PM Kisan 19th Installment 2025: ಪಿಎಂ-ಕಿಸಾನ್ 19ನೇ ಕಂತಿನ ಹಣ ನಾಳೆ ಜಮಾ!

Published on:

ಪ್ರಸ್ತುತ ಸಾಲಿನ ಪಿಎಂ-ಕಿಸಾನ್ 19ನೇ ಕಂತಿನ ಹಣ(PM Kisan 19th Installment 2025 Amount)ವನ್ನು ಮಾನ್ಯ ಗೌರವಾನ್ವಿತ ಪ್ರಧಾನಿ ಮಂತ್ರಿಗಳಾದ ನರೇಂದ್ರ ಮೋದಿ ಅವರು ಫೆಬ್ರವರಿ 24 ರಂದು ಮಧ್ಯಾಹ್ನ: 02 – 3:30ಕ್ಕೆ ಡಿಜಿಟಲ್ ವರ್ಗಾವಣೆ ಮಾಡಲಿದ್ದಾರೆ. ಈ ಬಾರಿ 9.7 ಕೋಟಿಗಿಂತ ಹೆಚ್ಚು ಫಲಾನುಭವಿಗಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲಿದ್ದಾರೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ದೇಶದ ರೈತರಿಗೆ ವರ್ಷದಲ್ಲಿ ಪ್ರತಿ 4 ತಿಂಗಳಿಗೊಮ್ಮೆ 2000 ರೂಪಾಯಿಯಂತೆ ಒಂದು ವರ್ಷದಲ್ಲಿ ಒಟ್ಟು 6000 ರೂಪಾಯಿಯನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುತ್ತದೆ.

ಈ ಯೋಜನೆಯ ಹಣ ಪಡೆಯಲು ನೋಂದಾಯಿತ ರೈತರಿಗೆ eKYC ಕಡ್ಡಾಯವಾಗಿದೆ. OTP ಆಧಾರಿತ eKYC PMKISAN ಪೋರ್ಟಲ್‌ನಲ್ಲಿ ಮಾಡಬಹುದು ಅಥವಾ ಬಯೋಮೆಟ್ರಿಕ್ ಆಧಾರಿತ eKYC ಗಾಗಿ ಹತ್ತಿರದ CSC ಕೇಂದ್ರಗಳಿಗೆ ಭೇಟಿ ನೀಡಿ ಮಾಡಿಸಿಕೊಳ್ಳಬಹುದು.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment