ಕರ್ನಾಟಕ ಪರೀಕ್ಷಾ ಪ್ರಧಿಕಾರವು ಪಿಎಸ್ಐ ಮತ್ತು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ನೇಮಕಾತಿ ನಡೆಸುತ್ತಿದ್ದು, ಈ ಪರೀಕ್ಷಗೆ ಸಂಬಂಧಿಸಿದಂತೆ ಪರೀಕ್ಷಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತಸಂಹಿತೆ ಹಾಗು ವಿಶೇಷ ಸೂಚನೆಗಳನ್ನು ಬಿಡುಗಡೆ ಮಾಡಿದೆ.
ಪರೀಕ್ಷಗೆ ನೊಂದಯಿಸಿಕೊಂಡಿರುವ ಅಭ್ಯರ್ಥಿಗಳು ಪ್ರಧಿಕಾರದ ಅಧಿಕೃತ ವೆಬ್ ಸೈಟ್‌ನಲ್ಲಿ ಪ್ರಕಟಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
KEA ಸೆಪ್ಟೆಂಬರ್ 22 ರಂದು ಪಿಎಸ್ಐ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಸೆಪ್ಟೆಂಬರ್ 29 ರಂದು ಗ್ರಾಮ ಆಡಳಿತ ಅಧಿಕಾರಿಗಳ ಕನ್ನಡ ಕಡ್ಡಾಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಹುದ್ದೆಗೆ ಈಗಾಗಲೇ ಸಾಕಷ್ಟು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲಾಗಿದ್ದು, ಪ್ರವೇಶ ಪತ್ರವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುತ್ತದೆ. ಈ ಲೇಖನದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸೆಪ್ಟಂಬರ್ ನಲ್ಲಿ ನಡೆಯುವ ಪರೀಕ್ಷೆಗಳ ಕುರಿತು ಅಭ್ಯರ್ಥಿಗಳ ವಸ್ತಸಂಹಿತೆ ಹಾಗು ವಿಶೇಷ ಸೂಚನೆಗಳು ಕುರಿತು ಮಾಹಿತಿ ತಿಳಿದುಕೊಳ್ಳೋಣ.
PSI and VA Exam Dress Code & Instructions 2024
ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ:
- ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸಿಕೊಂಡು ಬರಬೇಕು.
- ಪುರುಷರು ಧರಿಸುವ ಪ್ಯಾಂಟ್ ಮತ್ತು ಸರಳ ಪ್ಯಾಂಟ್ ಜೇಬುಗಳು ಇಲ್ಲದಿರುವ / ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.
- ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್‌ಗಳು, ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು.
- ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ನಿಷೇಧಿಸಲಾಗಿದೆ.
- ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆಗಳು, ಉಂಗುರಗಳು ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ
- ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಜ್ ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
- ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು. ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
- ಎತ್ತರವಾದ ಹಿಮ್ಮಡಿಯ ಶೂಗಳನ್ನು/ ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು. ಧರಿಸುವುದು ಕಡ್ಡಾಯವಾಗಿದೆ.
- ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).
ಪರೀಕ್ಷ ಕೊಠಡಿಗೆ ನಿಷೇಧಿಸಿದ ವಸ್ತುಗಳು:
- ಎಲೆಕ್ಟ್ರಾನಿಕ್ ವಸ್ತುಗಳು,
- ಮೊಬೈಲ್ ಫೋನ್‌ಗಳು,
- ಪೆನ್ ಡ್ರೈವ್‌ಗಳು,
- ಇಯರ್ ಫೋನ್‌ಗಳು,
- ಮೈಕ್ರೋಫೋನ್‌ಗಳು,
- ಬ್ಲೂ ಟೂಥ್ ಸಾಧನಗಳು ಮತ್ತು
- ಕೈ ಗಡಿಯಾರಗಳು
- ಕುಡಿಯುವ ನೀರಿನ ಬಾಟಲಿ
- ಪೆನ್ಸಿಲ್, ಪೇಪರ್, ಎರೇಸರ್,
- ತಲೆಯ ಮೇಲೆನ ಟೋಪಿ/ HAT
- ಮಾಸ್ಕ್ ಅನ್ನು ಧರಿಸುವಂತಿಲ್ಲ.
ಈ ಮೇಲಿನ ವಸ್ತುಗಳನ್ನು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ತರುವಂತಿಲ್ಲ..
Important Direct Links:
PSI and VA Exam Dress Code & Instructions Notice PDF | Download |
PSI 402 Exam Paper-1 Bell Timings PDF | Download |
PSI Exam Paper-2 Bell Timings PDF | Download |
Official Website | kea.kar.nic.in |
More Updates | Karnataka Help.in |