ಪ್ರಸಾರ ಭಾರತಿಯು ಖಾಲಿ ಇರುವ ತಾಂತ್ರಿಕ ಇಂಟರ್ನ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲಿಸಬಹುದಾಗಿದೆ.
ವಿವಿಧ ವಲಯಗಳಲ್ಲಿ ತನ್ನ ಅಧೀನದಲ್ಲಿರುವ ಆಕಾಶವಾಣಿ ಮತ್ತು ದೂರದರ್ಶನ ಕೇಂದ್ರಗಳಲ್ಲಿ ಪೂರ್ಣ ಸಮಯದ ಗುತ್ತಿಗೆ ಆಧಾರದ ಮೇಲೆ 421 ತಾಂತ್ರಿಕ ಇಂಟರ್ನ್‌ಗಳ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಸಾರ ಭಾರತೀಯ ಅಧಿಕೃತ ವೆಬ್ಸೈಟ್ https://avedan.prasarbharati.org/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ (AICTE/UGC ಅನುಮೋದಿತ) ಎಲೆಕ್ಟ್ರಾನಿಕ್ಸ್, ದೂರಸಂಪರ್ಕ, ಎಲೆಕ್ಟ್ರಿಕಲ್, ಸಿವಿಲ್, ಐಟಿ ಅಥವಾ ಕಂಪ್ಯೂಟರ್ ಸೈನ್ಸ್‌ನಂತಹ ಸಂಬಂಧಿತ ವಿಭಾಗಗಳಲ್ಲಿ ಎಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಕನಿಷ್ಠ 65% ಅಂಕಗಳೊಂದಿಗೆ ಪಡೆದಿರಬೇಕು.
ವಯೋಮಿತಿ:
ದಿನಾಂಕ -01-07-2025 ರಂತೆ ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
ಪ್ರಸಾರ ಭಾರತಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆ ಅನ್ವಯವಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಸ್ಟೈಫಂಡ್:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 25,000ರೂ. ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ:
ಪ್ರಸಾರ ಭಾರತೀಯ ಅಧಿಕೃತ ವೆಬ್ಸೈಟ್ https://avedan.prasarbharati.org/ ಗೆ ಭೇಟಿ ನೀಡಿ.
ಮೊಬೈಲ್ ಸಂಖ್ಯೆ ಅಥವಾ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ಅರ್ಜಿಯನ್ನು ಪರಿಶೀಲಿಸಿ ಮತ್ತೊಮ್ಮೆ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.