ಎಂಬಿಎ, ಎಂ.ಸಿ.ಎ, ಎಂಇ, ಎಂಟೆಕ್, ಎಂ.ಆರ್ಕ್ ಕೋರ್ಸುಗಳ ಪ್ರವೇಶಕ್ಕಾಗಿ ಮೊದಲನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆ ಆದ್ಯತಾ ಕ್ರಮದಲ್ಲಿ ದಾಖಲಿಸಲು ಸೆ.24 ರಿಂದ ಸೆ.28ರವೆರೆಗೆ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಣುಕು ಫಲಿತಾಂಶವನ್ನು ಸೆ.29ಕ್ಕೆ ಪ್ರಕಟಿಸಿ, ಇಚ್ಛೆ/ಆಯ್ಕೆಗಳನ್ನು ಅ.03ರವರೆಗೆ ಮಾರ್ಪಾಡು ಮಾಡಲು ಅವಕಾಶ ನೀಡಲಾಗುವುದು. ಸದರಿ ಸುತ್ತಿನ ನೈಜ ಫಲಿತಾಂಶದ ತಾತ್ಕಾಲಿಕ ಫಲಿತಾಂಶ ಅ.03ಕ್ಕೆ ಪ್ರಕಟಿಸಲಾಗುತ್ತದೆ. ಅಂತಿಮ ಫಲಿತಾಂಶವನ್ನು ಅ.4ರಂದು ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.