಯ ಸ್ನಾತಕೋತ್ತರ ಪದವೀಧರರು, ಸಿಎ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು https://kpcl.karnataka.gov.in/ನಲ್ಲಿ ಅರ್ಜಿ … More

ಕೆಸೆಟ್‌ 2025ರ ಮೂಲ ದಾಖಲಾತಿ ಪರಿಶೀಲನೆ ವೇಳಾಪಟ್ಟಿ ಬಿಡುಗಡೆ

ಕರ್ನಾಟಕ ಸಹಾಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ 2025ರಲ್ಲಿ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆಗಾಗಿ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ(ನ.27) ಬಿಡುಗಡೆ ಮಾಡಿದೆ. ನ.29 ರಿಂದ ಡಿ.06ರವರೆಗೆ ದಿನನಿತ್ಯ ಎರಡು ಪಾಳೆಯಲ್ಲಿ ದಾಖಲಾತಿ ಪರಿಶೀಲನೆ ನಡೆಯಲಿದ್ದು, ವಿಷಯವಾರು ಪಟ್ಟಿಯಲ್ಲಿರುವ ಅನುಕ್ರಮ ಸಂಖ್ಯೆಯನ್ನು ಆಧರಿಸಿ ನಿಗದಿತ ದಿನಾಂಕ ಮತ್ತು ಸಮಯಕ್ಕೆ ಸರಿಯಾಗಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಲು ಅಭ್ಯರ್ಥಿಗಳಿಗೆ ಪ್ರಾಧಿಕಾರ ಹೊರಡಿಸಿದ ಪ್ರಕಟಣೆ ತಿಳಿಸಿದೆ. ಸ್ನಾತಕೋತ್ತರ ಪದವಿ ಪೂರ್ಣಗೊಂಡಿರುವ ಎಲ್ಲಾ ವರ್ಷಗಳ/ಸೆಮಿಸ್ಟರ್‌ಗಳ ಅಂಕ ಪಟ್ಟಿಗಳನ್ನು ಹೊಂದಿರುವ ಅಭ್ಯರ್ಥಿಗಳು … More

ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ(CTET Feb 2026) ನೋಂದಣಿ ಆರಂಭ

2026ರ ಕೇಂದ್ರೀಯ ಶಿಕ್ಷಕರ ಅರ್ಹತಾ ಪರೀಕ್ಷೆ(CTET)ಯ 21ನೇ ಆವೃತ್ತಿಯ ನೋಂದಣಿಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ನ.27ರಿಂದ ಪ್ರಾರಂಭಿಸಿದೆ. 2026ರ ಫೆ.08 ರಂದು ಪರೀಕ್ಷೆ ನಡೆಯಲಿದೆ. ಕೇಂದ್ರೀಯ ವಿದ್ಯಾಲಯಗಳು, ನವೋದಯ ವಿದ್ಯಾಲಯಗಳಂತಹ ಕೇಂದ್ರ ಸರ್ಕಾರಿ ಶಾಲೆಗಳಲ್ಲಿ ಬೋಧನಾ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹತೆ ಹೊಂದಲು ನಡೆಸುವ ಪರೀಕ್ಷೆಯಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಲು ಪೂರಕವಾರದ ಮಾರ್ಗವನ್ನು ನೀಡುತ್ತದೆ. ಪರೀಕ್ಷೆಗೆ ಹಾಜರಾಗ ಬಯಸುವ ಆಸಕ್ತ ಮತ್ತು ಅರ್ಹ ಆಕಾಂಕ್ಷಿಗಳು CTET ಅಧಿಕೃತ ಜಾಲತಾಣದ ಲಿಂಕ್‌ https://ctet.nic.in/apply-for-ctet-feb2026/ಗೆ ಭೇಟಿ ನೀಡಿ. ಡಿಸೆಂಬರ್ … More

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಹಾಯಧನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ಸಾಮಾನ್ಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಸಂಘ-ಸಂಸ್ಥೆಗಳಿಗೆ ಮತ್ತು ಕಲಾವಿದರಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ವಿವಿಧ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ, ಕಲಾವಿದರಿಗೆ ಹಾಗೂ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲಾಗುತ್ತದೆ. ಸದರಿ ಯೋಜನೆಯಡಿ ಅರ್ಜಿ ಸಲ್ಲಿಸಲು … More

ಮೈ.ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಪೌರಕಾರ್ಮಿಕರ ಹುದ್ದೆಗಳ ನೇರ ನೇಮಕಾತಿ

ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿಗಾಗಿ ಮೈಸೂರು ಜಿಲ್ಲಾಧಿಕಾರಿಗಳ ಕಾರ್ಯಲಯದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 46 ಪೌರಕಾರ್ಮಿಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಡಿ.30ರೊಳಗೆ ಜಿಲ್ಲೆಯ ಆಯಾ ನಗರ ಸಂಸ್ಥೆಗಳಲ್ಲಿ ಅರ್ಜಿ ನಮೂನೆ ಪಡೆದು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ … More

ಆರ್‌ಆರ್‌ಬಿ NTPC ಯುಜಿ ಕಂಪ್ಯೂಟರ್ ಆಧಾರಿತ ಪರೀಕ್ಷೆ 2ರ ವೇಳಾಪಟ್ಟಿ ಪ್ರಕಟ

ತಾಂತ್ರಿಕೇತರ ಜನಪ್ರಿಯ ವರ್ಗಗಳ (NTPC) ಪದವಿಪೂರ್ವ ಹಂತದ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆ-2ರ ತಾತ್ಕಾಲಿಕ ವೇಳಾಪಟ್ಟಿಯನ್ನು ರೈಲ್ವೆ ನೇಮಕಾತಿ ಮಂಡಳಿಯು ಬುಧವಾರ ಬಿಡುಗಡೆ ಮಾಡಿದೆ. ಒಟ್ಟು 3445 ಹುದ್ದೆಗಳ ಭರ್ತಿಗಾಗಿ ನಡೆಸಲಾಗಿದ್ದ ಮೊದಲ ಹಂತ ಕಂಪ್ಯೂಟರ್ ಆಧಾರಿತ ಪರೀಕ್ಷೆ -1 ರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗಾಗಿ ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ-2 ಅನ್ನು ಡಿಸೆಂಬರ್ 20 ರಂದು ನಡೆಸಲು ನಿರ್ಧರಿಸಲಾಗಿದ್ದು, ಸದರಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಆರ್.ಆರ್.ಬಿಯ ಎಲ್ಲಾ ಪ್ರಾದೇಶಿಕ ಅಧಿಕೃತ ಜಾಲತಾಣ … More

ಸಿಂದಗಿ ಪಟ್ಟಣ ಸಹಕಾರಿ ಬ್ಯಾಂಕಿನಲ್ಲಿ ಕಿರಿಯ ಸಹಾಯಕ, ಜವಾನ ಹುದ್ದೆಗಳ ನೇಮಕಾತಿ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ದಿ ಸಿಂದಗಿ ಪಟ್ಟಣ ಸಹಕಾರಿ ಬ್ಯಾಂಕ್‌ನಲ್ಲಿ ಕಿರಿಯ ಸಹಾಯಕ ಹಾಗೂ ಜವಾನ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಕಿರಿಯ ಸಹಾಯಕ 06 ಹುದ್ದೆಗಳು ಹಾಗೂ ಜವಾನ 04 ಹುದ್ದೆ ಸೇರಿದಂತೆ ಒಟ್ಟು 10 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.20ರೊಳಗೆ ಸಿಂದಗಿ ಬ್ಯಾಂಕ್ ಅಧಿಕೃತ ವೆಬ್‌ಸೈಟ್ https://sindagiurbanbank.buffersoft.com/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ … More

ದೂರದರ್ಶನ, ಆಕಾಶವಾಣಿಯಲ್ಲಿ ಕಾಪಿರೈಟರ್ ಹುದ್ದೆಗಳ ನೇಮಕಾತಿ

ಭಾರತದ ಸಾರ್ವಜನಿಕ ಸೇವಾ ಪ್ರಸಾರ ಕೇಂದ್ರವಾಗಿರುವ ಪ್ರಸಾರ ಭಾರತೀಯು ದೂರದರ್ಶನದ ಪ್ರಾದೇಶಿಕ ಸುದ್ದಿ ಘಟಕ ಮತ್ತು ಆಕಾಶವಾಣಿಯಲ್ಲಿ ಕಾಪಿರೈಟರ್ (ನಕಲು ಸಂಪಾದಕ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಪ್ರಸ್ತುತ ಖಾಲಿ ಇರುವ ಒಟ್ಟು 29 ಕಾಪಿರೈಟರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪ್ರಸಾರ ಭಾರತಿ ಆವೇದನ್ ಅಧಿಕೃತ ಪೋರ್ಟಲ್ https://avedan.prasarbharti.org/ ಗೆ ಭೇಟಿ ನೀಡಿ. ಡಿ.03 ರೊಳಗೆ … More

ಬಿ.ಇಡಿ ಪ್ರವೇಶಾತಿ 2025: ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

2025-26ನೇ ಸಾಲಿನ ಬಿ.ಇಡಿ ಕೋರ್ಸ್‌ ಪ್ರವೇಶಾತಿಗೆ ಸಂಬಂಧಿಸಿದ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಶಾಲಾ ಶಿಕ್ಷಣ ಇಲಾಖೆಯು ಮಂಗಳವಾರ ಪ್ರಕಟಿಸಿದೆ. ಅರ್ಜಿ ಸಲ್ಲಿಕೆಗೆ ಅ.3 ರಿಂದ ನ.3ವರೆಗೆ ಅವಕಾಶ ನೀಡಲಾಗಿತ್ತು. ಅಭ್ಯರ್ಥಿಗಳು ಆಯ್ಕೆ ಮಾಡಿಕೊಂಡಿರುವ ಕಾಲೇಜುಗಳನ್ವಯ ರೋಸ್ಟರ್‌ ಮತ್ತು ಮೆರಿಟ್‌ ಆಧಾರದಲ್ಲಿ ಸೀಟು ಹಂಚಿಕೆ ಪಟ್ಟಿ ತಯಾರಿಸಿ ಇಲಾಖೆಯ ವೆಬ್‌ಸೈಟ್‌ https://sts.karnataka.gov.in/GPSTRHK/ನಲ್ಲಿ ಬಿಡುಗಡೆ ಮಾಡಲಾಗಿದ್ದು, ಹಂಚಿಕೆಯಾದ ಕಾಲೇಜುಗಳಿಗೆ ಸೇರಬಯಸಿದಲ್ಲಿ ತಮ್ಮ ಯೂಸರ್ ಐಡಿ ಮತ್ತು ಪಾಸ್ ವರ್ಡ್‌ ಬಳಸಿ ನ.25 ರಿಂದ ಡಿ.5ರೊಳಗೆ ನಿಗದಿತ ಶುಲ್ಕದ … More