ಕಾನ್‌ಸ್ಟೇಬಲ್‌ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸಲು ಮಾ.31ರ ಗಡುವು

Published on:

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸಮುದಾಯದ ವಿದ್ಯಾರ್ಥಿಗಳಿಗೆ 2025-26ನೇ ಸಾಲಿಗೆ ವಸತಿಸಹಿತ ಪೊಲೀಸ್‌ ಕಾನ್‌ಸ್ಟೇಬಲ್‌ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆನ್‌ಲೈನ್‌ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ.

ನೋಂದಣಿ ಮಾಡಲು ಮಾ.26 ರಿಂದ 31ರವೆರೆಗೆ ಅವಕಾಶವಿದೆ. ವಿದ್ಯಾರ್ಥಿಯು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಹ ಆಸಕ್ತರು ನೋಂದಣಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://erp.dom.karnataka.gov.in/aplಗೆ ಭೇಟಿ ನೀಡಿ.

ಪ್ರಮುಖ ದಿನಾಂಕಗಳು:

  • ನೋಂದಣಿ ಆರಂಭ ದಿನಾಂಕ – ಮಾರ್ಚ್‌ 26
  • ನೋಂದಣಿ ಮಾಡಲು ಕೊನೆಯ ದಿನ – ಮಾರ್ಚ್‌ 31

ವಿದ್ಯಾರ್ಹತೆ:

ವಿದ್ಯಾರ್ಥಿಯು 12ನೇ ತರಗತಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.

ವಯಸ್ಸಿನ ಮಿತಿ:

31-03-2026ರಂತೆ;

ಕನಿಷ್ಠ 18 ವರ್ಷಗಳು, ಗರಿಷ್ಠ 27 ವರ್ಷಗಳು

ಇತರೆ ಅರ್ಹತೆಗಳು:

  • ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಮುಸ್ಲಿಂ, ಕ್ರಿಶ್ಚಿಯನ್‌, ಬೌದ್ಧ, ಸಿಖ್‌, ಪಾರ್ಸಿ ಜನಾಂಗಕ್ಕೆ ಸೇರಿದವರಿಬೇಕು.
  • ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ₹08 ಲಕ್ಷ ಮೀರಿರಬಾರದು.
  • ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ.?

ಇಲಾಖೆಯ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ಲಿಂಕ್‌(https://erp.dom.karnataka.gov.in/apl) ನ ಮೂಲಕ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪೂರ್ವ ತರಬೇತಿ ನೋಂದಣಿ ಮಾಡಿಕೊಳ್ಳಬಹುದು.

Police Constable Pre Recruitment Coaching 2026 By Dom Online Application
ಆನ್‌ಲೈನ್‌ ನಮೂನೆಯ ಚಿತ್ರ ಪಟ

Important Direct Links:

Police Constable Pre Recruitment Coaching 2026 by DOM Online Application LinkApply Now
Official Websitedom.karnataka.gov.in
More UpdatesKarnatakaHelp.in
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.

7 thoughts on “ಕಾನ್‌ಸ್ಟೇಬಲ್‌ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ”

Leave a Comment