ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸಮುದಾಯದ ವಿದ್ಯಾರ್ಥಿಗಳಿಗೆ 2025-26ನೇ ಸಾಲಿಗೆ ವಸತಿಸಹಿತ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆನ್ಲೈನ್ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ.
ನೋಂದಣಿ ಮಾಡಲು ಮಾ.26 ರಿಂದ 31ರವೆರೆಗೆ ಅವಕಾಶವಿದೆ. ವಿದ್ಯಾರ್ಥಿಯು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಹ ಆಸಕ್ತರು ನೋಂದಣಿಗಾಗಿ ಇಲಾಖೆಯ ಅಧಿಕೃತ ವೆಬ್ಸೈಟ್ https://erp.dom.karnataka.gov.in/aplಗೆ ಭೇಟಿ ನೀಡಿ.
ವಿದ್ಯಾರ್ಥಿಯು 12ನೇ ತರಗತಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
ವಯಸ್ಸಿನ ಮಿತಿ:
31-03-2026ರಂತೆ;
ಕನಿಷ್ಠ 18 ವರ್ಷಗಳು, ಗರಿಷ್ಠ 27 ವರ್ಷಗಳು
ಇತರೆ ಅರ್ಹತೆಗಳು:
ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧ, ಸಿಖ್, ಪಾರ್ಸಿ ಜನಾಂಗಕ್ಕೆ ಸೇರಿದವರಿಬೇಕು.
ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ₹08 ಲಕ್ಷ ಮೀರಿರಬಾರದು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ.?
ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ಲಿಂಕ್(https://erp.dom.karnataka.gov.in/apl) ನ ಮೂಲಕ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪೂರ್ವ ತರಬೇತಿ ನೋಂದಣಿ ಮಾಡಿಕೊಳ್ಳಬಹುದು.
ಆನ್ಲೈನ್ ನಮೂನೆಯ ಚಿತ್ರ ಪಟ
Important Direct Links:
Police Constable Pre Recruitment Coaching 2026 by DOM Online Application Link