ಗುವಿಸಕಂಪನಿ(GESCOM) ಕಿರಿಯ ಪವರ್‌ಮ್ಯಾನ್‌ ಅಂತಿಮ ಆಯ್ಕೆ ಪಟ್ಟಿ ಪ್ರಕಟ

ಕಲಬುರಗಿ: ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿನ ಕೆಕೆ ಮತ್ತು ಎನ್‌.ಕೆ.ಕೆ ವೃಂದದ ಕಿರಿಯ ಪವರ್‌ಮ್ಯಾನ್‌ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಗುವಿಸಕಂಪನಿ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂ.16 ರಿಂದ ಜೂ.19ರವರೆಗೆ ಅಧಿಸೂಚಿತ ಹುದ್ದೆಗಳಿಗೆ 1:5ರ ಅನುಪಾತದಲ್ಲಿನಡೆಸಲಾದ ಸಹನ ಶಕ್ತಿ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಟ್-ಆಪ್ (Cut-Off) ಅಂಕಗಳೊಂದಿಗೆ ಅಂತರ್ಜಾಲದಲ್ಲಿ ಅ.17ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅ.28ರವರೆಗೆ ಅವಕಾಶ ನೀಡಲಾಗಿತ್ತು. ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಅಭ್ಯರ್ಥಿಗಳ ಅಂತಿಮ … More

ಬೆಂಗಳೂರಿನ ರೈಲ್ ವೀಲ್ ಫ್ಯಾಕ್ಟರಿ(RWF)ಯಲ್ಲಿ ಉದ್ಯೋಗಾವಕಾಶ

ರೈಲ್ವೆ ಸಚಿವಾಲಯದ ಬೆಂಗಳೂರಿನ ರೈಲ್ ವೀಲ್ ಫ್ಯಾಕ್ಟರಿಗೆ ಟ್ಯಾಲೆಂಟ್ ಸ್ಕೌಟಿಂಗ್ ಯೋಜನೆ ಮತ್ತು ಕ್ರೀಡಾಕೋಟಾದಡಿಯಲ್ಲಿ ಕ್ರೀಡಾಪಟುಗಳ ನೇಮಕಾತಿಗಾಗಿ ಆಫ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 20 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು. ಕ್ರಿಕೆಟ್(ಬ್ಯಾಟ್ಸ್‌ಮನ್/ಬೌಲರ್/ಆಲ್-ರೌಂಡರ್/ವಿಕೆಟ್ ಕೀಪರ್), ಹಾಕಿ, ಕಬಡ್ಡಿ, ಫುಟ್ಬಾಲ್, ಚೆಸ್ ನಲ್ಲಿ ಕ್ರೀಡಾ ಸಾಧನೆ ಗೈದ ಪುರುಷ ಕ್ರೀಡಾಪಟು ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿ.01ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ನೇಮಕಾತಿ ಹುದ್ದೆಗಳ … More

ಕೆಸೆಟ್‌ 2025ರ ಪರಿಷ್ಕೃತ ಕೀ ಉತ್ತರ ಪ್ರಕಟ

2025ನೇ ಸಾಲಿನ ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್‌)ಯ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನ.12ರಂದು ಬಿಡುಗಡೆ ಮಾಡಿದೆ. ಕೆಸೆಟ್‌ ಪರೀಕ್ಷೆಯ ನ.2ಕ್ಕೆ ನಡೆಸಲಾಗಿತ್ತು. ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನ.4ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ನ.6ರವರೆಗೆ ಕಾಲಾವಕಾಶ ನೀಡಲಾಗಿತ್ತು. ಈ ಸಮಯದಲ್ಲಿ 26 ವಿಷಯಗಳಿಗೆ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಸಿದ್ದು, ಇವರ ಶಿಪಾರಸ್ಸಿನ ಮೇರೆಗೆ ಪರಿಷ್ಕೃತ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟ್‌ https://cetonline.karnataka.gov.in/kea/kset2025ನಲ್ಲಿ ಪ್ರಕಟಿಸಲಾಗಿದೆ. ಪರಿಸರ ವಿಜ್ಞಾನ, ಗೃಹ ವಿಜ್ಞಾನ, … More

ಉಚಿತ ವೃತ್ತಿಪರ ಸಲಕರಣೆ ಹಾಗೂ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ

ಕೋಲಾರ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೆ ಉಚಿತವಾಗಿ ವೃತ್ತಿಪರ ಸಲಕರಣೆ ಹಾಗೂ ಹೊಲಿಗೆ ಯಂತ್ರ ವಿತರಣೆಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಗ್ರಾಮೀಣ ಕೈಗಾರಿಕೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಜಿಲ್ಲಾ ವಲಯದ ಗ್ರಾಮೀಣ ಪ್ರದೇಶದ ಅನುವಂಶಿಕ ಕುಶಲಕರ್ಮಿಗಳಿಗೆ “ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ” ವಿದ್ಯುತ್‌ ಚಾಲಿತ ಬಡಗಿ ಉಪಕರಣ ಹಾಗೂ ಗಾರೆ, ಕ್ಷೌರಿಕ, ಕುಲುಮೆ, ಕಲ್ಲುಕುಟುಕ ಮತ್ತು ದೋಬಿ ಕಸುಬುಗಳ ಸುಧಾರಿತ ಉಪಕರಣ ಹಾಗೂ … More

ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿ ಶಿಬಿರ

ನಿರುದ್ಯೋಗಿ ಪುರುಷರಿಗಾಗಿ ಉಚಿತ ದ್ವಿಚಕ್ರ ವಾಹನ ರಿಪೇರಿ ಮತ್ತು ಸರ್ವಿಸಿಂಗ್ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ತರಬೇತಿ ಸಂಸ್ಥೆಯಲ್ಲಿ ನ.20 ರಿಂದ 30 ದಿನಗಳ ಕಾಲ ತರಬೇತಿ ಶಿಬಿರ ಆರಂಭವಾಗಲಿದೆ. ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವ, ಆಸಕ್ತಿಯುಳ್ಳ 18 ರಿಂದ 45 ವರ್ಷ ವಯೋಮಾನದ ರಾಜ್ಯದ ಎಲ್ಲಾ … More

ECGC ಲಿಮಿಟೆಡ್‌ನಲ್ಲಿ ಪ್ರೊಬೇಷನರಿ ಆಫೀಸರ್‌ ಹುದ್ದೆಗಳ ನೇಮಕಾತಿ: 1,69,025ರೂ. ಮಾಸಿಕ ವೇತನ

ಭಾರತ ಸರ್ಕಾರದ ಸಾರ್ವಜನಿಕ ಉದ್ಯಮವಾಗಿರುವ ರಫ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಷನ್ ಆಫ್ ಇಂಡಿಯಾ (ECGC) ಲಿಮಿಟೆಡ್‌ನಲ್ಲಿ ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಜನರಲಿಸ್ಟ್ ಮತ್ತು ಸ್ಪೆಷಲಿಸ್ಟ್ ಕೇಡರ್‌ನಲ್ಲಿ ಖಾಲಿ ಇರುವ ಒಟ್ಟು 30 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಡಿ.02ರೊಳಗೆ ECGC ಲಿಮಿಟೆಡ್ ಅಧಿಕೃತ ವೆಬ್ ಸೈಟ್ https://main.ecgc.in/english/ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ … More

SSC JE 2025 Exam Date: ಜೂನಿಯರ್ ಎಂಜಿನಿಯರ್ ಪತ್ರಿಕೆ-I ಪರೀಕ್ಷಾ ದಿನಾಂಕ ಪ್ರಕಟ

ಸಿಬ್ಬಂದಿ ಆಯ್ಕೆ ಆಯೋಗವು 2025ರ ಜೂನಿಯರ್ ಎಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್) ಪರೀಕ್ಷೆ (ಪತ್ರಿಕೆ-I) ರ ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳಿಂದ ಸ್ವಯಂ-ಸ್ಲಾಟ್ ಆಯ್ಕೆಗಾಗಿ ಕಾಲಾವಕಾಶ ನೀಡಲಾಗಿದೆ. ಪ್ರಸ್ತುತ ವರ್ಷದಲ್ಲಿ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಜೂನಿಯರ್ ಎಂಜಿನಿಯರ್‌ (JE) (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟಿಕಲ್) ಒಟ್ಟು 1731 ಹುದ್ದೆಗಳ ನೇಮಕಾತಿಗಾಗಿ ಮೊದಲನೇ ಹಂತದಲ್ಲಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಸದರಿ ನೇಮಕಾತಿಗಾಗಿ … More

ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಕೆ ಪ್ರಾರಂಭ – Free Sewing Machine Scheme 2025-26

2025-26ನೇ ಸಾಲಿನ ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ (Free Power Operated Sewing Machine)ವಿತರಣೆಗಾಗಿ ವಿವಿಧ ಜಿಲ್ಲೆಯ ಗ್ರಾಮೀಣ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. Free Sewing Machine Scheme 2025 in Karnataka ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಗ್ರಾಮಾಂತರ ಪ್ರದೇಶದ ವೃತ್ತಿನಿರತ ಅಭ್ಯರ್ಥಿಗಳು ತಮ್ಮ ಕಸುಬನ್ನು ಮುಂದುವರೆಸಿಕೊಂಡು ಹೋಗಲು ಇಲಾಖಾ ಸೌಲಭ್ಯವನ್ನು ಪಡೆಯಲು ಇಚ್ಛಿಸಿದಲ್ಲಿ, ಅನುಬಂಧದಲ್ಲಿರುವ ಅರ್ಜಿ ಮಾಹಿತಿಯಂತೆ ಸಂಬಂದಪಟ್ಟ ಎಲ್ಲಾ ದಾಖಲಾತಿಗಳೊಂದಿಗೆ ಆನ್ ಲೈನ್ ಮೂಲಕ ಅರ್ಜಿ … More

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(AAI)ದಲ್ಲಿ ಪದವೀಧರ, ಡಿಪ್ಲೊಮಾ ಅಪ್ರೆಂಟಿಸ್‌ ನೇಮಕಾತಿ

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(AAI)ದಲ್ಲಿ ಪ್ರಸಕ್ತ 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ತನ್ನ ವಿವಿಧ ಘಟಕಗಳು ಹಾಗೂ ಕಾರ್ಯಗಾರಗಳಲ್ಲಿ ಖಾಲಿ ಇರುವ ಒಟ್ಟು 20 ಅಪ್ರೆಂಟಿಸ್‌ ಹುದ್ದೆಗಳ(ಪದವೀಧರ ಹಾಗೂ ಡಿಪ್ಲೊಮಾ) ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NATS ಅಧಿಕೃತ ವೆಬ್ ಸೈಟ್ https://nats.education.gov.in/ಗೆ ಭೇಟಿ ನೀಡಿ, ನ.24ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಅಪ್ರೆಂಟಿಸ್‌ ಹುದ್ದೆಗಳ ವಿವರ: ಪದವೀಧರ ಅಪ್ರೆಂಟಿಸ್‌ – 10 … More

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್(BEML)ನಲ್ಲಿ ಜೂ.ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿ

ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತದ ಪ್ರಮುಖ ಬಹು-ತಂತ್ರಜ್ಞಾನ ಕಂಪನಿಯಾಗಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)ನಲ್ಲಿ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 100 ಜೂನಿಯರ್ ಎಕ್ಸಿಕ್ಯೂಟಿವ್ (ಕಾರ್ಯನಿರ್ವಾಹಕರ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನ.12 ರೊಳಗೆ BEMLನ ಅಧಿಕೃತ ಜಾಲತಾಣ https://cbtexam.bemlindia.in/secuRegister_25OF2025ver9/ದ ಮೂಲಕ ಅರ್ಜಿ ಸಲ್ಲಿಸಿ, ನೇರ ಸಂದರ್ಶನಕ್ಕೆ … More