ಗುಪ್ತಚರ ಇಲಾಖೆ: ಭದ್ರತಾ ಸಹಾಯಕ(MT) ಹುದ್ದೆಗಳ ನೇಮಕಾತಿ; ಸೆ.06ರಿಂದ ಅರ್ಜಿ ಸಲ್ಲಿಸಿ

ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಗುಪ್ತಚರ ಇಲಾಖೆ (ಇಂಟೆಲಿಜೆನ್ಸ್ ಬ್ಯೂರೋ – IB)ಯು ಭದ್ರತಾ ಸಹಾಯಕ (ಮೋಟಾರ್ ಸಾರಿಗೆ)ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಪ್ರಸ್ತುತ ಖಾಲಿ ಇರುವ ಒಟ್ಟು 455 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಸರ್ಕಾರಿ ಹುದ್ದೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು MHA ಅಧಿಕೃತ ಜಾಲತಾಣ https://www.mha.gov.in/en/notifications/vacancies ಕ್ಕೆ ಭೇಟಿ ನೀಡಿ. ಸೆ.20ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. … More

ಉಚಿತ ಸೇನಾ ತರಬೇತಿಗೆ ಅರ್ಜಿ ಆಹ್ವಾನ; ಕಲಬುರಗಿಯಲ್ಲಿ ತರಬೇತಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ಉಚಿತವಾಗಿ ಆಯ್ಕೆಯ ಪೂರ್ವ ಸಿದ್ಧತೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರಲು ತಯಾರಿ ನಡೆಸುತ್ತಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), ಹಾಗೂ 3(ಬಿ) ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ 3ನೇ ಬ್ಯಾಚ್ ಪ್ರಾರಂಭಿಸಲು … More

ವಿವಿಧ ಜಿಲ್ಲೆಗಳಲ್ಲಿ ಓಂಬುಡ್ಸ್‌ ಪರ್ಸನ್ ಹುದ್ದೆಗಳ ನೇಮಕ, ಡಿಗ್ರಿ ಪಾಸ್‌.!!

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನ ಸಂಬಂಧ ಸ್ವೀಕೃತವಾಗುವ ದೂರುಗಳ ವಿಲೇವಾರಿ ಮತ್ತು ಕುಂದುಕೊರತೆಗಳ ನಿವಾರಣೆಗಾಗಿ ವಿವಿಧ ಜಿಲ್ಲೆಗಳಲ್ಲಿ ಓಂಬುಡ್ಸ್‌ ಪರ್ಸನ್ ಹುದ್ದೆಗಳ ನೇಮಕಾತಿಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣಕನ್ನಡ ಮತ್ತು ಕಲಬುರಗಿ ಜಿಲ್ಲೆಗಳಿಗೆ 2 ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅಕ್ಟೋಬರ್ 3 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಇಲಾಖೆ ಮುಖ್ಯ ಕಾರ್ಯಾಚರಣೆ … More

ಯುಪಿಎಸ್ಸಿ NDA & NA 2 ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ರಾಷ್ಟ್ರೀಯ ರಕ್ಷಣಾ ಅಕಾಡೆಮಿ (NDA) ಮತ್ತು ನೌಕಾ ಅಕಾಡೆಮಿ (NA) II, 2025 ರ ಪ್ರವೇಶ ಪತ್ರವನ್ನು ಕೇಂದ್ರ ಲೋಕ ಸೇವಾ ಆಯೋಗವು ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 14ರ (ಭಾನುವಾರ) ಭಾರತದಾದ್ಯಂತ ವಿವಿಧ ಪರೀಕ್ಷಾಕೇಂದ್ರಗಳಲ್ಲಿ ಎರಡು ಪಾಳಿಯಲ್ಲಿ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು UPSC ಅಧಿಕೃತ ವೆಬ್ಸೈಟ್ https://upsconline.nic.in/ಗೆ ಭೇಟಿ ನೀಡಿ. ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. NDA & NA II ಪರೀಕ್ಷೆಯ ವೇಳಾಪಟ್ಟಿ NDA & NA … More

ಯುಪಿಎಸ್ಸಿ; ಸಿಡಿಎಸ್‌ ಪರೀಕ್ಷೆ 2ರ ಪ್ರವೇಶ ಪತ್ರ ಬಿಡುಗಡೆ

ಕೇಂದ್ರ ಲೋಕಸೇವಾ ಆಯೋಗ ಸೆ.14ರಂದು ನಡೆಸಲಿರುವ ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ-IIರ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಬೆಳಿಗ್ಗೆ 09 ರಿಂದ 11ರವರೆಗೆ ಇಂಗ್ಲಿಷ್ ಪತ್ರಿಕೆ, ಮಧ್ಯಾಹ್ನ 12:30 ರಿಂದ 02:30 ರವರೆಗೆ ಸಾಮಾನ್ಯ ಜ್ಞಾನ ಪತ್ರಿಕೆ ಮತ್ತು ಸಂಜೆ 04 ರಿಂದ 06 ರವರೆಗೆ ಪ್ರಾಥಮಿಕ ಗಣಿತ ಪತ್ರಿಕೆ ಮೂರು ಪಾಳಿಯಲ್ಲಿ ದೇಶದಾದ್ಯಂತ ವಿವಿಧ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದೆ. ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಆಯೋಗದ ಜಾಲತಾಣ https://upsconline.nic.in/ದಲ್ಲಿ ಪ್ರಕಟಿಸಲಾಗಿದೆ ಎಂದು ಆಯೋಗ ಹೊರಡಿಸಿದ ಪ್ರಕಟಣೆ … More

ರೈಲ್ವೆ ಇಲಾಖೆಯಲ್ಲಿ ಪ್ಯಾರಾಮೆಡಿಕಲ್ ಸಿಬ್ಬಂದಿಗಳ ನೇಮಕಾತಿ, ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ

ರೈಲ್ವೆ ನೇಮಕಾತಿ ಮಂಡಳಿಯು ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 434 ಪ್ಯಾರಾಮೆಡಿಕಲ್ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ(RRB Paramedical Staff Notification 2025) ಬಿಡುಗಡೆ ಮಾಡಿದೆ. ಪ್ಯಾರಾಮೆಡಿಕಲ್ ವರ್ಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರೈಲ್ವೇ ನೇಮಕಾತಿ ಮಂಡಳಿಯ ಅಧಿಕೃತ ವೆಬ್ ಸೈಟ್ www.rrbapply.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, … More

ಎಲ್.ಐ.ಸಿಯಲ್ಲಿ ಅಪ್ರೆಂಟಿಸ್ ತರಬೇತಿಗೆ ಅವಕಾಶ: ಅಪ್ಲೈ ಮಾಡಿ

ಭಾರತೀಯ ಜೀವ ವಿಮಾ ನಿಗಮ (LIC) ಹೌಸಿಂಗ್ ಫೈನಾನ್ಸ್ ಲಿಮಿಟೆಡ್‌ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕಾರ ಪ್ರಾರಂಭಿಸಿದೆ. ವಿವಿಧ ಕಚೇರಿಗಳಲ್ಲಿ ಒಟ್ಟು 192 ಅಭ್ಯರ್ಥಿಗಳನ್ನು 12 ತಿಂಗಳುಗಳ ಅವಧಿಯವರೆಗೆ ನೇಮಕಾತಿ ಮಾಡಿಕೊಂಡು ಅಪ್ರೆಂಟಿಸ್‌ಶಿಪ್ ತರಬೇತಿ ನೀಡಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು NATS ಅಧಿಕೃತ ಜಾಲತಾಣ https://nats.education.gov.in/ ಕ್ಕೆ ಭೇಟಿ ನೀಡಿ. ಸೆಪ್ಟೆಂಬರ್ 22ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: … More

ಅರಣ್ಯ ಇಲಾಖೆ: ಜೀವವೈವಿಧ್ಯ ಮಂಡಳಿಯಲ್ಲಿ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ; 60,000ರೂ.ವೇತನ

ರಾಜ್ಯ ಅರಣ್ಯ ಇಲಾಖೆಯ ಜೀವವೈವಿಧ್ಯ ಮಂಡಳಿ ಬೆಂಗಳೂರಿನಲ್ಲಿ ಸಸ್ಯಶಾಸ್ತ್ರ ಸಮಾಲೋಚಕ (ಕನ್ಸಲ್ಟೆಂಟ್) ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಸ್ಯ ವಿಜ್ಞಾನ ಕ್ಷೇತ್ರದಲ್ಲಿ ಜೀವವೈವಿಧ್ಯ ದಾಖಲಾತಿ, ಸಂಶೋಧನೆ ಮತ್ತು ಅದರ ಪ್ರಕಟಣೆ ಮತ್ತು ಸಲಹಾ ಬೆಂಬಲಕ್ಕೆ ಸಂಬಂಧಿಸಿದ ನಿರ್ದಿಷ್ಟ ಕಾರ್ಯಯೋಜನೆಗಳಿಗಾಗಿ ಕನ್ಸಲ್ಟೆಂಟ್ (ಸಸ್ಯಶಾಸ್ತ್ರ) ಹುದ್ದೆಗೆ ಓರ್ವ ಅಭ್ಯರ್ಥಿಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಯ ಕಾರ್ಯಕ್ಷಮತೆಯ ಆಧಾರದ ಮೇಲೆ ವಿಸ್ತರಣೆಗೆ ಅವಕಾಶವಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಸೆ.20 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ … More

ಪಿಡಿಒ: ಆರ್‌ಪಿಸಿ ಅರ್ಹತಾ ಪಟ್ಟಿ ಪ್ರಕಟ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಉಳಿಕೆ ಮೂಲ ವೃಂದ) 150 ಹುದ್ದೆಗಳ ನೇಮಕಾತಿಗೆ 1:3ರ ಅನುಪಾತದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗವು ಪ್ರಕಟಿಸಿದೆ. ಆಯೋಗವು 2024ರ ಮಾರ್ಚ್‌ 15ರಂದು ಅಧಿಸೂಚಿಸಿ, ಡಿ.08ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಿತ್ತು. ಸದರಿ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು https://kpsc.kar.nic.in/eligibility-list.htmlನಲ್ಲಿ ಪರಿಶೀಲನೆ ಮಾಡಿಕೊಳ್ಳಬಹುದಾಗಿದೆ. How to Download KPSC PDO (RPC) Eligibility List 2025 ಪಿಡಿಓ ಆರ್‌ಪಿಸಿ ಅರ್ಹತಾ ಪಟ್ಟಿ … More

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ 537 ಅಪ್ರೆಂಟಿಸ್ ನೇಮಕಾತಿ – ಅರ್ಜಿ ಆಹ್ವಾನ

ಭಾರತದ ಅತಿದೊಡ್ಡ ವಾಣಿಜ್ಯ ಉದ್ಯಮ ಕಂಪನಿಯಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)ನಲ್ಲಿ 1961ರ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಪೈಪ್ ಲೈನ್ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 537 ತಾಂತ್ರಿಕ ಅಪ್ರೆಂಟಿಸ್, ತಾಂತ್ರಿಕೇತರ ಅಪ್ರೆಂಟಿಸ್‌ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆ.18ರೊಳಗೆ https://www.apprenticeshipindia.gov.in ಅಥವಾ https://nats.education.gov.in/ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ … More