Karnataka Paramedical Admission 2024(Start): ಪ್ಯಾರಾ ಮೆಡಿಕಲ್ ಸೇರಿದಂತೆ ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಫಾಲೋ ಮಾಡಿ
Paramedical Admission 2024-25
Paramedical Admission 2024-25

ಕರ್ನಾಟಕ ನರ್ಸಿಂಗ್ ಹಾಗೂ ಅರೆ ವೈದ್ಯಕೀಯ ವಿಜ್ಞಾನ ಶಿಕ್ಷಣ ಪ್ರಾಧಿಕಾರದ ವತಿಯಿಂದ 2024 25ನೇ ಶೈಕ್ಷಣಿಕ ಸಾಲಿನ ಅರೆ ವೈದ್ಯಕೀಯ ವಿವಿಧ ಡಿಪ್ಲೋಮಾ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಕ್ರಿಯೆಯನ್ನು ಪ್ರಾರಂಭ ಮಾಡಿದೆ. ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಇತರೆ ಸರ್ಕಾರಿ ಆಸ್ಪತ್ರೆಗಳಲ್ಲಿನ ಸರ್ಕಾರಿ ಕೋಟದ ಸೀಟುಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ತಮ್ಮ ಜೀವನವನ್ನು ವೈದ್ಯಕೀಯ ಕ್ಷೇತ್ರದಲ್ಲಿ ನಿರ್ವಹಿಸಲು ಇಚ್ಚಿಸುವವರು SSLC ಮತ್ತು PUC ನಂತರ ತೆಗೆದುಕೊಳ್ಳಬಹುದಾದ ಬೆಸ್ಟ್ ಕೋರ್ಸ್ ಇದಾಗಿದ್ದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ಜುಲೈ 12ಕ್ಕೆ ನಿಗದಿಪಡಿಸಲಾಗಿದೆ. ಹಾಗಾಗಿ ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟಿನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ತಮ್ಮ ಹಿಂದಿನ ಶೈಕ್ಷಣಿಕ ಕಾರ್ಯಕ್ರಮದಲ್ಲಿ ತೆಗೆದ ಅಂಕಗಳ ಆಧಾರದ ಮೇಲೆ ಅರ್ಹತಾ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ನಂತರ ಕೌನ್ಸಿಲಿಂಗ್ ನಡೆಸಿ ಅಂತಿಮ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿ ದಾಖಲು ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕೌನ್ಸಿಲಿಂಗ್ ಗೆ ಕರೆಯಲಾಗುತ್ತದೆ. ಈ ಸಮಯದಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ತಮ್ಮ ಎಲ್ಲಾ ಮೂಲ ಶೈಕ್ಷಣಿಕ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು. ಈ ಪ್ರವೇಶಾತಿ ಪ್ರಕ್ರಿಯೆ ಕುರಿತು ಹೆಚ್ಚಿನ ಮಾಹಿತಿಯನ್ನು ಕೆಳಗಿ ನೀಡಲಾಗಿದ್ದು ಗಮನವಿಟ್ಟು ಓದಿರಿ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment