ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ 20ನೇ ಕಂತು ಬಿಡುಗಡೆಯ ದಿನಾಂಕ ಪ್ರಕಟ

Published on:

ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ ಹಣವನ್ನು ಆ.02ರಂದು ಬೆಳಗ್ಗೆ 11ಕ್ಕೆ ಬನೌಲಿ ಸೇವಾಪುರಿ, ವಾರಣಾಸಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಡಿಜಿಟಲ್ ವರ್ಗಾವಣೆ ಮಾಡಲಿದ್ದಾರೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅಡಿಯಲ್ಲಿ 9.70 ಕೋಟಿಗೂ ಹೆಚ್ಚು ಫಲಾನುಭವಿ ರೈತರಿಗೆ 20,500 ಕೋಟಿಗೂ ಹೆಚ್ಚಿನ ಮೊತ್ತವನ್ನು ನೇರ ವರ್ಗಾವಣೆಯಾಗಲಿದೆ ಎಂದು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಕಿರು ಮಾಹಿತಿ – ಪಿಎಂ ಕಿಸಾನ್ ಯೋಜನೆ

ದೇಶದಲ್ಲಿ ಕೃಷಿಯೋಗ್ಯ ಭೂಮಿಯನ್ನು ಹೊಂದಿರುವ ಎಲ್ಲಾ ಭೂ ಹಿಡುವಳಿ ರೈತ ಕುಟುಂಬಗಳಿಗೆ ಆದಾಯ ಬೆಂಬಲವನ್ನು ಒದಗಿಸುವ ಉದ್ದೇಶದಿಂದ, ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಜಾರಿಗೆ ತಂದಿದ್ದು, ಪ್ರತಿ 4 ತಿಂಗಳಿಗೊಮ್ಮೆ 2000 ರೂ. ಹಣವನ್ನು ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.

How to Check PM Kisan 20th Installment

ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿ ಸ್ಥಿತಿ ಪರಿಶೀಲಿಸುವುದು ಹೇಗೆ?*

  • ಪಿಎಂ ಕಿಸಾನ್ ಸಮ್ಮಾನ್ ನಿಧಿ ಅಧಿಕೃತ ವೆಬ್ ಸೈಟ್ https://pmkisan.gov.in/ಗೆ ಭೇಟಿ ನೀಡಿ.
  • ನಿಮ್ಮ ಸ್ಥಿತಿಯನ್ನು ತಿಳಿದುಕೊಳ್ಳಿ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ನಿಮ್ಮ ನೋಂದಣಿ ಸಂಖ್ಯೆ ಹಾಗೂ ಕ್ಯಾಪ್ಚ ನಮೂದಿಸಿ ಓಟಿಪಿಯನ್ನು ಪಡೆಯಿರಿ.
  • ಓಟಿಪಿ ನಮೂದಿಸಿದ ನಂತರ ನಿಮ್ಮ ಫಲಾನುಭವಿ ಸ್ಥಿತಿಯನ್ನು ನೀವು ಪರಿಶೀಲಿಸಬಹುದು.

Important Direct Links:

PM Kisan 20th Installment Status Check LinkCheck Now
Official Websitepmkisan.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ 20ನೇ ಕಂತು ಬಿಡುಗಡೆಯ ದಿನಾಂಕ ಪ್ರಕಟ”

Leave a Comment