ಸ್ನಾತಕೋತ್ತರ ಪದವಿ ದಂತವೈದ್ಯಕೀಯ ಕೋರ್ಸುಗಳ ಪ್ರವೇಶಾತಿ ಸಂಬಂಧಿಸಿದ ಎರಡನೇ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ಬಿಡುಗಡೆ ಮಾಡಿದೆ.
ಅರ್ಹ ಅಭ್ಯರ್ಥಿಗಳು ಎಚ್ಚರಿಕೆ ಠೇವಣಿ ಮತ್ತು ಎರಡನೇ ಸುತ್ತಿನ ಆಯ್ಕೆಗಳನ್ನು ನಮೂದಿಸಲು ಜು.26ರವರೆಗೆ ಅವಕಾಶ ನೀಡಲಾಗಿತ್ತು. ಆಯ್ಕೆ ನಮೂದು ಪೋರ್ಟಲ್‌ಗೆ ಭೇಟಿ ನೀಡಿ, ಕಡ್ಡಾಯವಾಗಿ ಆಯ್ಕೆಗಳನ್ನು ಪರಿಶೀಲಿಸಿ ಮತ್ತು ಶುಲ್ಕ ರಚನೆಯನ್ನು ಪರಿಗಣಿಸಿ ಆಯ್ಕೆಗಳನ್ನು ಅಂತಿಮಗೊಳಿಸಲು ಕೆಇಎ ಪ್ರಕಟಣೆಯಲ್ಲಿ ತಿಳಿಸಿತ್ತು. ಇದೀಗ ಸದರಿ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಪಟ್ಟಿಯನ್ನು ಜು.26ರಂದು ರಾತ್ರಿ 8ಕ್ಕೆ ಕೆಇಎನ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ನಲ್ಲಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಾತ್ಕಾಲಿಕ ಸೀಟು ಹಂಚಿಕೆಯ ಫಲಿತಾಂಶವನ್ನು ಪರಿಶೀಲಿಸಬಹುದು.