Bara Parihara Payment Status Check 2024: ನಮಸ್ಕಾರ ಬಂಧುಗಳೇ, ಇಂದು ನಾವು ಬರ ಪರಿಹಾರ ಪೇಮೆಂಟ್ ವರದಿ ಹೇಗೆ ಚೆಕ್ ಮಾಡುವುದು ಯಾವ ಜಿಲ್ಲೆಗೆ ಎಷ್ಟು ಅನುದಾನ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂಬುದರ ಬಗ್ಗೆ ಮಾಹಿತಿ ನೀಡಲಿದ್ದೇವೆ.
ಪರಿಹಾರ ಪರಿಹಾರಕ್ಕಾಗಿ ಕಾಯುತ್ತಿರುವ ರಾಜ್ಯದ ರೈತರಿಗೆ ಸರ್ಕಾರವು ಬರ ಪರಿಹಾರ ಹಣವನ್ನು ರೈತರ ಖಾತೆಗೆ ವರ್ಗಾವಣೆ ಮಾಡಲು ನಿರ್ಧಾರ ಮಾಡಿದೆ.
ಕಳೆದ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಕೇಂದ್ರ ಸರಕಾರ ಎನ್‌ಡಿಆರ್‌ಎಫ್‌ನಿಂದ ಬಿಡುಗಡೆ ಮಾಡಿರುವ 3,454.22 ಕೋಟಿ ರೂ.ಗಳನ್ನು ಅರ್ಹ ರೈತರಿಗೆ ವಿತರಿಸಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಿಗೆ ಹಣವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಕಳೆದ ಶುಕ್ರವಾರ ಆದೇಶ ಹೊರಡಿಸಿದೆ.
Bara Parihara Payment Status Check Online 2024
Bhoomi Online Bara/Bele Parihara District Wise Amount List 2023-24
ಈಗಾಗಲೇ ರಾಜ್ಯ ಸರಕಾರ ಕಳೆದ ಜನವರಿಯಲ್ಲಿ ರೈತರಿಗೆ ಗರಿಷ್ಠ 2 ಸಾವಿರ ರೂ.ವರೆಗೆ ಮಧ್ಯಂತರ ಪರಿಹಾರ ಪಾವತಿಸಿದೆ. ಈಗ ಆ ಮೊತ್ತ ಕಡಿತ ಮಾಡಿಕೊಂಡು ಎಸ್‌ಡಿಆರ್‌ಎಫ್ ಮಾರ್ಗಸೂಚಿ ಅನ್ವಯ ನಿಗದಿಯಾದ ಬಾಕಿ ಮೊತ್ತ ಜಮಾ ಮಾಡಲು ಸೂಚಿಸಲಾಗಿದೆ. ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿ ರೈತರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗುತ್ತದೆ.ಹಾಗದರೆ ಈ ಲೇಖನದಲ್ಲಿ ಸರ್ಕಾರ ನೀಡುವ ಬರ ಪರಿಹಾರದ ಹಣ ಬಂದಿರುವ ಕುರಿತು ಪರಿಶೀಲಿಸುವ ವಿಧಾನವನ್ನು ಈ ಕೆಳಗೆ ನೀಡಲಾಗಿದೆ.
ಕರ್ನಾಟಕ ಸರ್ಕಾರವು 2023-24 ನೇ ಸಾಲಿನಲ್ಲಿ ಬರ ಪರಿಹಾರ ಹಣಕ್ಕಾಗಿ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಿದ್ದು ಪಟ್ಟಿಯನ್ನು ಕೃಷಿ ಇಲಾಖೆಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
How to Check Bele Parihara Payment Status 2023-24 Karnataka
ಮೊದಲು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಥವಾ ನಾವು ಕೆಳಗೆ ನೀಡಲಾದ ಲಿಂಕ್ ಗೆ ಭೇಟಿ ನೀಡಿ
ನಂತರ ಶೋಧನೆ / Search: ಅಲ್ಲಿ ಆಧಾರ್ ಸಂಖ್ಯೆ/Aadhar Number ನ ಆಯ್ಕೆ ಮಾಡಿಕೊಳ್ಳಿ ನಂತರ Calamity Type ನಲ್ಲಿ Drought ನ ಆಯ್ಕೆ ಮಾಡಿ, Year ನಲ್ಲಿ 2023-24 ಆಯ್ಕೆ ಮಾಡಿಕೊಳ್ಳಿ.
ಕೊನೆಗೆ ಆಧಾರ್ ಸಂಖ್ಯೆ ನಮೂದಿಸಿ/Enter Aadhaar ಮತ್ತು ಕ್ಯಾಪ್ಚಾ/Captcha ಹಾಕಿ ವಿವರಗಳನ್ನು ಪಡೆಯಲು/Fetch Details ಮೇಲೆ ಕ್ಲಿಕ್ ಮಾಡಿ.
ಅಲ್ಲಿ ಬರ ಪರಿಹಾರ ಜಮಾ ಆಗಿದ್ದರೆ ಅಲ್ಲಿ ಎಲ್ಲಾ ಮಾಹಿತಿ ಬರುತ್ತದೆ.
ಅಂತಿಮ ನುಡಿ: ಈ ಮಾಹಿತಿ ನಿಮಗೆ ಸಹಾಯಕವಾಗಿದೆ ಎಂದು ನಾವು ಭಾವಿಸಿದ್ದೇವೆ. ಇದೆ ರೀತಿ ಹೆಚ್ಚಿನ ಮಾಹಿತಿಗಾಗಿ ನಮ್ಮ ಅಧಿಕೃತ ಟೆಲಿಗ್ರಾಂ ಚಾನೆಲ್ ಅಥವಾ ವಾಟ್ಸಾಪ್ಪ್ ಗ್ರೂಪ್ ಗೆ ಜಾಯಿನ್ ಆಗಿರಿ.