NDA ಮೈತ್ರಿಕೂಟವು ಮೂರನೇ ಬಾರಿ ಅಧಿಕಾರ ಸ್ವೀಕರಿಸಿದ್ದು ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರದ ಗದ್ದುಗೆ ಹೇರಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಹತ್ವ ಯೋಜನೆಯದ ಪಿಎಂ ಕಿಸಾನ್ ಯೋಜನೆಯನ್ನು ಮತ್ತೆ ಮುಂದುವರಿಸಲಿದ್ದು, ರೈತರ ಖಾತೆಗೆ ಯೋಜನೆಯ 17ನೇ ಕಂತಿನ ಹಣವನ್ನು ನಾಳೆ (ಜೂನ್ 18) ರಂದು ಬಿಡುಗಡೆ ಮಾಡಲಿದ್ದಾರೆ.
ಪಿಎಂ ಕಿಸಾನ್ ಯೋಜನೆಯ ಮೂಲಕ ರೈತರಿಗೆ ಆರ್ಥಿಕವಾಗಿ ಸಹಾಯ ಮಾಡುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿದ್ದು, ಈ ಯೋಜನೆಯನ್ನು ಫೆಬ್ರವರಿ 2019 ರಂದು ಪ್ರಾರಂಭಿಸಲಾಯಿತು. ಇದುವರೆಗೂ ರೈತರ ಖಾತೆಗೆ 16 ಕಂತುಗಳಲ್ಲಿ ಹಣವನ್ನು ವರ್ಗಾವಣೆ ಮಾಡಿದ್ದು, ಪ್ರತಿ ಕಂತಿಗೆ 2,000 ಹಣವನ್ನು ರೈತರ ಖಾತೆಗೆ ನೇರವಾಗಿ ಡಿಟಿಪಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ. ರೈತರಿಗೆ ಬೆಳೆ ಸಹಾಯಧನವಾಗಿ ವರ್ಷಕ್ಕೆ 6 ಸಾವಿರ ರೂಪಾಯಿ ನೀಡುತ್ತದೆ. ಕೇಂದ್ರ ಸರಕಾರವು ವರ್ಷಕ್ಕೆ ಕಂತುಗಳಲ್ಲಿ ರೈತರ ಖಾತೆಗೆ ಜಮಾ ಮಾಡುತ್ತಿದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್, ಡಿಸೆಂಬರ್-ಮಾರ್ಚ್ ಅವಧಿಯಲ್ಲಿ ಪ್ರತಿ ಕಂತಿನಲ್ಲಿ ಎಕರೆಗೆ 2 ಸಾವಿರದಂತೆ ಈ ಆರ್ಥಿಕ ನೆರವು ನೀಡಲಾಗುತ್ತದೆ.