WhatsApp Channel Join Now
Telegram Group Join Now

PM Free Sewing Machine Scheme: ಉಚಿತ ಹೊಲಿಗೆ ಯಂತ್ರ; ಅರ್ಜಿ ಸಲ್ಲಿಸುವುದು ಹೇಗೆ?

PM Free Sewing Machine Scheme: ನಮಸ್ಕಾರ ಬಂಧುಗಳೇ, ಇಂದು ನಾವು “ವಿಶ್ವಕರ್ಮ ಯೋಜನೆ” ಅಡಿಯಲ್ಲಿ ನೀಡುತ್ತಿರುವ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಹೇಗೆ ಸಲ್ಲಿಸುವುದು ಹಾಗೂ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಬಗ್ಗೆ ಈ ಲೇಖನದಲ್ಲಿ ಮಾಹಿತಿ ನೀಡಲಿದ್ದೇವೆ, ಅರ್ಜಿ ಸಲ್ಲಿಕೆ ತ್ವರಿತ ಲಿಂಕ್ ಗಳನ್ನು ಲೇಖನದ ಕೊನೆಯಲ್ಲಿ ನೀಡಲಾಗಿದೆ ಅಲ್ಲಿ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಿ. ಈ ಮಾಹಿತಿ ನಿಮಗೆ ಸಹಾಯವಾಗಲಿದೆ ಎಂದು ನಾವು ಭಾವಿಸಿದ್ದೇವೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಬಗ್ಗೆ ತಿಳಿಯಲು ಲೇಖನವನ್ನ ಕೊನೆವರೆಗೂ ಓದಿ.

ಕೇಂದ್ರ ಸರ್ಕಾರದ ವತಿಯಿಂದ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರವನ್ನು ನೀಡುತ್ತಿದೆ. ಹಾಗಿದ್ದರೆ ಈ ಯೋಜನೆಯ ಉಪಯೋಗವನ್ನು ಪಡೆದುಕೊಳ್ಳಲು ಯಾವ ದಾಖಲೆಗಳು ಬೇಕು, ಅರ್ಹತೆಗಳೇನು, ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ.

Pm Free Sewing Machine Scheme
Pm Free Sewing Machine Scheme

PM Free Sewing Machine Scheme 2024

ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಸ್ವಯಂ ಕಲೆ ಹಾಗೂ ಸಾಂಪ್ರದಾಯಿಕ ಕಲೆಗಳಿಗೆ ಉತ್ತೇಜನ ನೀಡಲು ಅರ್ಹತೆ ಇರುವಂತಹ ಕುಶಲಕರ್ಮಿಗಳಿಗೆ ವಿಶೇಷ ತರಬೇತಿಯನ್ನು ನೀಡುವ ಯೋಜನೆ ಇದಾಗಿದೆ.

ಈ ಯೋಜನೆ ಅಡಿಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿರುವ 18 ವರ್ಗದ ಕುಶಲಕರ್ಮಿಗಳಿಗೆ ಕೌಶಲ ಅಭಿವೃದ್ಧಿ ತರಬೇತಿ ತಾಂತ್ರಿಕ ಜ್ಞಾನ ಹೊಸ ಉಪಕರಣ ಹಾಗೂ ಬ್ಯಾಂಕ್ ಖಾತರಿ ರಹಿತ ಸಾಲ ಸೌಲಭ್ಯ ನೀಡುವುದರ ಜೊತೆಗೆ ಉಚಿತ ಹೊಲಿಗೆ ಯಂತ್ರದ ಯೋಜನೆಯು ಒಂದಾಗಿದೆ.

ಅರ್ಹತೆ ಇರುವ ಫಲಾನುಭವಿಗಳಿಗೆ ಟೂಲ್ ಕಿಟ್ ಖರೀದಿ ಮಾಡಲು ಈ ಯೋಜನೆ ಅಡಿ 15 ಸಾವಿರ ರೂ ವರೆಗಿನ ಮೌಲ್ಯದ ಈ ವೋಚರ್ಸ್ ಅಥವಾ ಈ ರುಪಿ ನೀಡುತ್ತಾರೆ. ಸರ್ಕಾರದ ಪರವಾಗಿ ಈ ಪ್ರೋತ್ಸಾಹ ಧನದ ಓಚರ್ ಗಳನ್ನು ಬ್ಯಾಂಕ್ ಮೂಲಕ ವಿತರಣೆ ಮಾಡಲಾಗುತ್ತದೆ. ಈ ಯೋಜನೆ ಅಡಿಯಲ್ಲಿ ನೊಂದಣಿ ಮಾಡಿಕೊಂಡಿರುವ ಕುಶಲಕರ್ಮಿಗಳಿಗೆ ಜಿಲ್ಲಾಮಟ್ಟದ ಸಮಿತಿಯಿಂದ ಕುಶಲಕರ್ಮಿ ಎಂದು ದೃಢೀಕರಿಸಿದ ನಂತರ 5 ರಿಂದ 7 ದಿನಗಳವರೆಗೆ ತರಬೇತಿ ನೀಡಲಾಗುತ್ತದೆ.

ಹಾಗಿದ್ದರೆ ಈ ಯೋಜನೆಯ ಅನುಕೂಲ ಪಡೆಯಲು ಇರಬೇಕಾದ ಅರ್ಹತೆಗಳೇನು?

  1. ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಸರಿಯಾಗಿ 18 ವರ್ಷ ಪೂರ್ಣಗೊಂಡಿರಬೇಕು.
  2. ಅರ್ಜಿದಾರನು ತನ್ನ ಸಾಂಪ್ರದಾಯಿಕ ಸ್ವಯಂ ಉದ್ಯೋಗದಲ್ಲಿ ತೊಡಗಿರಬೇಕು
  3. ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಯ ಲಾಭ ಸಿಗಲಿದೆ.
  4. ಅರ್ಜಿ ಸಲ್ಲಿಸುವ ಸಮಯದಲ್ಲಿ ಅರ್ಜಿದಾರ ಕಳೆದ ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಅಥವಾ ರಾಜ್ಯ ಸರ್ಕಾರದಿಂದ ಸ್ವಯಂ ಉದ್ಯೋಗ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ ಪಡೆದಿರಬಾರದು.
  5. ಯೋಜನೆಯ ಅನುಕೂಲವೂ ಸರ್ಕಾರಿ ನೌಕರರಿಗೆ ಮತ್ತು ಅವರ ಕುಟುಂಬದವರಿಗೆ ಸಿಗುವುದಿಲ್ಲ.

Required Documents for PM Free Silai Machine Yojana

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

  • ರೇಷನ್ ಕಾರ್ಡ್
  • ಮೊಬೈಲ್ ಸಂಖ್ಯೆ
  • ಆಧಾರ್ ಕಾರ್ಡ್
  • ಬ್ಯಾಂಕ್ ಖಾತೆ ವಿವರ

How to Apply PM Free Sewing Machine Scheme

ಅರ್ಜಿ ಸಲ್ಲಿಸುವುದು ಹೇಗೆ ನೋಡೋಣ ಬನ್ನಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆಯ ಬಯಸುವವರು ಕೇಂದ್ರ ಸರ್ಕಾರದ ಪಿಎಮ್ ವಿಶ್ವಕರ್ಮ ಅಧಿಕೃತ ವೆಬ್ಸೈಟ್ ಆದ pmvishwakarma.gov. in ಮೂಲಕ ಅರ್ಜಿ ಸಲ್ಲಿಸಬಹುದು. ಇಲ್ಲದೆ ತಮ್ಮ ತಮ್ಮ ಗ್ರಾಮ ಪಂಚಾಯಿತಿ ಅಥವಾ ತಮ್ಮ ಹತ್ತಿರದ ಸಿಎಸ್‌ಸಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿಯೂ ಅರ್ಜಿ ಸಲ್ಲಿಸಬಹುದಾಗಿದೆ.

Also Read: ಉಚಿತ ಹೊಲಿಗೆ ಯಂತ್ರ: Free Sewing Machine Scheme in Karnataka

Important Links:

Apply for PM Free Sewing Machine SchemeClick Here
More UpdatesKarnataka Help.in

Leave a Comment