Professional Skill Development Training Program by DOM
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದಲ್ಲಿ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಹೊರಡಿಸಿದ ಪ್ರಕಟಣೆ ತಿಳಿಸಿದೆ.
ಅರ್ಜಿ ಸಲ್ಲಿಸಲು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಚೌದ್ಧ, ಸಿಖ್, ಪಾರ್ಸಿ ಜನಾಂಗದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ. ತರಬೇತಿಗೆ ಅರ್ಜಿ ಸಲ್ಲಿಸಬಯಸುವವರು ಅಲ್ಪಸಂಖ್ಯಾತರ ನಿರ್ದೇಶನಾಲಯದ ಜಾಲತಾಣ https://dom.karnataka.gov.in/ಗೆ ಭೇಟಿ ನೀಡಿ. ಅ.3ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 22, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 03, 2025
ತರಬೇತಿಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
• ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ)ಕ್ಕೆ ಸೇರಿದ ರಾಜ್ಯದ ನಿವಾಸಿಗಳು ಅರ್ಜಿ ಸಲ್ಲಿಸಬಹುದು.
• ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ವಯೋಮಿತಿ:
03-10-2025 ರಂತೆ;
ಕನಿಷ್ಠ ಮಿತಿ – 18 ವರ್ಷಗಳು
ಗರಿಷ್ಠ ಮಿತಿ – 35 ವರ್ಷಗಳು
ಅರ್ಜಿ ಸಲ್ಲಿಸುವ ಪ್ರಕ್ರಿಯೆ:
ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://dom.karnataka.gov.in/ಗೆ ಭೇಟಿ ನೀಡಿ. ಅಲ್ಲಿ ಲಭ್ಯವಿರುವ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ: ಅಭ್ಯರ್ಥಿಗಳು ಸಂಬಂಧಪಟ್ಟ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990ಗೆ ಸಂಪರ್ಕಿಸಬಹುದು.