ನಿರುದ್ಯೋಗಿ ಮಹಿಳೆಯರಿಗೆ “ಉಚಿತ ಬ್ಯೂಟಿ ಪಾರ್ಲರ್ ತರಬೇತಿ”

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಮಹಿಳೆಯರಿಗೆ 35 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಿಬಿಆರ್‌ಎಸ್ಇಟಿಐ ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ.ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕನ್ನಡ ಓದಲು, ಬರೆಯಲು ಬರುವ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 45 ವರ್ಷ ವಯೋಮಾನದ ಮಹಿಳೆಯರು ಅರ್ಹರಾಗಿರುತ್ತಾರೆ. ಉಚಿತ ತರಬೇತಿಯ ಜೊತೆಗೆ ಊಟ, ವಸತಿ ಸೌಕರ್ಯ ಲಭ್ಯವಿರುತ್ತದೆ. ಬಿಪಿಎಲ್‌ ಅಭ್ಯರ್ಥಿಗಳಿಗೆ ಮೊದಲ … More

ಕೆನರಾ ಬ್ಯಾಂಕ್‌ನಲ್ಲಿ ಪದವೀಧರರಿಗೆ ಶಿಶಿಕ್ಷು ತರಬೇತಿ – ಅಪ್ಲೈ ಮಾಡಿ

ಸಾರ್ವಜನಿಕ ವಲಯದ ಬ್ಯಾಂಕಾಗಿರುವ ಕೆನರಾ ಬ್ಯಾಂಕ್ 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆ ಅಡಿಯಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್‌ಗಳ ತರಬೇತಿಗಾಗಿ ಅಧಿಸೂಚನೆ ಹೊರಡಿಸಿದೆ. ವಿವಿಧ ರಾಜ್ಯಗಳಲ್ಲಿರುವ ತನ್ನ ಶಾಖೆಗಳಲ್ಲಿ ಒಟ್ಟು 3500 ಪದವೀಧರ ಅಪ್ರೆಂಟಿಸ್‌ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಂಡು ತರಬೇತಿ ನೀಡಲಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನ ಆರಂಭಿಸಲಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು NATS ಅಧಿಕೃತ ಜಾಲತಾಣ https://nats.education.gov.in/ನಲ್ಲಿ ನೋಂದಣಿಯಾಗಿ, https://ibpsreg.ibps.in/canbaug25/ನ ಮೂಲಕ ಅ.12 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ … More

ಹಟ್ಟಿ ಚಿನ್ನದ ಗಣಿ ಆಸ್ಪತ್ರೆಯಲ್ಲಿ ತಜ್ಞರು, ವೈದ್ಯಾಧಿಕಾರಿಗಳ ಭರ್ತಿ; ಸಂದರ್ಶನಕ್ಕೆ ಕರೆ

ಭಾರತದ ಅತಿ ಹೆಚ್ಚು ಚಿನ್ನ ಉತ್ಪಾದಕ ಕಂಪನಿಯಾಗಿರುವ ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ಆಸ್ಪತ್ರೆಯಲ್ಲಿ ತಜ್ಞರು ಹಾಗೂ ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ನೇರಸಂದರ್ಶನಕ್ಕೆ ಕರೆ ನೀಡಿದೆ. ಹಟ್ಟಿಯಲ್ಲಿರುವ 120 ಹಾಸಿಗೆಗಳ ಆಸ್ಪತ್ರೆಯಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಜನರಲ್ ಸರ್ಜನ್-1, ಅನಸ್ಥೆಸಿಸ್ಟ್-1 ಹಾಗೂ ವೈದ್ಯಾಧಿಕಾರಿಗಳು-3 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಲಾಗುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು ಎಂದು ಕಾರ್ಯನಿರ್ವಾಹಕ … More

[ಉಚಿತ] ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಅ.3 ಕೊನೆ ದಿನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದಲ್ಲಿ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಹೊರಡಿಸಿದ ಪ್ರಕಟಣೆ ತಿಳಿಸಿದೆ. ಅರ್ಜಿ ಸಲ್ಲಿಸಲು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಚೌದ್ಧ, ಸಿಖ್, ಪಾರ್ಸಿ ಜನಾಂಗದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ. ತರಬೇತಿಗೆ ಅರ್ಜಿ ಸಲ್ಲಿಸಬಯಸುವವರು ಅಲ್ಪಸಂಖ್ಯಾತರ ನಿರ್ದೇಶನಾಲಯದ ಜಾಲತಾಣ https://dom.karnataka.gov.in/ಗೆ ಭೇಟಿ ನೀಡಿ. ಅ.3ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ತರಬೇತಿಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? • … More

ಉಚಿತ ತರಬೇತಿ: PC ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 60 ದಿನಗಳ ಕಾಲ ಪೊಲೀಸ್ ಕಾನ್ಸ್ಟೇಬಲ್ (Police Constable)ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಚೌದ್ಧ, ಸಿಖ್, ಪಾರ್ಸಿ) ಜನಾಂಗದ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿಯುತ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತದೆ. ಸದರಿ ತರಬೇತಿಗೆ ಅರ್ಜಿ ಸಲ್ಲಿಸಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://dom.karnataka.gov.in/ಗೆ … More

ಎಸ್ಸೆಸ್ಸೆಲ್ಸಿ + ಐಟಿಐ/ಪದವಿ/ಬಿ.ಎಸ್ಸಿ ಪಾಸ್‌, ಕೆಎಂಎಫ್‌ ಶಿಮುಲ್‌ನಲ್ಲಿ ವಿವಿಧ ಉದ್ಯೋಗವಕಾಶ

ಬಂಧುಗಳೇ ಗಮನಿಸಿ: ಈ ನೇಮಕಾತಿ ಸರ್ಕಾರದ ಆದೇಶದಂತೆ ರದ್ದುಗೊಳಿಸಲಾಗಿದೆ. ಸದರಿ ನೇಮಕಾತಿ ಪ್ರಕಟಣೆಗಳಿಗೆ ಪ್ರತಿಕ್ರಿಯಿಸಿ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳ ಅರ್ಜಿ ಶುಲ್ಕವನ್ನು (ಬ್ಯಾಂಕ್ ಶುಲ್ಕ ಹೊರತುಪಡಿಸಿ) ಪಾವತಿಸಲು ಬಳಸಿದ ಬ್ಯಾಂಕ್ ಖಾತೆಗಳಿಗೆ ಹಿಂದಿರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ(ಕೆಎಂಎಫ್ ಶಿಮುಲ್)ದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ವೃಂದಗಳಲ್ಲಿ ಸಹಾಯಕ ವ್ಯವಸ್ಥಾಪಕರು, ವಿಸ್ತರಣಾಧಿಕಾರಿಗಳು, ಕೆಮಿಸ್ಟ್, ಕಿರಿಯ ಸಿಸ್ಟಮ್ ಆಪರೇಟರ್ ಹಾಗೂ … More

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಕ್ರೀಡಾಪಟು ಮಾರ್ಗದರ್ಶಕರ ನೇಮಕ, ಅರ್ಜಿ ಆಹ್ವಾನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿವಿಧ ಜಿಲ್ಲೆಗಳ ತರಬೇತಿ ಕೇಂದ್ರ ಹಾಗೂ ಕ್ರೀಡಾ ಶಾಲೆ ವಸತಿ ನಿಲಯಗಳಲ್ಲಿ ಕ್ರೀಡಾಪಟು ಮಾರ್ಗದರ್ಶಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡಲು ಮತ್ತು ಕ್ರೀಡಾ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿರ್ವಹಣೆ ಸಂಬಂಧ ಮಾರ್ಗದರ್ಶನ ನೀಡುವ ಸಲುವಾಗಿ ಬೆಂಗಳೂರು ನಗರ, ಬೆಳಗಾವಿ, ಕಲ್ಬುರ್ಗಿ, ಮೈಸೂರು, ಕೂಡಿಗೆ ಕ್ರೀಡಾ ಶಾಲೆ-ವಸತಿ ನಿಲಯ ಹಾಗೂ ವಿದ್ಯಾನಗರ ತರಬೇತಿ ಕೇಂದ್ರ ಸೇರಿ ವಿವಿಧ ವಿಭಾಗಗಳಿಗೆ ಒಟ್ಟು 6 ಕ್ರೀಡಾಪಟು … More

ಸ್ವ-ಉದ್ಯೋಗ ಆಧಾರಿತ ತರಬೇತಿ ಜೊತೆಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಮಲ್ಟಿ ಡಿಸಿಪ್ಲಿನರಿ ಟ್ರೈನಿಂಗ್ ಸೆಂಟರ್ (MDTC), ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (KVIC), MSME ಸಚಿವಾಲಯ ವಿಜಿನಾಪುರ, ದೂರವಾಣಿನಗರ, ಬೆಂಗಳೂರು ಮತ್ತು ಅದರ ಎಂಪಾನೆಲ್ಡ್ ವೃತ್ತಿಪರ ತರಬೇತಿ ಸಹವರ್ತಿಗಳು(PTAs) ಜಂಟಿ ಸಹಯೋಗದಲ್ಲಿ ವಿವಿಧ ಜಿಲ್ಲೆಯ ಸ್ಥಳಗಳಲ್ಲಿ ಸ್ವ-ಉದ್ಯೋಗ ಆಧಾರಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ನಿರುದ್ಯೋಗಿ ಯುವಕರು, ಮಹಿಳೆಯರು, ಸರ್ಕಾರೇತರ ಸಂಸ್ಥೆಗಳು ಹಾಗೂ ಸ್ವ-ಸಹಾಯ ಗುಂಪುಗಳ ಅಭ್ಯರ್ಥಿಗಳಿಗೆ ಸ್ವ-ಉದ್ಯೋಗ ಆಧಾರಿತ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹರು. ತರಬೇತಿ ಪೂರ್ಣಗೊಳಿಸಿದ ನಂತರ ಅಭ್ಯರ್ಥಿಗಳಿಗೆ PMEGP ಯೋಜನೆಯಡಿಯಲ್ಲಿ ಬ್ಯಾಂಕ್‌ಗಳ ಮೂಲಕ … More

ರಿಸರ್ವ್ ಬ್ಯಾಂಕ್ (RBI)ನಲ್ಲಿ ಗ್ರೇಡ್ ‘B’ ಅಧಿಕಾರಿ ಹುದ್ದೆಗಳ ಭರ್ತಿ: 78,450ರೂ. ಆರಂಭಿಕ ವೇತನ!

ಭಾರತೀಯ ರಿಸರ್ವ್ ಬ್ಯಾಂಕ್ (RBI)ನಲ್ಲಿ ಗ್ರೇಡ್‌ ‘ಬಿ’ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ವಿವಿಧ ವೃಂದಗಳಲ್ಲಿ ಖಾಲಿ ಇರುವ ಗ್ರೇಡ್ ಬಿ ಅಧಿಕಾರಿಗಳು (ಡಿಆರ್) ಸಾಮಾನ್ಯ, ಗ್ರೇಡ್ ಬಿ ಅಧಿಕಾರಿಗಳು (ಡಿಆರ್)-ಡಿಇಪಿಆರ್ ಹಾಗೂ ಗ್ರೇಡ್ ಬಿ ಅಧಿಕಾರಿಗಳು (ಡಿಆರ್) – ಡಿಎಸ್ಐಎಂ ಸೇರಿದಂತೆ ಒಟ್ಟು 120 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಭಾರತೀಯ ರಿಸರ್ವ್ ಬ್ಯಾಂಕ್ (RBI) ಅಧಿಕೃತ ವೆಬ್ಸೈಟ್ https://opportunities.rbi.org.in/Scripts/Vacancies.aspxಗೆ … More

ಈಶಾನ್ಯ ಗಡಿ ರೈಲ್ವೆಯಲ್ಲಿ ಗ್ರೂಪ್ ಸಿ, ಡಿ ಹುದ್ದೆಗಳ ಭರ್ತಿ; ಕ್ರೀಡಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ

ಈಶಾನ್ಯ ಗಡಿ ರೈಲ್ವೆ(NFR)ಗುವಾಹಟಿಯಲ್ಲಿ ಕ್ರೀಡಾ ಕೋಟಾದಡಿ ಗ್ರೂಪ್ ಸಿ ಮತ್ತು ಗ್ರೂಪ್ ಡಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. 2025-26ನೇ ಸಾಲಿಗೆ ಕ್ರೀಡಾ ಕೋಟಾದ ಅಡಿಯಲ್ಲಿ ವಿವಿಧ ವೃಂದಗಳಲ್ಲಿ ಒಟ್ಟು 56 ಹುದ್ದೆಗಳಿಗೆ ಕ್ರೀಡಾ ಅಭ್ಯರ್ಥಿಗಳನ್ನು ನೇಮಕಾತಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಈಶಾನ್ಯ ಫ್ರಾಂಟಿಯರ್ ರೈಲ್ವೇ ಅಧಿಕೃತ ಜಾಲತಾಣ https://www.nfr-recruitment.in/ಕ್ಕೆ ಭೇಟಿ ನೀಡಿ. ಅ.15ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬುಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: … More