ಚಾಮರಾಜನಗರ ಜಿಲ್ಲಾ ಸಂಚಾರಿ ಆರೋಗ್ಯ ಘಟಕಗಳಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಚಾಮರಾಜನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯ ಜಿಲ್ಲಾ ಕಾರ್ಯಕ್ರಮ ನಿರ್ವಹಣ ಘಟಕದ ವತಿಯಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಜಿಲ್ಲೆಯ ಸಂಚಾರಿ ಆರೋಗ್ಯ ಘಟಕಗಳಲ್ಲಿ ಎಂ.ಬಿ.ಬಿ.ಎಸ್ ವೈದ್ಯರು (04), ಶುಶ್ರೂಷಕ (04) ಹಾಗೂ ಪ್ರಯೋಗಾಲಯ ತಂತ್ರಜ್ಞರು /ವ್ಯವಸ್ಥಾಪಕರು (0-4) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆ.16 ರಂದು ನಡೆಸಲಾಗುವ ನೇರ ಸಂದರ್ಶನದಲ್ಲಿ ಭಾಗವಹಿಸಿ ಎಂದು ಸದಸ್ಯ ಕಾರ್ಯದರ್ಶಿಗಳು ಹಾಗೂ … More

ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು ಜಿಲ್ಲೆಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಮೈಸೂರು ಜಿಲ್ಲೆಯ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಯ ಗರಿಷ್ಠ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಸದರಿ ಹುದ್ದೆಗೆ ಹೊಸ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮೈಸೂರು ಜಿಲ್ಲೆಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಆಫ್‌ಲೈನ್ ಮೂಲಕ ಅಕ್ಟೋಬರ್ 8 ರೊಳಗೆ ಅರ್ಜಿ ಸಲ್ಲಿಸಿ, ಅವಧಿ ಮೀರಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. … More

RRB (CEN NO: 08/2024) ಗ್ರೂಪ್-ಡಿ CBT ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ರೈಲ್ವೆ ಇಲಾಖೆಯಲ್ಲಿನ ವಿವಿಧ ಗ್ರೂಪ್ ಡಿ ಹುದ್ದೆಗಳ ನೇಮಕಾತಿ ಸಂಬಂಧ ಮೊದಲನೇ ಹಂತದಲ್ಲಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT) ತಾತ್ಕಾಲಿಕ ವೇಳಾಪಟ್ಟಿಯನ್ನು ರೈಲ್ವೆ ನೇಮಕಾತಿ ಮಂಡಳಿಯು ಸೋಮವಾರ (ಸೆ.08)ರಂದು ಬಿಡುಗಡೆ ಮಾಡಿದೆ. CEN NO: 08/2024ರ ಅಡಿಯಲ್ಲಿ ಒಟ್ಟು 32,438 ಗ್ರೂಪ್ ಡಿ (7ನೇ ಸಿಪಿಸಿ ಪೇ ಮ್ಯಾಟ್ರಿಕ್ಸ್‌ನ ಹಂತ 1ರ) ಅಧಿಸೂಚಿಸಲಾಗಿತ್ತು. CBTಯನ್ನು ನವೆಂಬರ್ 17ರಿಂದ ಡಿಸೆಂಬರ್‌ವರೆಗೆ ಭಾರತದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದೆ. ಅಭ್ಯರ್ಥಿಗಳು ಪರೀಕ್ಷಾ ದಿನದ ನಾಲ್ಕು ದಿನಗಳ ಮುಂಚೆ ಅಧಿಕೃತ … More

ಜಮಖಂಡಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳ ನೇಮಕಾತಿ: ಇಲ್ಲಿದೆ ಹುದ್ದೆಗಳ ವಿವರ

ಬಾಗಲಕೋಟೆ ಜಿಲ್ಲೆಯ ದಿ ಜಮಖಂಡಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ವಿವಿಧ ವೃಂದಗಳಲ್ಲಿ ಖಾಲಿ ಇರುವ ಕಿರಿಯ ಸಹಾಯಕರು, ಗಣಕಯಂತ್ರ ನಿರ್ವಾಹಕರು, ಸಿಪಾಯಿ, ರಾತ್ರಿ ಕಾವಲುಗಾರರು, ವಾಹನ ಚಾಲಕರು ಹಾಗೂ ಗನ್ ಮ್ಯಾನ್ ಸೇರಿದಂತೆ ಒಟ್ಟು 45 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ಜಾಲತಾಣ www.thejamkhandiurbanbank.comಕ್ಕೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಬ್ಯಾಂಕಿನ ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ … More

ಇಂಡಿಯನ್ ಆಯಿಲ್‌ನಲ್ಲಿ ಎಂಜಿನಿಯರ್‌ ಹುದ್ದೆಗಳ ಭರ್ತಿ; ಸೆ.21 ರೊಳಗೆ ಅರ್ಜಿ ಸಲ್ಲಿಸಿ

ದೇಶದ ಪ್ರಮುಖ ವೈವಿಧ್ಯಮಯ ಮತ್ತು ಸಂಯೋಜಿತ ಇಂಧನ ಕಂಪನಿಯಾಗಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಪದವೀಧರ ಎಂಜಿನಿಯರ್‌/ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಈ ಬಾರಿ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮೂಲಕ ಕೆಮಿಕಲ್, ಎಲೆಕ್ಟ್ರಿಕಲ್ ಹಾಗೂ ಇನ್ಸ್ಟ್ರುಮೆಂಟೇಶನ್ ಇಂಜಿನಿಯರಿಂಗ್ ವಿಭಾಗಗಳಲ್ಲಿ ಖಾಲಿ ಇರುವ ಎಂಜಿನಿಯರ್‌ಗಳು/ಅಧಿಕಾರಿ(ಗ್ರೇಡ್-ಎ) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಪದವೀಧರ ಎಂಜಿನಿಯರ್‌ ಅಭ್ಯರ್ಥಿಗಳು ಐಬಿಪಿಎಸ್ ಅಧಿಕೃತ ಜಾಲತಾಣ https://ibpsonline.ibps.in/iocljun25/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. … More

ಜೀವ ವಿಮಾ ನಿಗಮ (LIC)ದಲ್ಲಿ ಸ.ಎಂಜಿನಿಯರ್‌, ಆಡಳಿತಾಧಿಕಾರಿಗಳ ನೇಮಕಾತಿ, ಅಪ್ಲೈ ಮಾಡಿ

ಭಾರತೀಯ ಜೀವ ವಿಮಾ ನಿಗಮ (LIC)ವು ಸಹಾಯಕ ಎಂಜಿನಿಯರ್‌ ಮತ್ತು ಸಹಾಯಕ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 491 ಸಹಾಯಕ ಎಂಜಿನಿಯರ್‌ಗಳು (AE ಸಿವಿಲ್/ಎಲೆಕ್ಟ್ರಿಕಲ್) ಮತ್ತು ಸಹಾಯಕ ಆಡಳಿತಾಧಿಕಾರಿ (AAO) ತಜ್ಞರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IBPS ಅಧಿಕೃತ ವೆಬ್ಸೈಟ್ https://ibpsonline.ibps.in/licjul25/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, … More

LIC AAO Generalist 2025: ವಿಮಾ ಕಂಪನಿಯಲ್ಲಿ ಆಡಳಿತಾಧಿಕಾರಿಗಳ ಭರ್ತಿ, ಅರ್ಜಿ ಆಹ್ವಾನ

ಭಾರತೀಯ ಜೀವ ವಿಮಾ ನಿಗಮ(LIC)ದಲ್ಲಿ ಸಹಾಯಕ ಆಡಳಿತ ಅಧಿಕಾರಿ(AAO-ಜನರಲಿಸ್ಟ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 350 ಸಹಾಯಕ ಆಡಳಿತಾಧಿಕಾರಿ (ಜನರಲಿಸ್ಟ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು IBPS ಅಧಿಕೃತ ವೆಬ್ಸೈಟ್ https://ibpsonline.ibps.in/licjul25/ಗೆ ಭೇಟಿ ನೀಡುವ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ … More

ಕೆನರಾ ಬ್ಯಾಂಕ್‌: ಟ್ರೈನಿ ಹುದ್ದೆಗಳ ನೇಮಕಾತಿ – ಅಪ್ಲೈ ಮಾಡಿ

ಕೆನರಾ ಬ್ಯಾಂಕಿನ ಅಂಗಸಂಸ್ಥೆಯಾಗಿರುವ ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ (CBSL) ಟ್ರೈನಿ(ಮಾರಾಟ ಮತ್ತು ಮಾರುಕಟ್ಟೆ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಕಲಬುರಗಿ, ಹುಬ್ಬಳ್ಳಿ, ಬೆಂಗಳೂರು ಮತ್ತು ಮೈಸೂರು ಸೇರಿ ದೇಶದ ವಿವಿಧ ಕೇಂದ್ರಗಳಲ್ಲಿ ಟ್ರೈನಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಪದವೀಧರ ಅಭ್ಯರ್ಥಿಗಳು ಕೆನರಾ ಬ್ಯಾಂಕ್ ಅಧಿಕೃತ ಜಾಲತಾಣ https://www.canmoney.in/careers ಕ್ಕೆ ಭೇಟಿ ನೀಡಿ. ಅ.06 ರೊಳಗೆ ಆನ್‌ಲೈನ್ ಅಥವಾ ಆಫ್‌ಲೈನ್ … More

RRB ಸಚಿವಾಲಯ ಮತ್ತು ಪ್ರತ್ಯೇಕ ವರ್ಗಗಳ ನೇಮಕಾತಿ; CBT ಪ್ರವೇಶ ಪತ್ರ ಬಿಡುಗಡೆ

ಸಚಿವಾಲಯ ಮತ್ತು ಪ್ರತ್ಯೇಕ ವರ್ಗಗಳ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಸೆ.10 ರಿಂದ 12ರವರೆಗೆ ನಡೆಯಲಿರುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT) ಪ್ರವೇಶ ಪತ್ರವನ್ನು ರೈಲ್ವೆ ನೇಮಕಾತಿ ಮಂಡಳಿಯು ಶನಿವಾರ ಬಿಡುಗಡೆ ಮಾಡಿದೆ. ಜೂನಿಯ‌ರ್ ಅನುವಾದಕ, ಜೂನಿಯ‌ರ್ ಸ್ಟೆನೋಗ್ರಾಫ‌ರ್, ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕ, ಮುಖ್ಯ ಕಾನೂನು ಸಹಾಯಕ, ಅಡುಗೆಯವರು, ಪಿಜಿಟಿ, ಟಿಜಿಟಿ ಸೇರಿ ವಿವಿಧ ಒಟ್ಟು 1036 ಹುದ್ದೆಗಳ ಭರ್ತಿಗಾಗಿ ಜ.6ರಂದು ಅಧಿಸೂಚಿಸಲಾಗಿತ್ತು. ಸದರಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಆರ್.ಆರ್.ಬಿ ಅಧಿಕೃತ ಅಂತರ್ಜಾಲ … More

ಯುಜಿಸಿಇಟಿ 3ನೇ, ನೀಟ್‌ 2ನೇ ಸುತ್ತಿಗೆ ಆಯ್ಕೆ ಸಲ್ಲಿಸಲು ಸೆ.8 ಕೊನೆ ದಿನ

ಇಂಜಿನಿಯರಿಂಗ್ ಸೇರಿ ವಿವಿಧ ಕೋರ್ಸುಗಳ ಮೂರನೇ ಸುತ್ತಿನ ಸೀಟು ಹಂಚಿಕೆ ಹಾಗೂ ವೈದ್ಯಕೀಯ, ದಂತವೈದ್ಯಕೀಯ ಕೋರ್ಸುಗಳ ಎರಡನೇ ಸುತ್ತಿನ ಮುಂದುವರಿದ ಸುತ್ತಿನ ಸೀಟು ಹಂಚಿಕೆಗೆ ಸೆ.6 ರಿಂದ 8ರವರೆಗೆ ಇಚ್ಚೆ/ಆಯ್ಕೆಗಳನ್ನು ಹೊಸದಾಗಿ ಸೇರಿಸಲು/ಬದಲಾಯಿಸಲು/ಅಳಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವು ಹೊಸದಾಗಿ ಬೆಳಗಾವಿ ಜೆಎನ್‌ಎಮ್ ಕಾಲೇಜಗೆ 12 ವೈದ್ಯಕೀಯ ಸೀಟುಗಳು, ಮೈಸೂರು ಫರೂಕಿಯ ದಂತ ವೈದ್ಯಕೀಯ ಕಾಲೇಜಿಗೆ 40 ಸೀಟುಗಳು ಮತ್ತು ಬಿಜಿಎಸ್ … More