ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ದೇಶದ ರೈತರಿಗೆ ಕೃಷಿ ಮಾಡಲು ಅನುಕೂಲತೆಗಾಗಿ ಪ್ರತಿ ವರ್ಷ 6 ಸಾವಿರ ಹಣವನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡುತ್ತದೆ.ಈ ಯೋಜನೆಗೆ ರೈತರು ತಮ್ಮ ಆಧಾರ್ ಕಾರ್ಡ್ eKYC ಮಾಡಿಸುವುದು ಕಡ್ಡಾಯವಾಗಿದೆ.
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಹಣವನ್ನು DBT ಮೂಲಕ ಖಾತೆಗೆ ನೇರ ವರ್ಗಾವಣೆ ಮಾಡಲಾಗುತ್ತದೆ. ಆಧಾರ್ ಕಾರ್ಡ್ ಜೊತೆ ಬ್ಯಾಂಕ್ ಖಾತೆಯನ್ನು ಲಿಂಕ್ ಮಾಡಿಸಿ, ಜಮೀನಿನ ದಾಖಲೆಗಳ ಜೊತೆಗೆ eKYC ಮಾಡಿದರೆ ಮಾತ್ರ ಖಾತೆಗೆ ಯೋಜನೆಯ ಹಣವು ಬರುತ್ತದೆ. ಅರ್ಹ ಫಲಾನುಭವಿಗಳು eKYC ಮಾಡಿಲು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಅಧಿಕೃತ ವೆಬ್ ಸೈಟ್ https://pmkisan.gov.in ಗೆ ಭೇಟಿ ನೀಡಬಹುದಾಗಿದೆ. ಈ ಲೇಖನದಲ್ಲಿ eKYC (PM Kisan e-KYC Process) ಮಾಡುವುದು ಹೇಗೆ ಎಂಬುದರ ಕುರಿತು ಮಾಹಿತಿ ನೀಡಲಾಗಿದ್ದು ಗಮನವಿಟ್ಟು ಓದಿರಿ.