WhatsApp Channel Join Now
Telegram Group Join Now

PSI Re Exam Date and Time Table 2024: PSI ಮರು ಪರೀಕ್ಷೆ ದಿನಾಂಕ, ವೇಳಾಪಟ್ಟಿ 2024 ಪ್ರಮುಖ ಸೂಚನೆಗಳು

PSI Re Exam Date and Time Table 2024: ನಮಸ್ಕಾರ, ಜನವರಿ 08, 2024 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 545 ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳ ನೇಮಕಾತಿ ಸಂಬಂಧ, ಮರು ಪರೀಕ್ಷೆ ದಿನಾಂಕ ಮತ್ತು ಸಂಕ್ಷಿಪ್ತ ಸೂಚನೆಗಳನ್ನು ಬಿಡುಗಡೆ ಮಾಡಿದೆ.

PSI Re Exam Date and Time Table 2024

Exam DatePapersMarksExam time
23-01-2024 (ಮಂಗಳವಾರ)Paper 150ಬೆಳಿಗ್ಗೆ 10.30 80 ಮಧ್ಯಾಹ್ನ .12.00
23-01-2024Paper 2150ಮಧ್ಯಾಹ್ನ 1.00 ರಿಂದ 2.30
Psi Re Exam Date And Time Table 2024
Psi Re Exam Date And Time Table 2024

PSI Exam Instructions/Guidelines

  • ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ತಪಾಸಣೆಗೆ ಒಳಪಡುವ ಹಿನ್ನೆಲೆಯಲ್ಲಿ ಬೆಳಿಗ್ಗೆ 8.30 ಕ್ಕೆ ಸರಿಯಾಗಿ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಲು ಸೂಚಿಸಿದೆ.
  • ಅಭ್ಯರ್ಥಿಗಳು ಪ್ರವೇಶ ಪತ್ರದ ಜೊತೆಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಅಂದರೆ, ಡ್ರೈವಿಂಗ್ ಲೈಸೆನ್ಸ್ / ಪಾಸ್‌ಪೋರ್ಟ್ / ಆಧಾರ್ ಕಾರ್ಡ್ / ಪಾನ್ ಕಾರ್ಡ್ / ಮತದಾರರ ಗುರುತಿನ ಚೀಟಿ ಹಾಜರುಪಡಿಸಿದರೆ ಮಾತ್ರ ಅಭ್ಯರ್ಥಿಯನ್ನು ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಬಿಡಲಾಗುವುದು.
  • ಮೊಬೈಲ್ ಗಳನ್ನು ನಿಷೇಧಿಸಲಾಗಿದ್ದು, ಮೊಬೈಲ್ ನಲ್ಲಿ ಗುರುತಿನ ಚೀಟಿಯನ್ನು ತೋರಿಸುವಂತಿಲ್ಲ ಮತ್ತು ಅಂತಹ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಅನುವು ಮಾಡಿಕೊಡುವುದಿಲ್ಲ.
  • ಅಭ್ಯರ್ಥಿಗಳು ಸಾಧ್ಯವಾದಷ್ಟು ಕಾಲರ್‌ಗಳು ಇಲ್ಲದೆ ಇರುವ ಶರಟುಗಳನ್ನು ಹಾಕಿಕೊಳ್ಳುವುದು.
  • ಯಾವುದೇ ತೆರನಾದ ಜೀನ್ಸ್ ಪ್ಯಾಂಟ್, ಬೆಲ್ಟ್, ಶೂ ಗಳನ್ನು ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ಇರುವುದಿಲ್ಲ.
  • ಕಿವಿ ಅಥವಾ ಬಾಯಿಯನ್ನು ಮುಚ್ಚಿಕೊಳ್ಳುವಂತಹದನ್ನು ಧರಿಸಿ ಅಥವಾ ಯಾವುದೇ ರೀತಿಯ ಫೇಸ್ ಮಾಸ್ಕ್ ಅನ್ನೂ ಸಹ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸುವಂತಿಲ್ಲ.
  • ವಾಟರ್ ಬಾಟಲ್ ಗಳನ್ನು ಅನುಮತಿಸುವುದಿಲ್ಲ. ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುವ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು.
  • ಮೊದಲನೆ ಅವಧಿ ಪರೀಕ್ಷೆ ಮುಗಿದ ನಂತರ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಗೆ ಹೋಗಲು ಅನುಮತಿಸುವುದಿಲ್ಲ.
  • ಕಾಲ ಕಾಲಕ್ಕೆ ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುವ ಸೂಚನೆಗಳನ್ನು ಅಭ್ಯರ್ಥಿಗಳು ತಪ್ಪದೆ ಪ ಪಾಲಿಸತಕ್ಕದ್ದು

Important Links:

PSI Re Exam Date and Time Table 2024 Instructions PDFDownload
Official WebsiteKEA Home
More UpdatesKarnatakaHelp.in