ಕರ್ನಾಟಕ ಪರಿಕ್ಷಾ ಪ್ರಾಧಿಕಾರವು PGCET 2024 ರ MBA ಮತ್ತು MCA ಮತ್ತು ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಿದ ಪ್ರವೇಶ ಪರೀಕ್ಷೆಯ ಕೀ ಉತ್ತರ(PGCET 2024 Revised Answer key)ಗಳನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ, 2024-25 ನೇ ಸಾಲಿಗೆ ಎಂಬಿಎ ಮತ್ತು ಎಂಸಿಎ, ಕೋರ್ಸುಗಳ ಪ್ರವೇಶಕ್ಕೆ ನಡೆಸುವ, ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ 2024 ನ್ನು ನಡೆಸಿದ್ದು, ಈ ಪರೀಕ್ಷೆಯನ್ನು ರಾಜ್ಯಾದ್ಯಂತ ಆಗಸ್ಟ್ 4 ರಂದು ನಡೆಸಲಾಗಿತ್ತು. ಸದರಿ ಪರೀಕ್ಷೆಯ ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಅದರ ಜತೆಗೆ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವನ್ನು ನೀಡಿದೆ.
ಪ್ರಕಟಿಸಿರುವ ಕೀ ಉತ್ತರಗಳಲ್ಲಿ ಏನಾದರೂ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್ ಸೈಟ್ ನ ಮೂಲಕ ಆಗಸ್ಟ್ 8 ಸಂಜೆ 5:30ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು.
ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ವರ್ಷನ್ ಕೋಡ್, ಪ್ರಶ್ನೆ ಪತ್ರಿಕೆಯ ಪ್ರಶ್ನೆ ಸಂಖ್ಯೆಗಳ ವಿವರಗಳೊಂದಿಗೆ “Justification” ಅನ್ನು PDF ರೂಪದಲ್ಲಿ ಸಲ್ಲಿಸಬೇಕು. ವಿಷಯ ತಜ್ಞರ ಸಮಿತಿಯು ಸಲಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗುತ್ತದೆ. ಈ ಲೇಖನದಲ್ಲಿ ನಾವು PGCET 2024 ಅಧಿಕೃತ ಕೀ ಉತ್ತರಗಳನ್ನು ಡೌನ್ಲೋಡ್ ಮಾಡುವುದು ಹೇಗೆ ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವುದು ಹೇಗೆ ಎಂಬುದರ ಕುರಿತು ಮಾಹಿತಿಯನ್ನು ತಿಳಿದುಕೊಳ್ಳೋಣ.