ಇಂಡಿಯನ್ ಓವರ್ಸೀಸ್ ಬ್ಯಾಂಕಿ(IOB)ನಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿ

2025-26ನೇ ಸಾಲಿಗೆ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB) ಆ.8ರಂದು ಅಧಿಸೂಚನೆಯನ್ನು ಹೊರಡಿಸಿದೆ. ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ ಒಟ್ಟು 750 ಅಪ್ರೆಂಟಿಸ್‌ಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಬ್ಯಾಂಕಿನಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಅಧಿಕೃತ ವೆಬ್ಸೈಟ್ https://www.iob.in/Careersಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ … More

Union Bank Vacancy 2025: ಯೂನಿಯನ್​ ಬ್ಯಾಂಕಿನಲ್ಲಿ ವೆಲ್ತ್ ಮ್ಯಾನೇಜರ್ ಹುದ್ದೆಗಳ ಭರ್ತಿ, ಆಪ್ಲೈ ಮಾಡಿ

ಇಂಡಿಯಾ ಹಾಗೂ ವಿದೇಶಗಳಲ್ಲಿ ಕಾರ್ಯನಿರ್ವಹಿಸುವ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವೆಲ್ತ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಮುಂಬೈ ಕಚೇರಿಯ ಮಾನವಶಕ್ತಿ ಯೋಜನೆ ಮತ್ತು ನೇಮಕಾತಿ ವಿಭಾಗ ಅಧಿಸೂಚನೆಯನ್ನು ಹೊರಡಿಸಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ವೆಲ್ತ್ ಮ್ಯಾನೇಜರ್ (ವಿಶೇಷ ಅಧಿಕಾರಿಗಳ) ಒಟ್ಟು 250 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ನಡೆಯಲಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಯೂನಿಯನ್ ಬ್ಯಾಂಕ್ … More

ಗಡಿ ಭದ್ರತಾ ಪಡೆಯಲ್ಲಿ ಹೆಡ್ ಕಾನ್ಸ್ಟೇಬಲ್‌(RO,RM) ಹುದ್ದೆಗಳ ಭರ್ತಿ, ಅರ್ಜಿ ಸಲ್ಲಿಸಿ!

ಗಡಿ ಭದ್ರತಾ ಪಡೆಯು 2025ನೇ ಸಾಲಿಗೆ ಖಾಲಿ ಇರುವ ಗ್ರೂಪ್​-ಸಿ ಹೆಡ್ ಕಾನ್ಸ್ಟೇಬಲ್‌(ರೇಡಿಯೋ ಆಪರೇಟರ್ ಮತ್ತು ರೇಡಿಯೋ ಮೆಕ್ಯಾನಿಕ್) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ನಿರ್ದೇಶನಾಲಯ ಸಾಮಾನ್ಯ ಗಡಿ ಭದ್ರತಾ ಪಡೆಯ ಸಂವಹನ ವ್ಯವಸ್ಥೆಯಲ್ಲಿ ಒಟ್ಟು 1,121 ಹೆಡ್ ಕಾನ್ಸ್ಟೇಬಲ್‌(RO RM) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು BSF ಅಧಿಕೃತ ವೆಬ್ಸೈಟ್ https://rectt.bsf.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. … More

ವಿಕಲಚೇತನ ಅಭ್ಯರ್ಥಿಗಳಿಗೆ ವಿವಿಧ ಯೋಜನೆಯಡಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ವಿಕಲಚೇತನ ಅಭ್ಯರ್ಥಿಗಳಿಗೆ ಫಲಾನುಭವಿ ಆಧಾರಿತ ಯೋಜನೆಗಳಡಿ ವಿವಿಧ ಸೌಲಭ್ಯಗಳನ್ನು ನೀಡಲು ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2025-26ನೇ ಸಾಲಿಗೆ ಒಟ್ಟು 13 ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ನೇರ ನಗದು ವರ್ಗಾವಣೆ(ಡಿ.ಬಿ.ಟಿ) ಮೂಲಕ ಫಲಾನುಭವಿಗಳಿಗೆ ಹಣ ಜಮೆ ಆಗಲಿದೆ. ಅರ್ಹ ವಿಕಲಚೇತನ ಅಭ್ಯರ್ಥಿಗಳು https://sevasindhu.karnataka.gov.in/ಗೆ ಭೇಟಿ ನೀಡುವ ಮೂಲಕ ಸೆ.30ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಅವರು ಕೋರಿದ್ದಾರೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: … More

DCET 2025 – ಅಂತಿಮ ಸುತ್ತಿನ ಫಲಿತಾಂಶ ಹಾಗೂ ಫಲಿತಾಂಶದ ನಂತರದ ವೇಳಾಪಟ್ಟಿ ಪ್ರಕಟ

ಪ್ರಸಕ್ತ ಸಾಲಿನ ಡಿಸಿಇಟಿ ಮೂರನೇ ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶುಕ್ರವಾರ (ಆ.22)ರಂದು ಬಿಡುಗಡೆ ಮಾಡಿದೆ. ಅರ್ಹ ಡಿಪ್ಲೊಮಾ ಅಭ್ಯರ್ಥಿಗಳಿಗೆ (ಆರ್ಕಿಟೆಕ್ಟರ್ ಸೀಟಿಗೆ ಪ್ರವೇಶ, ವೃತ್ತಿನಿರತ ಅಭ್ಯರ್ಥಿಗಳಿಗೆ ಸೀಟು ಹಂಚಿಕೆ ಹಾಗೂ ಮೇಕ್ ಅಪ್ (ಮರು ಪರೀಕ್ಷೆ) ಅರ್ಹತೆ ಪಡೆದ ಡಿಪ್ಲೊಮಾ ವಿದ್ಯಾರ್ಥಿಗಳು) ಸೇರಿದಂತೆ ಪ್ರಸ್ತುತ ಪ್ರಾಧಿಕಾರವು 3ನೇ ಹಾಗೂ ಅಂತಿಮ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಮತ್ತು ಫಲಿತಾಂಶದ ನಂತರದ ಪರಿಷ್ಕೃತ ವೇಳಾಪಟ್ಟಿಯನ್ನು ಕೆಇಎ ಅಧಿಕೃತ ವೆಬೈಟ್ https://cetonline.karnataka.gov.in/kea/dcet2025ನಲ್ಲಿ … More

ಕಂದಾಯ ಇಲಾಖೆಯಲ್ಲಿ ಕಾನೂನು ಅಧಿಕಾರಿ, ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿ

ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರಿಯವರ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಕಂದಾಯ ಇಲಾಖೆಯು ಕಿರು ಅಧಿಸೂಚನೆ ಹೊರಡಿಸಿದೆ. ಬೆಂಗಳೂರಿನ ವಿಭಾಗ ಮತ್ತು ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ (ಐಎಂಎ ಹಾಗೂ ಇತರೆ ಕಂಪನಿ ವಂಚನೆ ಪ್ರಕರಣಗಳು) ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ (ಕಾನೂನು ಅಧಿಕಾರಿ-01, ಸ್ಟೆನೋಗ್ರಾಫರ್-01 ಹಾಗೂ ಕಾನೂನು ಟೈಪಿಸ್ಟ್-01) ಸೇರಿದಂತೆ ಒಟ್ಟು 03 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ … More

ಕೃಷಿ ವಿದ್ಯಾರ್ಥಿಗಳಿಗೆ ಉಚಿತ ಅಡ್ವಾನ್ಸ್ಡ್ ಡ್ರೋನ್ ತರಬೇತಿ ನೀಡಲು ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ ವಸತಿಯುತ ಅಡ್ವಾನ್ಸ್ಡ್ ಡ್ರೋನ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಮೂಲಕ ಪರಿಶಿಷ್ಟ ಜಾತಿಯ ಕೃಷಿ ವಿಜ್ಞಾನ ವಿದ್ಯಾರ್ಥಿಗಳು, ಪದವೀಧರರು, ಮತ್ತು ಕೃಷಿ ವಿಜ್ಞಾನಿ ಅಭ್ಯರ್ಥಿಗಳಿಗೆ ಡ್ರೋನ್ ಉಪಕರಣವನ್ನು ವಿವಿಧ ಕ್ಷೇತ್ರಗಳಲ್ಲಿ ಉಪಯೋಗಿಸುವ ಸಂಬಂಧ ಉಚಿತವಾಗಿ ವಸತಿಯುತ ಅಡ್ವಾನ್ಸ್ಡ್ ಡ್ರೋನ್ ತರಬೇತಿ ನೀಡುತ್ತಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆ.31ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. … More

UPSC EPFO 2025: ಯುಪಿಎಸ್ಸಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ (EPFO) ಖಾಲಿ ಇರುವ 230 ವಿವಿಧ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಕೇಂದ್ರ ಲೋಕಸೇವಾ ಆಯೋಗವು ಕಿರು ಅಧಿಸೂಚನೆ(UPSC EPFO EO AO Notification 2025)ಯನ್ನು ಹೊರಡಿಸಿದೆ. ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ(EPFO)ಯವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜಾರಿ ಅಧಿಕಾರಿ (EO) /ಖಾತೆ ಅಧಿಕಾರಿ (AO) ಹಾಗೂ ಭವಿಷ್ಯ ನಿಧಿ ಆಯುಕ್ತರ (APFC) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಕೆಯು ಜು.29ರಿಂದ ಪ್ರಾರಂಭವಾಗಲಿದೆ. ಆಸಕ್ತ ಮತ್ತು ಅರ್ಹ … More

ಯುಜಿಸಿಇಟಿ, ನೀಟ್‌ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ; ಅಣುಕು ಫಲಿತಾಂಶ 29ಕ್ಕೆ

ವೈದ್ಯಕೀಯ, ಇಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಪ್ರಕ್ರಿಯೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ (ಆ.20) ಬಿಡುಗಡೆ ಮಾಡಿದೆ. ಅರ್ಹ ಅಭ್ಯರ್ಥಿಗಳು ಆ.21 ರಿಂದ 25ರವರೆಗೆ ಆಯ್ಕೆಯನ್ನು ಮಾರ್ಪಾಡು ಮಾಡಬಹುದು. ಸದರಿ ಸುತ್ತಿನ ಸೀಟು ಹಂಚಿಕೆ ಅಣುಕು ಫಲಿತಾಂಶ ಆ.29 ಪ್ರಕಟಿಸಲಾಗುವುದು. ಆಯುಷ್‌ ಕೋರ್ಸುಗಳಿಗೆ ಸರ್ಕಾರ ನೀಡಿರುವ ಸೀಟ್‌ ಮಾಟ್ರಿಕ್ಸ್‌ ಅನ್ನೇ ಎರಡನೇ ಸುತ್ತಿನ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ ಹಾಗೂ ರೋಸ್ಟರ್‌ ಪದ್ಧತಿಯ ಅನ್ವಯ ಸೀಟು … More

ಭೂಮಿ ಖರೀದಿಸಲು ಸರ್ಕಾರದಿಂದ ಸಹಾಯಧನ, ಅರ್ಜಿ ಆಹ್ವಾನ

ಪ್ರಸಕ್ತ ಸಾಲಿಗೆ “ಭೂ ಒಡೆತನ ಯೋಜನೆ”ಯಡಿ ಭೂ ರಹಿತ ಪ.ಪಂಗಡ ವರ್ಗದವರಿಗೆ ಭೂಮಿ ಖರೀದಿಸಲು ಸಹಾಯಧನ, ಸಾಲ ಸೌಲಭ್ಯ ನೀಡಲು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಂತ ಕೃಷಿ ಭೂಮಿಯನ್ನು ಹೊಂದುವುದು ಎಷ್ಟೋ ಬಡ ವರ್ಗದ ಜನರ ಕನಸಾಗಿರುತ್ತದೆ. ಅಂತಹ ಅಶಕ್ತ ಬಡವರ್ಗದ ಭೂ ರಹಿತ ಕೃಷಿ ಕಾರ್ಮಿಕರ ಕುಟುಂಬದ ಮಹಿಳೆಯರಿಗೆ ಭೂಮಿ ಖರೀದಿಸಲು ಸಾಲ ಹಾಗೂ ಸಹಾಯಧನ ಸೌಲಭ್ಯವನ್ನು ನೀಡಲು ಸರ್ಕಾರ ಭೂ ಒಡೆತನ ಯೋಜನೆಯನ್ನು ಜಾರಿಗೆ … More