PSI Re Exam Hall Ticket 2024: ನಮಸ್ಕಾರ, ಜನವರಿ 08, 2024 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 545 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಸಂಬಂಧ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿತ್ತು, ಇದೀಗ ಪರೀಕ್ಷೆಯ ಮರು ಪರೀಕ್ಷೆಯ ಪ್ರವೇಶ ಪತ್ರವನ್ನ ಇಲಾಖೆಯು ಬಿಡುಗಡೆ ಮಾಡಿದೆ.
ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯನ್ನ ಜನವರಿ 23, 2024 ರಂದು ನಡೆಯಲಿದ್ದು, ಒಟ್ಟು ಸುಮಾರು 54104 ಅಭ್ಯರ್ಥಿಗಳು ಈ ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಯ ಪ್ರವೇಶ ಪತ್ರವನ್ನ KEA ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರವೇಶ ಪತ್ರವನ್ನ ಬಿಡುಗಡೆ ಮಾಡಿದೆ. ಹಾಲ್ ಟಿಕೆಟ್ ಡೌನ್ಲೋಡ್ ನೇರ ಲಿಂಕ್ ಕೆಳಗೆ ನೀಡಲಾಗಿದೆ.