ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಸಲಕರಣೆ ನೀಡಲು ಅರ್ಜಿ ಆಹ್ವಾನ

ಕಲಬುರಗಿ: ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಗ್ರಾಮೀಣ ಪ್ರದೇಶದ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸಲಕರಣೆಗಳ ವಿತರಣೆಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆಯಡಿ ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಕುಶಲಕರ್ಮಿಗಳಿಗೆ ಉಚಿತವಾಗಿ ಬಡಗಿತನ ಹಾಗೂ ಗೌಂಡಿ ವೃತ್ತಿಯ ಉಪಕರಣಗಳನ್ನು ವಿತರಿಸಲಾಗುತ್ತದೆ. ಸದರಿ ಯೋಜನೆಯ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://kalaburagi.nic.in/en/ಗೆ ಭೇಟಿ ನೀಡಿ. ಅ.25 … More

LIVE KSET Hall Ticket 2025: ಕೆಸೆಟ್‌ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

2025ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶುಕ್ರವಾರ(ಅ.24) ಬಿಡುಗಡೆ ಮಾಡಿದೆ. ನವೆಂಬರ್‌ 2 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಕೆಸೆಟ್‌ ಪರೀಕ್ಷೆ ನಡೆಯಲಿದೆ. ಸಾಮಾನ್ಯ ಪತ್ರಿಕೆ ಮತ್ತು ವಿಷಯ ಪತ್ರಿಕೆ ಎಂಬ ಎರಡು ಪತ್ರಿಕೆಯನ್ನೊಳಗೊಂಡ ಪರೀಕ್ಷೆಯಿದಾಗಿದ್ದು, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ https://cetonline.karnataka.gov.in/KEA_EXAM_PORTAL/Forms/Candidates/Loginನ ಮೂಲಕ ಪ್ರವೇಶ ಪತ್ರ ಡೌನ್ಲೋಡ್‌ ಮಾಡಿಕೊಳ್ಳಬಹುದು. ಕೆಸೆಟ್‌ ಹಾಲ್‌ ಟಿಕೆಟ್‌(KSET Hall Ticket 2025) ಡೌನ್ಲೋಡ್‌ ಮಾಡುವುದು ಹೇಗೆ.? … More

ಈಶಾನ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ತರಬೇತಿ; ಅರ್ಜಿ ಸ್ವೀಕಾರ ಪ್ರಾರಂಭ

ಈಶಾನ್ಯ ರೈಲ್ವೆಯಲ್ಲಿ 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿ 1104 ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ರೈಲ್ವೆ ನೇಮಕಾತಿ ಕೋಶ(RRC) ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ವಿವಿಧ ಕಾರ್ಯಾಗಾರ/ಘಟಕಗಳಿಗೆ ಫಿಟ್ಟರ್, ಮೆಕಾನಿಕ್, ವೆಲ್ಡರ್, ಎಲೆಕ್ಟ್ರಿಷಿಯನ್,ಟರ್ನರ್ ಹಾಗೂ ಪೇಂಟರ್ ಸೇರಿದಂತೆ ಇತರೆ ಗೊತ್ತುಪಡಿಸಿದ ಟ್ರೇಡ್‌ಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು ತರಬೇತಿ ನೀಡಲಾಗುತ್ತದೆ. ಅ.16 ರಿಂದ ನ.15ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈಶಾನ್ಯ ರೈಲ್ವೆಯ ಅಧಿಕೃತ ಜಾಲತಾಣ https://apprentice.rrcner.net/next_page.phpಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: … More

ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ 31 ದಿನಗಳ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ್‌ ಬಿ. ಸಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಅವರು, ತರಬೇತಿ ನ.13ರಿಂದ ಪ್ರಾರಂಭವಾಗಲಿದೆ. ಸ್ವಯಂ ಉದ್ಯೋಗಿಗಳಾಗಲು ಆಸಕ್ತಿ ಇರುವ, ಕನ್ನಡ ಓದಲು ಮತ್ತು ಬರೆಯಲು ಬರುವ 18 ರಿಂದ 45 ವರ್ಷ ವಯಸ್ಸಿನ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ … More

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ(KARTET-2025) ನೋಂದಣಿ ಪ್ರಕ್ರಿಯೆ ಪ್ರಾರಂಭ

ಶಾಲಾ ಶಿಕ್ಷಣ ಇಲಾಖೆಯು 2025ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ(KARTET) ನೋಂದಾಯಿಸಿಕೊಳ್ಳಲು ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ರಾಜ್ಯದ ಯಾವುದೇ ಶಾಲೆಗಳಲ್ಲಿ ಪ್ರಾಥಮಿಕ (1 ರಿಂದ 5ನೇ ತರಗತಿ) ಹಾಗೂ ಹಿರಿಯ ಪ್ರಾಥಮಿಕ (6 ರಿಂದ 8ನೇ ತರಗತಿ) ಬೋಧನಾ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹತೆ ಪಡೆಯಲು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗುತ್ತದೆ. ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಸದರಿ KARTET – 2025ಕ್ಕೆ ಅರ್ಜಿ ಸಲ್ಲಿಸಬಯಸುವ ಆಸಕ್ತ ಮತ್ತು ಅರ್ಹ … More

KARTET 2025: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಆರಂಭ

2025ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗಾಗಿ ಶಾಲಾ ಶಿಕ್ಷಣ ಇಲಾಖೆಯು ಶನಿವಾರ ಅಧಿಸೂಚನೆ ಹೊರಡಿಸಿದೆ. 1 ರಿಂದ 8ನೇ ತರಗತಿಯ ಶಿಕ್ಷಕರ ನೇಮಕಾತಿಗಾಗಿ ಕನಿಷ್ಠ ಅರ್ಹತೆ ಹೊಂದಲು ನಡೆಸುವ ಪರೀಕ್ಷೆಯಿದಾಗಿದ್ದು, ರಾಷ್ಟೀಯ ಶಿಕ್ಷಣ ಶಿಕ್ಷಕರ ಪರಿಷತ್‌(ಎನ್.ಸಿ.ಟಿ.ಇ.) ನಿಯಮಗಳ ಪ್ರಕಾರ ಕನಿಷ್ಠ ವಿದ್ಯಾರ್ಹತೆ ಹೊಂದಿರುವವರು ನ.9ರೊಳಗೆ https://schooleducation.karnataka.gov.in/ನ ಮೂಲಕ ನೋಂದಣಿ ಮಾಡಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ವಿಕಾಶ್‌ ಕಿಶೋರ್‌ ಸುರಳ್ಕರ್‌ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಮುಖ್ಯ ದಿನಾಂಕಗಳು: ಕನಿಷ್ಠ ಶೈಕ್ಷಣಿಕ ಅರ್ಹತೆ: 1 ರಿಂದ … More

ಏಕಲವ್ಯ ವಸತಿ ಶಾಲೆಯಲ್ಲಿ ಶಿಕ್ಷಕರು, ಸ್ಟಾಫ್‌ ನರ್ಸ್‌, ವಾರ್ಡನ್, ಲ್ಯಾಬ್ ಅಟೆಂಡೆಂಟ್ ಹುದ್ದೆಗಳ ಬೃಹತ್‌ ಭರ್ತಿ

ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹುದ್ದೆಗಳ ಭರ್ತಿಗಾಗಿ 2025ರ EMRS ಸಿಬ್ಬಂದಿ ಆಯ್ಕೆ ಪರೀಕ್ಷೆ(ಇಎಂಆರ್‌ಎಸ್‌)ಗೆ ಅರ್ಜಿ ಆಹ್ವಾನಿಸಲಾಗಿದೆ. ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಸ್ವಾಯತ್ತ ಸಂಸ್ಥೆಯಾದ ರಾಷ್ಟ್ರೀಯ ಬುಡಕಟ್ಟು ವಿದ್ಯಾರ್ಥಿಗಳ ಶಿಕ್ಷಣ ಸಂಘವು (NESTS) ಏಕಲವ್ಯ ಮಾದರಿ ವಸತಿ ಶಾಲೆ (EMRS)ಯಲ್ಲಿನ ವಿವಿಧ ವೃಂದಗಳಲ್ಲಿ ಖಾಲಿ ಇರುವ (ಪ್ರಾಂಶುಪಾಲರು, ಶಿಕ್ಷಕರು, ಹಾಸ್ಟೆಲ್ ವಾರ್ಡನ್ ಮಹಿಳಾ ಸ್ಟಾಫ್ ನರ್ಸ್, ಅಕೌಂಟೆಂಟ್, ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ (JSA) ಮತ್ತು ಲ್ಯಾಬ್ ಅಟೆಂಡೆಂಟ್) ಸೇರಿದಂತೆ … More

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿ 2025 – ಈಗಲೇ ಅರ್ಜಿ ಸಲ್ಲಿಸಿ

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಲ್ಲಿನ ಸೈಬರ್ ಕ್ರೈಂ ಪೊಲೀಸ್ ಠಾಣೆಗಳಲ್ಲಿ 05 ಡಿಜಿಟಲ್ ಫೋರೆನ್ಸಿಕ್ ವಿಶ್ಲೇಷಕರ (ತಾಂತ್ರಿಕ) ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳನ್ನು 11 ತಿಂಗಳು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಅಕ್ಟೋಬರ್ 29 ರೊಳಗೆ ಆನ್ಲೈನ್ ಅಥವಾ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ … More

ಕೊಡಗು ಜಿಲ್ಲೆಯ ಅಂಗನವಾಡಿಗಳಲ್ಲಿ 215 ಹುದ್ದೆಗಳ ನೇರ ನೇಮಕ; ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸ್‌

ಕೊಡಗು ಜಿಲ್ಲೆಯ ವಿವಿಧ ತಾಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ 215 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ, ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲೂಕುಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 54 ಅಂಗನವಾಡಿ ಕಾರ್ಯಕರ್ತೆ ಹಾಗೂ 161 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 215 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೌರವ ಸೇವೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಸ್ಥಳೀಯ ಮಹಿಳಾ ಅಥವಾ ಲಿಂಗತ್ವ  ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು … More

ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಸರ್ವೇಕ್ಷಣಾ ಘಟಕದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು: ಜಿಲ್ಲಾ ಆಸ್ಪತ್ರೆಯ ಸರ್ವೇಕ್ಷಣಾ ಘಟಕದಲ್ಲಿ ಎನ್‌.ಪಿ.ಹೆಚ್.ಸಿ, ಎನ್.ಪಿ-ಎನ್.ಸಿ.ಡಿ ಹಾಗೂ ಎನ್‌.ಪಿ.ಪಿ.ಸಿ ಕಾರ್ಯಮದಡಿಯಲ್ಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ವಿವಿಧ ವೃಂದಗಳಲ್ಲಿ ಖಾಲಿ ಇರುವ ಕನ್ಸಲ್ಟೆಂಟ್ ಮೆಡಿಸನ್, ಮಲ್ಟಿ ರಿಯಾಬಿಲಶನ್ ವರ್ಕರ್, ಫಿಜಿಷಿಯನ್ ಹಾಗೂ ಹೃದ್ರೋಗ ತಜ್ಞರು ಸೇರಿದಂತೆ ಇತರೆ ಒಟ್ಟು 12 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವೈದ್ಯಕೀಯ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ನವೆಂಬರ್ 03ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು … More