PGCET 2025: ಮೊದಲ ಸುತ್ತಿನ ಅಣುಕು ಫಲಿತಾಂಶ ಸೆ.29ಕ್ಕೆ

ಎಂಬಿಎ, ಎಂ.ಸಿ.ಎ, ಎಂಇ, ಎಂಟೆಕ್, ಎಂ.ಆರ್ಕ್ ಕೋರ್ಸುಗಳ ಪ್ರವೇಶಕ್ಕಾಗಿ ಮೊದಲನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆ ಆದ್ಯತಾ ಕ್ರಮದಲ್ಲಿ ದಾಖಲಿಸಲು ಸೆ.24 ರಿಂದ ಸೆ.28ರವೆರೆಗೆ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಣುಕು ಫಲಿತಾಂಶವನ್ನು ಸೆ.29ಕ್ಕೆ ಪ್ರಕಟಿಸಿ, ಇಚ್ಛೆ/ಆಯ್ಕೆಗಳನ್ನು ಅ.03ರವರೆಗೆ ಮಾರ್ಪಾಡು ಮಾಡಲು ಅವಕಾಶ ನೀಡಲಾಗುವುದು. ಸದರಿ ಸುತ್ತಿನ ನೈಜ ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಅ.03ಕ್ಕೆ ಪ್ರಕಟಿಸಲಾಗುತ್ತದೆ. ಅಂತಿಮ ಫಲಿತಾಂಶವನ್ನು ಅ.4ರಂದು ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. … More

ಉತ್ತರ ಮಧ್ಯ ರೈಲ್ವೆಯಲ್ಲಿ ಶಿಶಿಕ್ಷುಗಳ ಬೃಹತ್‌ ನೇಮಕಾತಿ – ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ

ಉತ್ತರ ಮಧ್ಯ ರೈಲ್ವೆಯಲ್ಲಿ ಅಪ್ರೆಂಟಿಸ್ ಕಾಯ್ದೆ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶವು ಅಧಿಸೂಚನೆ ಹೊರಡಿಸಿದೆ. ವಿವಿಧ ವಿಭಾಗಗಳು ಹಾಗೂ ಕಾರ್ಯಾಗಾರಗಳಲ್ಲಿ ಫಿಟ್ಟರ್, ವೆಲ್ಡರ್, ಎಲೆಕ್ಟ್ರಿಷಿಯನ್, ವೈರ್‌ಮ್ಯಾನ್ ಸೇರಿದಂತೆ ಇತರೆ ಒಟ್ಟು 1763 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಉತ್ತರ ಮಧ್ಯ ರೈಲ್ವೆಯ ಅಧಿಕೃತ ಜಾಲತಾಣ https://examerp.com/ಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿ ಅಥವಾ … More

ಆರ್‌ಆರ್‌ಬಿ NPTC ಪದವಿ ಹಂತದ CBT 1ರ ಫಲಿತಾಂಶ ಪ್ರಕಟ

ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವಿ ಹಂತದ ಹುದ್ದೆಗಳ ನೇಮಕಾತಿಗಾಗಿ 2025ರ ಜೂನ್ 5 ರಿಂದ 24 ರವರೆಗೆ ನಡೆಸಲಾದ ಕಂಪ್ಯೂಟರ್ ಆಧಾರಿತ ಪರೀಕ್ಷೆ-1 (CBT-I)ರ ಫಲಿತಾಂಶವನ್ನು ಮಂಡಳಿಯು ಬಿಡುಗಡೆ ಮಾಡಿದೆ. CEN 05/2024ರ ಅಡಿ ಅಧಿಸೂಚಿಸಿ ತಾಂತ್ರಿಕೇತರ ಜನಪ್ರಿಯ ವರ್ಗಗಳ ವಿವಿಧ ಸ್ಟೇಷನ್ ಮೇಲ್ವಿಚಾರಕ, ಟಿಕೆಟ್ ಮೇಲ್ವಿಚಾರಕ, ಜೂನಿಯರ್ ಅಕೌಂಟ್ಸ್, ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಹಾಗೂ ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್) ಸೇರಿದಂತೆ ಇತರೆ ಒಟ್ಟು 8113 ಪದವಿ ಹಂತದ ಹುದ್ದೆಗಳ ನೇಮಕಾತಿ … More

ಕೆಸೆಟ್‌-2025 ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ

ಕರ್ನಾಟಕ ರಾಜ್ಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025ರ ಅರ್ಜಿ ಸಲ್ಲಿಕೆ ಕೊನೆ ದಿನಾಂಕವನ್ನು ಸೆ.24ಕ್ಕೆ ಹಾಗೂ ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಭರಿಸಲು ಸೆ.25ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಅರ್ಜಿ ಸಲ್ಲಿಸಲು ಸೆ.18, ಅರ್ಜಿ ಶುಲ್ಕ ತುಂಬಲು ಸೆ.19 ನಿಗದಿಪಡಿಸಲಾಗಿತ್ತು. ಕೆಲವು ಅಭ್ಯರ್ಥಿಗಳು ಕೊನೆ ದಿನಾಂಕವನ್ನು ವಿಸ್ತರಿಸುವಂತೆ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದರು. ಆದ್ದರಿಂದ ಕೊನೆ ಅವಕಾಶ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಹೆಚ್ಚಿನ … More

ಕೆಸೆಟ್ 2025: ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ, ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2025ರ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(KSET)ನಡೆಸಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ರಾಜ್ಯದ ವಿಶ್ವವಿದ್ಯಾನಿಲಯ, ಪ್ರಥಮ ದರ್ಜೆ ಪದವಿ ಕಾಲೇಜು, ಉನ್ನತ ಶಿಕ್ಷಣ ಸಂಸ್ಥೆ (ಸರ್ಕಾರಿ, ಅನುದಾನಿತ ಮತ್ತು ಖಾಸಗಿ) ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹತೆಯನ್ನು ಪಡೆಯಲು ಕೆಸೆಟ್ ಪರೀಕ್ಷೆಯನ್ನು ಪ್ರತಿ ವರ್ಷ ನಡೆಸಲಾಗುತ್ತದೆ. ಪ್ರಸ್ತುತ ಈ ಬಾರಿಯ ಕೆಸೆಟ್-2025ರ ಪರೀಕ್ಷೆಯನ್ನು 33 ವಿಷಯಗಳಲ್ಲಿ ನಡೆಸಲಾಗುತ್ತಿದ್ದು, ಪ್ರಾಧಿಕಾರವು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿ. ಆಸಕ್ತ ಮತ್ತು … More

ಜಯದೇವದಲ್ಲಿ ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿ – ಅರ್ಜಿ ಆಹ್ವಾನ

ಬೆಂಗಳೂರಿನ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಸ್ಟಾಫ್ ನರ್ಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ನರ್ಸಿಂಗ್‌ನಲ್ಲಿ ಡಿಪ್ಲೊಮಾ ಹೊಂದಿರುವವರನ್ನು 15 ಸ್ಟಾಫ್ ನರ್ಸ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವೈದ್ಯಕೀಯ ವಲಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಸೆಪ್ಟೆಂಬರ್ 30ರೊಳಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆ ಅಥವಾ ಮಂಡಳಿಯಿಂದ … More

‘ಬ್ಯಾಂಕ್ ಆಫ್ ಮಹಾರಾಷ್ಟ್ರ’ ದಲ್ಲಿ ವಿವಿಧ ತಜ್ಞ ಅಧಿಕಾರಿ ಹುದ್ದೆಗಳ ಭರ್ತಿ

ಸಾರ್ವಜನಿಕ ವಲಯದ ಪ್ರಸಿದ್ಧ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ ಹಂತ IIರ ಸ್ಕೇಲ್ II, III, IV, V ಮತ್ತು VIನಲ್ಲಿ ತಜ್ಞ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ ಎಂದು ಬ್ಯಾಂಕಿನ ಮಾನವ ಸಂಪನ್ಮೂಲ ನಿರ್ವಹಣಾ ಇಲಾಖೆಯ ಜನರಲ್ ಮ್ಯಾನೇಜರ್ ಕೆ.ರಾಜೇಶ್‌ ಕುಮಾರ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಮಾಹಿತಿ ತಂತ್ರಜ್ಞಾನ/ಡಿಜಿಟಲ್ ಬ್ಯಾಂಕಿಂಗ್/ಐಟಿ ಭದ್ರತೆ/ಐಎಸ್ ಆಡಿಟ್/ಸಿಐಎಸ್ಒ ಕೋಶ ವಿಭಾಗಗಳಲ್ಲಿ ಖಾಲಿ ಇರುವ 350 ತಜ್ಞ ಅಧಿಕಾರಿ(ಎಸ್‌ಓ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ … More

RRB NTPC UG ಕಂಪ್ಯೂಟರ್ ಆಧಾರಿತ ಪರೀಕ್ಷೆ-1ರ ಕೀ ಉತ್ತರ ಪ್ರಕಟ: ಆಕ್ಷೇಪಣೆಗೆ ಕಾಲಾವಕಾಶ

ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕೇತರ ಜನಪ್ರಿಯ ವರ್ಗಗಳ (NTPC) ಪದವಿಪೂರ್ವ ಮಟ್ಟದ (UG) ಹುದ್ದೆಗಳ ನೇಮಕಾತಿ ಸಂಬಂಧ ಆ.7ರಿಂದ ಸೆ.9ರವರೆಗೆ ನಡೆಸಲಾದ ಕಂಪ್ಯೂಟರ್ ಆಧಾರಿತ ಪರೀಕ್ಷೆ-1ರ (CBT-I) ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. RRB ಸಿಇಎನ್ 06/2024ರ ಅನ್ವಯ ಒಟ್ಟು 3445 ಹುದ್ದೆಗಳ ಭರ್ತಿಗಾಗಿ ಅಧಿಸೂಚಿಸಿ, ಕಂಪ್ಯೂಟರ್ ಆಧಾರಿತ ಪರೀಕ್ಷೆ-I ಅನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಪ್ರಶ್ನೆಗಳು, ಪ್ರತಿಕ್ರಿಯೆಗಳು ಮತ್ತು ಉತ್ತರ ಕೀಗಳನ್ನು ಆರ್.ಆರ್.ಬಿ ಅಧಿಕೃತ ವೆಬ್ ಸೈಟ್ https://rrb.digialm.com//EForms/configuredHtml/2667/95125/login.htmlನಲ್ಲಿ ಪರಿಶೀಲನೆ ಮಾಡಿಕೊಳ್ಳಬಹುದಾಗಿದೆ. … More

ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ: ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯ(MoRD) ಹಾಗೂ ಕರ್ನಾಟಕ ಸರ್ಕಾರದ ಗ್ರಾಮೀಣ ಜೀವನೋಪಾಯ ಮತ್ತು ಸಂವರ್ಧನ ಸಂಸ್ಥೆ (ಸಂಜೀವಿನಿ-KSRLPS) ಸಹಯೋಗದಲ್ಲಿ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು 31 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ(ಸಿಬಿಆರ್ ಎಸ್ಇಟಿಐ)ಯ ನಿರ್ದೇಶಕ ಅಂಬರೀಶ ಬಿ.ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೆ.22 ರಿಂದ ತರಬೇತಿ … More

ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ: ಅರ್ಹರು ಹೀಗೆ ಅರ್ಜಿ ಸಲ್ಲಿಸಿ

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ 2025-26ನೇ ಸಾಲಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ಇಂಜಿನಿಯರಿಂಗ್‌ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಹಾಗೂ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಶೇ.45ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಅಂತಹ ವಿದ್ಯಾರ್ಥಿಗಳು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕೃತ ವೆಬ್ ಸೈಟ್ https://klwbapps.karnataka.gov.in/ಗೆ ಭೇಟಿ ನೀಡಿ. … More