ಪಿಡಿಒ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

Published on:

ಫಾಲೋ ಮಾಡಿ
PDO HK Provisional Selection List 2025
PDO HK Selection List 2025

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಹೈದ್ರಬಾದ್‌ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಅರ್ಹತೆ ಪಡೆದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗವು ಬುಧವಾರ ಪ್ರಕಟಿಸಿದೆ.

2024ರ ಸೆ.17ರಂದು ಅಧಿಸೂಚಿಸಿ, ನ.17ಕ್ಕೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್‌ಸೈಟ್‌ https://kpsc.kar.nic.in/ಗೆ ಭೇಟಿ ನೀಡಿ ತಾತ್ಕಾಲಿಕ ಆಯ್ಕೆಪಟ್ಟಿ ಪರಿಶೀಲನೆ ಮಾಡಿಕೊಳ್ಳಬಹುದು. ಸದರಿ ಆಯ್ಕೆಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಿಸಿದ 7 ದಿನಗಳೊಳಗೆ (ಡಿ.23) ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗ ಸೌಧ, ಬೆಂಗಳೂರು-560001 ವಿಳಾಸಕ್ಕೆ ಸಲ್ಲಿಸಬಹುದು ಎಂದು ಆಯೋಗ ಹೊರಡಿಸಿದ ಪ್ರಕಟಣೆ ತಿಳಿಸಿದೆ.

About the Author

ನಾನು 2021 ರಿಂದ ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ತೊಡಗಿಕೊಂಡಿರುವೆ. ಸದ್ಯ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪ್ರಗತಿಯಲ್ಲಿದೆ..

Leave a Comment