KSET Syllabus 2025: ಕೆ-ಸೆಟ್‌ ಪರೀಕ್ಷೆಯ ಪಠ್ಯಕ್ರಮ ಬಿಡುಗಡೆ

ಪ್ರಸ್ತುತ ವರ್ಷದ ಕರ್ನಾಟಕ ರಾಜ್ಯ‌ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್‌)ಯ ಪರೀಕ್ಷಾ ಪಠ್ಯಕ್ರಮವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಸೋಮವಾರ(ಸೆ.1) ಬಿಡುಗಡೆ ಮಾಡಿದೆ. ಕೆ-ಸೆಟ್‌ ಪರೀಕ್ಷೆಯು ನವೆಂಬರ್‌ 2 ರಂದು ನಡೆಯಲಿದೆ. ಒಟ್ಟು 33 ವಿಷಯಗಳ ವಿಷಯವಾರು ಪಠ್ಯಕ್ರಮವನ್ನು ಕೆಇಎ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/ಗೆ ಭೇಟಿ ನೀಡುವ ಮೂಲಕ ಪಠ್ಯಕ್ರಮವಿರುವ ಪಿಡಿಎಫ್‌ ಡೌನ್ಲೋಡ್‌ ಮಾಡಿಕೊಳ್ಳಬಹುದಾಗಿದೆ. KSET 2025 Subjects Wise Syllabus ಕೆ-ಸೆಟ್‌ 2025 ವಿಷಯವಾರು ಪಠ್ಯಕ್ರಮವನ್ನು ಈ … More

ಕೆಸೆಟ್ ಪರೀಕ್ಷೆ ನ.02ಕ್ಕೆ | ನೋಂದಣಿ ಸೆ.1ರಿಂದ ಪ್ರಾರಂಭ

ಪ್ರಸಕ್ತ ವರ್ಷದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್-2025)ಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌.ಪ್ರಸನ್ನ ಅಧಿಸೂಚನೆ ತಿಳಿಸಿದ್ದಾರೆ. ಒಟ್ಟು 33 ವಿಷಯಗಳನೊಳಗೊಂಡ ಕೆಸೆಟ್‌ ಪರೀಕ್ಷೆಯು ನ.02 (ಭಾನುವಾರ)ರಂದು ನಡೆಯಲಿದೆ. ಯುಜಿಸಿಯಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಪಡೆದಿರುವವರು ಅಥವಾ ಪ್ರಸ್ತುತ ವರ್ಷದಲ್ಲಿ ಪ್ರಥಮ/ದ್ವಿತೀಯ ವರ್ಷದಲ್ಲಿ ವ್ಯಾಸಾಂಗ ಮಾಡುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು https://cetonline.karnataka.gov.in/kea/ನ ಮೂಲಕ ಸೆ.24ರೊಳಗೆ ಸಲ್ಲಿಸಬಹುದು. ಸಾಮಾನ್ಯ ವರ್ಗ, … More

Indian Navy SSC Officers 2025: ಭಾರತೀಯ ನೌಕಾಪಡೆ SSC ಅಧಿಕಾರಿ ಹುದ್ದೆಗಳ ನೇಮಕಾತಿ

ಭಾರತೀಯ ನೌಕಾಪಡೆ (Indian Vavy)ಯು ಜೂನ್ 2026 (26 ರಂದು) ಕೋರ್ಸ್‌ನ ಮೂಲಕ ಕಿರು ಸೇವಾ ಆಯೋಗ(SSC) ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಭಾರತೀಯ ನೌಕಾಪಡೆಯು ಕೇರಳದ ಎಳಿಮಲದಲ್ಲಿರುವ ಭಾರತೀಯ ನೌಕಾ ಅಕಾಡೆಮಿ (INA) ಯಲ್ಲಿ ಜೂನ್ 2026 ರಿಂದ ಪ್ರಾರಂಭವಾಗುವ ಶಾರ್ಟ್ ಸರ್ವಿಸ್ ಕಮಿಷನ್ (SSC) ಕೋರ್ಸ್‌ಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 260 ಅಧಿಕಾರಿ ಹುದ್ದೆಗಳಿಗೆ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು … More

ನೌಕಾಪಡೆ ಡಾಕ್‌ಯಾರ್ಡ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಮುಂಬೈನ ನೌಕಾಪಡೆ ಡಾಕ್‌ಯಾರ್ಡ್‌ ಅಪ್ರೆಂಟಿಸ್ ಶಾಲೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಗೊತ್ತುಪಡಿಸಿದ ಟ್ರೇಡ್‌ಗಳಲ್ಲಿ ಅಪ್ರೆಂಟಿಸ್ ತರಬೇತಿಗಾಗಿ ಪ್ರಸ್ತುತ ಖಾಲಿ ಇರುವ ಅಡ್ವಾನ್ಸ್ಡ್ ಮೆಕ್ಯಾನಿಕ್, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಫಿಟ್ಟರ್, ಮೆಷಿನಿಸ್ಟ್ ಸೇರಿದಂತೆ ಇತರೆ ಒಟ್ಟು 286 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಬಯಸುವ ಆಸಕ್ತ ಮತ್ತು ಅರ್ಹ ಪುರುಷ/ ಮಹಿಳಾ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ https://applicationportal.in/ ಜಾಲತಾಣಕ್ಕೆ ಭೇಟಿ ನೀಡಿ. … More

ಪಿಯುಸಿ ವಿದ್ಯಾರ್ಥಿಗಳಿಗೆ; ಉಚಿತ CA ಫೌಂಡೇಶನ್ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ವತಿಯಿಂದ 2025-26ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ CA ಫೌಂಡೇಶನ್ ಪರೀಕ್ಷಾ ಪೂರ್ವ ತರಬೇತಿ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ.ಜಾತಿಯ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಚಾರ್ಟರ್ಡ್ ಅಕೌಂಟೆನ್ಸಿ (CA) ಕೋರ್ಸ್‌ ಪ್ರವೇಶಾತಿಗಾಗಿ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಲಾಗುವ ಕಡ್ಡಾಯ ಪ್ರವೇಶ ಪರೀಕ್ಷೆಯಾಗಿರುವ CA ಫೌಂಡೇಶನ್ ಪರೀಕ್ಷೆಗೆ ಉಚಿತವಾಗಿ ಆನ್ಲೈನ್ ಮೂಲಕ ಪೂರ್ವ ಪರೀಕ್ಷಾ ತರಬೇತಿ ನೀಡಲು ಅಭ್ಯರ್ಥಿಗಳನ್ನು … More

ಯುಜಿಸಿಇಟಿ: ಎರಡನೇ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ

ಯುಜಿಸಿಇಟಿ ಮತ್ತು ಇತರೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಶನಿವಾರ(ಆ.30) ಬಿಡುಗಡೆ. ವೈದ್ಯಕೀಯ ಸೀಟುಗಳ ಅಖಿಲ ಭಾರತ ಎರಡನೇ ಸುತ್ತಿನ ವೇಳಾಪಟ್ಟಿ ಪರಿಷ್ಕರಣೆ ಹಂತದಲ್ಲಿದ್ದು, ವಿಳಂಬವಾಗುತ್ತಿದೆ ಆದ್ದರಿಂದ ಯುಜಿಸಿಇಟಿ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಫಲಿತಾಂಶ ಪ್ರಕಟಿಸಲಾಗಿದೆ. ಸೀಟು ಹಂಚಿಕೆಯಾದವರಿಗೆ ನಾಲ್ಕು ಛಾಯ್ಸ್‌ಗಳ ಆಯ್ಕೆಗೆ ಅವಕಾಶ ನೀಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಆ.30 ರಿಂದ ಸೆ.2ರವರೆಗೆ ಛಾಯ್ಸ್‌ ಆಯ್ಕೆ … More

UGCET ಎರಡನೇ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ

ಪ್ರಸಕ್ತ ಸಾಲಿನ ಯುಜಿ-ಸಿಇಟಿ ಪ್ರವೇಶಾತಿ ಸಂಬಂಧ ಎರಡನೇ ಸುತ್ತಿನ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಶನಿವಾರ(ಆ.30) ಬಿಡುಗಡೆ ಮಾಡಿದೆ. ಇಂಜಿನಿಯರಿಂಗ್ ಸೇರಿದಂತೆ ಮುಂತಾದ ಕೋರ್ಸುಗಳ ಪ್ರವೇಶಾತಿಗಾಗಿ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಹಾಗೂ ಕಟ್ ಆಫ್ ಪಟ್ಟಿಯನ್ನು ಕೆಇಎ ಅಧಿಕೃತ https://cetonline.karnataka.gov.in/kea/ ಜಾಲತಾಣದಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ. ಎರಡನೇ ಸುತ್ತಿನ ಫಲಿತಾಂಶ ಪರಿಶೀಲನೆ ಹೇಗೆ? UGCET – UGNEET ಎರಡನೇ ಸುತ್ತಿನ ಅಂತಿಮ ಫಲಿತಾಂಶ ಪರಿಶೀಲಿಸುವ ವಿಧಾನ; • … More

ಸುಪ್ರೀಂ ಕೋರ್ಟ್​ನಲ್ಲಿ ಕೋರ್ಟ್ ಮಾಸ್ಟರ್ ಹುದ್ದೆಗಳ ಭರ್ತಿ.!!

ಕೋರ್ಟ್ ಮಾಸ್ಟರ್(ಶಾರ್ಟ್​ಹ್ಯಾಂಡ್) ಹುದ್ದೆಗಳ ನೇಮಕಾತಿಗಾಗಿ ಸುಪ್ರೀಂ ಕೋರ್ಟ್ ಆಫ್ ಇಂಡಿಯಾ (SCI) ಅಧಿಸೂಚನೆಯನ್ನು ಹೊರಡಿಸಿದೆ. ಭಾರತದ ಸುಪ್ರೀಂ ಕೋರ್ಟ್​ನ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 30 ಕೋರ್ಟ್ ಮಾಸ್ಟರ್ (ಶಾರ್ಟ್ ಹ್ಯಾಂಡ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SCI ಅಧಿಕೃತ ವೆಬ್ಸೈಟ್https://www.sci.gov.in/recruitments/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ … More

ಪೊಲೀಸ್ ಇಲಾಖೆ(KSP)ಯಲ್ಲಿ ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿ; ಅರ್ಜಿ ಸಲ್ಲಿಕೆ ಪ್ರಾರಂಭ

ಕರ್ನಾಟಕ ಕರಾವಳಿ ಭದ್ರತಾ ಪೊಲೀಸ್ ಠಾಣೆಗಳಲ್ಲಿ ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕರಾವಳಿ ಭದ್ರತಾ ಪೊಲೀಸ್ ಠಾಣೆಗಳಿಗೆ ಮಂಜೂರಾದ ದೋಣಿಗಳನ್ನು ನಡೆಸಲು 54 ವಿವಿಧ ರೀತಿಯ ತಾಂತ್ರಿಕ ಸಿಬ್ಬಂದಿ ಹುದ್ದೆಗಳಿಗೆ (ನಿವೃತ್ತ ನೌಕಾಪಡೆ/ಕೋಸ್ಟ್ ಗಾರ್ಡ್/ಬಿಎಸ್‌ಎಫ್ (ವಾಟರ್ ವಿಂಗ್) ಅಧಿಕಾರಿಗಳು/ಸಿಬ್ಬಂದಿ) ಅಭ್ಯರ್ಥಿಗಳನ್ನು 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಸೆ.30 ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಉಡುಪಿಯ ಕರಾವಳಿ ಭದ್ರತಾ ಪೊಲೀಸ್, ಪೊಲೀಸ್ ಅಧೀಕ್ಷಕರು ಹಾಗೂ … More

ಪಶ್ಚಿಮ ಮಧ್ಯ ರೈಲ್ವೆ(WCR)ದಲ್ಲಿ 2,865 ಅಪ್ರೆಂಟಿಸ್‌ಗಳ ನೇಮಕಾತಿ; ಅರ್ಜಿ ಸಲ್ಲಿಕೆ ಆರಂಭ

ಪಶ್ಚಿಮ ಮಧ್ಯ ರೈಲ್ವೆಯಲ್ಲಿ (WCR) 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ರೈಲ್ವೆ ನೇಮಕಾತಿ ಕೋಶವು ಬುಧವಾರ (ಆ.20) ಅಧಿಸೂಚನೆಯನ್ನು ಹೊರಡಿಸಿದೆ. ಪಶ್ಚಿಮ ಮಧ್ಯ ರೈಲ್ವೆಯ ವ್ಯಾಪ್ತಿಯಲ್ಲಿರುವ ಘಟಕಗಳು/ಕಾರ್ಯಗಾರಗಳ ವಿವಿಧ ವಿಭಾಗಗಳಲ್ಲಿ ಒಟ್ಟು 2,865 ಅಪ್ರೆಂಟಿಸ್‌ ಹುದ್ದೆಗಳ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 29ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ನೇಮಕಾತಿ ಅಧಿಸೂಚನೆ ತಿಳಿಸಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: … More