PSI Re Exam Date and Time Table 2024: ನಮಸ್ಕಾರ, ಜನವರಿ 08, 2024 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 545 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಸಂಬಂಧ, ಮರು ಪರೀಕ್ಷೆ ದಿನಾಂಕ ಮತ್ತು ಸಂಕ್ಷಿಪ್ತ ಸೂಚನೆಗಳನ್ನು ಬಿಡುಗಡೆ ಮಾಡಿದೆ.
PSI Re Exam Date and Time Table 2024
| Exam Date | Papers | Marks | Exam time |
| 23-01-2024 (ಮಂಗಳವಾರ) | Paper 1 | 50 | ಬೆಳಿಗ್ಗೆ 10.30 80 ಮಧ್ಯಾಹ್ನ .12.00 |
| 23-01-2024 | Paper 2 | 150 | ಮಧ್ಯಾಹ್ನ 1.00 ರಿಂದ 2.30 |

PSI Exam Instructions/Guidelines
- ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ತಪಾಸಣೆಗೆ ಒಳಪಡುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8.30 ಕ್ಕೆ ಸರಿಯಾಗಿ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಲು ಸೂಚಿಸಿದೆ.
- ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಅಂದರೆ, ಡ್ರೈವಿಂಗ್ ಲೈಸೆನ್ಸ್ / ಪಾಸ್‌ಪೋರ್ಟ್ / ಆಧಾರ್ ಕಾರ್ಡ್ / ಪಾನ್ ಕಾರ್ಡ್ / ಮತದಾರರ ಗುರುತಿನ ಚೀಟಿ ಹಾಜರುಪಡಿಸಿದರೆ ಮಾತ್ರ ಅಭ್ಯರ್ಥಿಯನ್ನು ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಬಿಡಲಾಗುವುದು.
- ಮೊಬೈಲ್ ಗಳನ್ನು ನಿಷೇಧಿಸಲಾಗಿದ್ದು, ಮೊಬೈಲ್ ನಲ್ಲಿ ಗುರುತಿನ ಚೀಟಿಯನ್ನು ತೋರಿಸುವಂತಿಲ್ಲ ಮತ್ತು ಅಂತಹ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡುವುದಿಲ್ಲ.
- ಅಭ್ಯರ್ಥಿಗಳು ಸಾಧ್ಯವಾದಷ್ಟು ಕಾಲರ್‌ಗಳು ಇಲ್ಲದೆ ಇರುವ ಶರಟುಗಳನ್ನು ಹಾಕಿಕೊಳ್ಳುವುದು.
- ಯಾವುದೇ ತೆರನಾದ ಜೀನ್ಸ್ ಪ್ಯಾಂಟ್, ಬೆಲ್ಟ್, ಶೂ ಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ಇರುವುದಿಲ್ಲ.
- ಕಿವಿ ಅಥವಾ ಬಾಯಿಯನ್ನು ಮುಚ್ಚಿಕೊಳ್ಳುವಂತಹದನ್ನು ಧರಿಸಿ ಅಥವಾ ಯಾವುದೇ ರೀತಿಯ ಫೇಸ್ ಮಾಸ್ಕ್ ಅನ್ನೂ ಸಹ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸುವಂತಿಲ್ಲ.
- ವಾಟರ್ ಬಾಟಲ್ ಗಳನ್ನು ಅನುಮತಿಸುವುದಿಲ್ಲ. ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುವ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು.
- ಮೊದಲನೆ ಅವಧಿ ಪರೀಕ್ಷೆ ಮುಗಿದ ನಂತರ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಗೆ ಹೋಗಲು ಅನುಮತಿಸುವುದಿಲ್ಲ.
- ಕಾಲ ಕಾಲಕ್ಕೆ ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುವ ಸೂಚನೆಗಳನ್ನು ಅಭ್ಯರ್ಥಿಗಳು ತಪ್ಪದೆ ಪ ಪಾಲಿಸತಕ್ಕದ್ದು
Important Links:



