Karnataka PGCET 2024 Notification: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024-25ನೇ ಸಾಲಿನ PGCET (ಕರ್ನಾಟಕ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ)ಗೆ ನೋಂದಣಿ ಪ್ರಕ್ರಿಯೆಯನ್ನು ಆರಂಭಿಸಲಾಗಿದೆ.
ಪದವಿಯನ್ನು ಮುಗಿಸಿದ ನಂತರ ಉನ್ನತ ವಾಸಂಗಕ್ಕಾಗಿ ಈ ಪರೀಕ್ಷೆಯನ್ನು ಬರೆಯುವ ಮೂಲಕ ಸ್ನಾತಕೋತ್ತರ ಪದವಿ ಪಡೆಯಲು ಸಹಾಯವಾಗುತ್ತದೆ. ಎಂಬಿಎ, ಎಂಸಿಎ, ಎಂಟೆಕ್ ಮತ್ತು ಎಂಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅರ್ಹತೆ ಪರೀಕ್ಷೆಯಾಗಿದೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತದೆ. ಈಗಾಗಲೇ ಅರ್ಜಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಆನ್ಲೈನ್ ಮೂಲಕ ಈ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಲ ದಾಖಲೆಗಳನ್ನು ಒದಗಿಸುವ ಮೂಲಕ ಜೂನ್ 20ರ ವರೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. PGCET 2024ರ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದ್ದು ಗಮನವಿಟ್ಟು ಓದಿರಿ.
Important Dates of Karnataka PGCET 2024 Notification
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: June 26, 2024 (Extended)
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: July 07, 2024 (Extended)
ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ : July 09, 2024
ಪರೀಕ್ಷಾ ದಿನಾಂಕಗಳು: ಅತಿ ಶೀಘ್ರದಲ್ಲೇ ತಿಳಿಸಲಾಗುವುದು
Eligibility of Karnataka PGCET Exam 2024
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 50% ಅಂಕಗಳೊಂದಿಗೆ ಪದವಿ ಪಡೆದಿರಬೇಕು (SC/ST/PWD ಅಭ್ಯರ್ಥಿಗಳಿಗೆ 45%).
ಅಂತಿಮ ವರ್ಷದ ಪದವಿ ಪರೀಕ್ಷೆಯಲ್ಲಿ ಕುಳಿತುಕೊಳ್ಳುತ್ತಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದು.
Required Documents for PGCET 2024 Application Form
ಎಸ್‌ಎಸ್‌ಎಲ್‌ಸಿ / 10ನೇ ತರಗತಿ ಅಂಕಪಟ್ಟಿ
12ನೇ ತರಗತಿ / ದ್ವಿತೀಯ ಪಿಯುಸಿ ಅಂಕಪಟ್ಟಿ
ಆರ್‌ಡಿ ಸಂಖ್ಯೆಗಳು ( ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಹೈದರಾಬಾದ್ ಕರ್ನಾಟಕ ಪ್ರಮಾಣ ಪತ್ರಗಳದ್ದು, ಮೀಸಲಾತಿ ಪ್ರಮಾಣಪತ್ರಗಳು)