ಭಾರತದ ಸಾರ್ವಜನಿಕ ಸೇವಾ ಪ್ರಸಾರ ಕೇಂದ್ರವಾಗಿರುವ ಪ್ರಸಾರ ಭಾರತೀಯು ದೂರದರ್ಶನದ ಪ್ರಾದೇಶಿಕ ಸುದ್ದಿ ಘಟಕ ಮತ್ತು ಆಕಾಶವಾಣಿಯಲ್ಲಿ ಕಾಪಿರೈಟರ್ (ನಕಲು ಸಂಪಾದಕ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.
ವಿವಿಧ ವಿಭಾಗಗಳಲ್ಲಿ ಪ್ರಸ್ತುತ ಖಾಲಿ ಇರುವ ಒಟ್ಟು 29 ಕಾಪಿರೈಟರ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪ್ರಸಾರ ಭಾರತಿ ಆವೇದನ್ ಅಧಿಕೃತ ಪೋರ್ಟಲ್ https://avedan.prasarbharti.org/ ಗೆ ಭೇಟಿ ನೀಡಿ. ಡಿ.03 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಪತ್ರಿಕೋದ್ಯಮ/ಸಮೂಹ ಸಂವಹನ/ಸಂಬಂಧಿತ ಕ್ಷೇತ್ರದಲ್ಲಿ ಪದವಿ/ಪಿಜಿ ಡಿಪ್ಲೊಮಾ ಪೂರ್ಣಗೊಳಿಸಿರಬೇಕು ಜೊತೆಗೆ ಯಾವುದೇ ಮುಖ್ಯವಾಹಿನಿಯ ಮಾಧ್ಯಮದಲ್ಲಿ ಕನಿಷ್ಠ 3-5 ವರ್ಷಗಳ ವೃತ್ತಿ ಅನುಭವದೊಂದಿಗೆ (ಹಿಂದಿ/ಇಂಗ್ಲಿಷ್) ಭಾಷಾ ಪ್ರಾವೀಣ್ಯತೆ ಮತ್ತು ಸಂಬಂಧಿತ ಪ್ರಾದೇಶಿಕ ಭಾಷೆಯ ಜ್ಞಾನವನ್ನು ಹೊಂದಿರಬೇಕು.
ವಯೋಮಿತಿ:
18-11-2025 ರಂತೆ;
ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
ಆಯ್ಕೆ ವಿಧಾನ:
ಅರ್ಹ ಅಭ್ಯರ್ಥಿಗಳ ಕಿರುಪಟ್ಟಿ ಪರೀಕ್ಷೆ ಸಂದರ್ಶನ
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 35,000ರೂ.ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
• ಪ್ರಸಾರ ಭಾರತಿ ಅಪ್ಲಿಕೇಶನ್ ಪೋರ್ಟಲ್ (ಆವೇದನ) ಪೋರ್ಟಲ್ https://avedan.prasarbharati.org/ಗೆ ಭೇಟಿ ನೀಡಿ.
• ಮೊಬೈಲ್ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.