PSI Pre Recruitment Free Training 2025: ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

PSI Pre Exam Free Training 2025
PSI Pre Exam Free Training 2025

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ವಸತಿ ಸಹಿತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಜನಾಂಗದ ಮಹಿಳಾ ಹಾಗೂ ಪುರುಷ ಅಭ್ಯರ್ಥಿಗಳಿಗೆ 2024-25ನೇ ಸಾಲಿಗೆ ಮಂಜೂರಾದ ವಸತಿ ಸಹಿತ ಕರ್ನಾಟಕ ರಾಜ್ಯದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೆ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ – 10-05-2025
  • ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ – 23-05-2025

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು

  • ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
  • ಅಭ್ಯರ್ಥಿಯು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾಗಿರಬೇಕು. (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ).
  • ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ(Degree) ಪೂರ್ಣಗೊಳಿಸಿರಬೇಕು.

ವಯೋಮಿತಿ:

  • ದಿನಾಂಕ – 23-05-2025 ರಂತೆ ಕನಿಷ್ಠ 21 ವರ್ಷಗಳು
  • ಗರಿಷ್ಠ 30 ವರ್ಷಗಳು

ಆಯ್ಕೆ ವಿಧಾನ:

ಸದರಿ ಯೋಜನೆಯಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ

ಹಾಗೂ

  • PSI ನೇಮಕಾತಿಯ ಅರ್ಹತೆಗಳಾದ ಎತ್ತರ:- ಪುರುಷರಿಗೆ ಕನಿಷ್ಠ 168 ಸೆಂ.ಮೀ. ಮತ್ತು ಮಹಿಳೆಯರಿಗೆ ಕನಿಷ್ಠ 157 ಸೆಂ.ಮೀ.
  • ತೂಕ:-ಪುರುಷರಿಗೆ ಕನಿಷ್ಠ 50 ಕೆ.ಜಿ. ಮತ್ತು ಮಹಿಳೆಯರಿಗೆ ಕನಿಷ್ಠ 45 ಕೆ.ಜಿ. ಎದೆಯ ಸುತ್ತಳತೆ(ಪುರುಷರಿಗೆ):- ಕನಿಷ್ಠ 76 ಸೆಂ.ಮೀ. ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ತರಬೇತಿ ಸ್ಥಳಗಳು

• ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಳಗಾವಿ ಮತ್ತು ಮೈಸೂರು ಜಿಲ್ಲೆಯಲ್ಲಿ ತರಬೇತಿ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ

  • ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್
    https://sevasindhu.karnataka.gov.in/Sevasindhu/DepartmentServices ಗೆ ಭೇಟಿ ನೀಡಿ.
  • ಅಭ್ಯರ್ಥಿಗಳ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲೆಗಳನ್ನು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು. ವಿಶೇಷ ಸೂಚನೆ:

ಹೆಚ್ಚಿನ ಮಾಹಿತಿಗಾಗಿ

ಸಂಬಂಧಪಟ್ಟ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ – 8277799990 ಇವರನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Important Direct Links:

PSI Pre Recruitment Free Training 2025 Online Application Form LinkApply Now
Official Websitedom.karnataka.gov.in
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment