2025-26ನೇ ಸಾಲಿನ ಅರೆ ವೈದ್ಯಕೀಯ ಡಿಪ್ಲೊಮಾ ಕೋರ್ಸ್‌ಗಳಿಗೆ ಸರ್ಕಾರಿ ಕೋಟಾದ ಸೀಟುಗಳಡಿ ಪ್ರವೇಶ ಪಡೆಯಲು ಅರ್ಹ ಅಭ್ಯರ್ಥಿಗಳಿಂದ(Karnataka Paramedical Admission 2025) ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರಿ ವೈದ್ಯಕೀಯ ಕಾಲೇಜುಗಳು ಮತ್ತು ಇತರ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಯಾರಾ ವೈದ್ಯಕೀಯ ಡಿಪ್ಲೊಮಾ ಕೋರ್ಸ್‌ಗಳಿಗೆ ಮತ್ತು ಖಾಸಗಿ ಪ್ಯಾರಾ ವೈದ್ಯಕೀಯ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾ ಸೀಟುಗಳ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರೆ ವೈದ್ಯಕೀಯ ಮಂಡಳಿಯ ಅಧಿಕೃತ ವೆಬ್ಸೈಟ್ https://www.pmbkarnataka.org/ಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ನರ್ಸಿಂಗ್ ಹಾಗೂ ಅರೆ ವೈದ್ಯಕೀಯ ವಿಜ್ಞಾನಗಳ ಶಿಕ್ಷಣ (ನಿಯಂತ್ರಣ) ಪ್ರಾಧಿಕಾರವು ಅಧಿಸೂಚನೆಯಲ್ಲಿ ತಿಳಿಸಿದೆ.
ಈ ಲೇಖನದಲ್ಲಿ ಸದರಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು, ಅರ್ಹತೆ, ವಯೋಮಿತಿ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ. ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – ಜೂನ್ 26, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 25, 2025
ಕೋರ್ಸ್ ಗಳ ವಿವರ:
ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞಾನದಲ್ಲಿ ಡಿಪ್ಲೊಮಾ (DMLT)
ವೈದ್ಯಕೀಯ ಇಮೇಜಿಂಗ್ ತಂತ್ರಜ್ಞಾನದಲ್ಲಿ ಡಿಪ್ಲೊಮಾ (DMIT)
ಆರೋಗ್ಯ ನಿರೀಕ್ಷಕರಲ್ಲಿ ಡಿಪ್ಲೊಮಾ (DHI)
ವೈದ್ಯಕೀಯ ದಾಖಲೆ ತಂತ್ರಜ್ಞಾನದಲ್ಲಿ ಡಿಪ್ಲೊಮಾ (DMRT)
ಡಯಾಲಿಸಿಸ್ ತಂತ್ರಜ್ಞಾನದಲ್ಲಿ ಡಿಪ್ಲೊಮಾ (DDT)
ಆಪರೇಷನ್ ಥಿಯೇಟರ್ ಮತ್ತು ಅರಿವಳಿಕೆ ತಂತ್ರಜ್ಞಾನದಲ್ಲಿ ಡಿಪ್ಲೊಮಾ (DOT & AT)