ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ ಹಣವನ್ನು ಆ.02ರಂದು ಬೆಳಗ್ಗೆ 11ಕ್ಕೆ ಬನೌಲಿ ಸೇವಾಪುರಿ, ವಾರಣಾಸಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಡಿಜಿಟಲ್ ವರ್ಗಾವಣೆ ಮಾಡಲಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ 9.70 ಕೋಟಿಗೂ ಹೆಚ್ಚು ಫಲಾನುಭವಿ ರೈತರಿಗೆ 20,500 ಕೋಟಿಗೂ ಹೆಚ್ಚಿನ ಮೊತ್ತವನ್ನು ನೇರ ವರ್ಗಾವಣೆಯಾಗಲಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಕಿರು ಮಾಹಿತಿ – ಪಿಎಂ ಕಿಸಾನ್ ಯೋಜನೆ
ದೇಶದಲ್ಲಿ ಕೃಷಿಯೋಗ್ಯ ಭೂಮಿಯನ್ನು ಹೊಂದಿರುವ ಎಲ್ಲಾ ಭೂ ಹಿಡುವಳಿ ರೈತ ಕುಟುಂಬಗಳಿಗೆ ಆದಾಯ ಬೆಂಬಲವನ್ನು ಒದಗಿಸುವ ಉದ್ದೇಶದಿಂದ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿಗೆ ತಂದಿದ್ದು, ಪ್ರತಿ 4 ತಿಂಗಳಿಗೊಮ್ಮೆ 2000 ರೂ. ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.
Manikyanahalli pandavapura [T]
Mandya [D]