Minority Hostel Application 2025: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಅರ್ಜಿ ಆಹ್ವಾನ

By Shwetha Chidambar

Published On:

IST

ಫಾಲೋ ಮಾಡಿ

Post Matric Minority Hostel Application 2025
Post Matric Minority Hostel Application 2025

ಪ್ರಸಕ್ತ ಶೈಕ್ಷಣಿಕ ಸಾಲಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇಲಾಖೆಯ ಅಧೀನದ ಮೆಟ್ರಿಕ್ ನಂತರದ (ಪಿ.ಯು.ಸಿ ಹಾಗೂ ಸಮನಾಂತರ ಕೋರ್ಸು ಮತ್ತು ಪದವಿ ಮಟ್ಟದ) ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು https://shp.karnataka.gov.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಬೆಂಗಳೂರು ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸದರಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭದ ದಿನಾಂಕ – ಜುಲೈ 17, 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 02, 2025

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:

  • ವಿದ್ಯಾರ್ಥಿಯು ಅಲ್ಪಸಂಖ್ಯಾತರ ಸಮುದಾಯದ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಜನಾಂಗಕ್ಕೆ ಸೇರಿದವರಾಗಿರಬೇಕು.
  • ಪಿ.ಯು.ಸಿ(PUC) ಹಾಗೂ ಸಮನಾಂತರ ಕೋರ್ಸು(ITI, Diploma) ಮತ್ತು ಪದವಿ ಮಟ್ಟದ ಕೋರ್ಸು(Degree Level)ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳು:

  • ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿಶ್ವವಿದ್ಯಾಲಯದಿಂದ ನೀಡಿರುವ ನೋಂದಣಿ ಸಂಖ್ಯೆ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಆಧಾರ್ ಕಾರ್ಡ್
  • 10ನೇ ತರಗತಿ ಅಂಕಪಟ್ಟಿ
  • ಚಾಲ್ತಿಯಲ್ಲಿರುವ ಇಮೇಲ್ ಐಡಿ ಹಾಗೂ ಮೊಬೈಲ್ ಸಂಖ್ಯೆ

How to Apply for Post Matric Minority Hostel Application 2025

ಗಮನಿಸಿ: ಹಾಸ್ಟೆಲ್​ಗೆ ಅರ್ಜಿ ಸಲ್ಲಿಸಲು SSP ಖಾತೆ ಹೊಂದಿರುವುದು ಕಡ್ಡಾಯವಾಗಿದೆ. ಆದ್ದರಿಂದ ಇಲ್ಲದವರು ಖಾತೆ ಸೃಜಿಸಿ.. ತದನಂತರ ಅರ್ಜಿ ಸಲ್ಲಿಸಲು ಮುಂದಾಗಿ..

ಅರ್ಜಿ ಸಲ್ಲಿಸುವ ವಿಧಾನ;

  • ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ಅಧಿಕೃತ ವೆಬ್ಸೈಟ್ https://shp.karnataka.gov.in/shpapp/Navigate_to_SSP.aspxಗೆ ಭೇಟಿ ನೀಡಿ.
  • SSP ಖಾತೆಯಿಂದ ಲಾಗಿನ್ ಆಗಿ ಅಥವಾ ಹೊಸದಾಗಿ SSP ಖಾತೆ ತೆರೆಯಿರಿ.
  • ನಂತರ Apply for Hostel ಲಿಂಕ್ ಮೇಲೆ ಕ್ಲಿಕ್ ಮಾಡಿ ಜಾತಿ ಆದಾಯ ಹಾಗೂ ವೈಯಕ್ತಿಕ ವಿವರಗಳನ್ನು ನಮೂದಿಸಿ.
  • ಬಳಿಕ ವಿದ್ಯಾರ್ಥಿಯ ಶೈಕ್ಷಣಿಕ ದಾಖಲಾತಿಗಳನ್ನು ನಮೂದಿಸಿ.
  • ನಿಮ್ಮ ಆದ್ಯತೆಯ ಅನುಸಾರ ವಸತಿ ನಿಲಯಗಳನ್ನು ಆಯ್ಕೆ ಮಾಡಿ.
  • ನಂತರ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Post Matric Minority Hostel Application 2025 Notice PDFDownload
Post Matric Minority Hostel Application 2025 LinkApply Now
Official Websitedom.karnataka.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment