ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಾಯಿತ 9 ಕೋಟಿ ರೈತರ ಬ್ಯಾಂಕ್ ಖಾತೆಗೆ ಪಿಎಂ ಕಿಸಾನ್ 21ನೇ ಕಂತಿನ ಹಣವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಡಿಜಿಟಲ್ ವರ್ಗಾವಣೆ ಮಾಡಿದರು.
ತಮಿಳುನಾಡಿನ ಕೊಯಮತ್ತೂರಿನಲ್ಲಿ ಬುಧವಾರ(ನ.19) ಮಧ್ಯಾಹ್ನ 1:30 ಗಂಟೆಗೆ ನಡೆದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಹಣ ವರ್ಗಾವಣೆ ಹಾಗೂ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ ಉದ್ಘಾಟಿಸಿ, ಸುಮಾರು 18,000 ಸಾವಿರ ಕೋಟಿ ರೂಪಾಯಿಗಳನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ ಮೂಲಕ ಹಣ ಜಮೆ ಮಾಡಿದರು.



