ಪಿಯುಸಿ ವಿದ್ಯಾರ್ಥಿಗಳಿಗೆ.. ಉಚಿತ ಪ್ರವೇಶ ಪರೀಕ್ಷೆಗಳ ತರಬೇತಿ.!!
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ಪಿಯುಸಿ ಓದುತ್ತಿರುವ ಸಮುದಾಯದ ವಿದ್ಯಾರ್ಥಿಗಳಿಗೆ ವೃತ್ತಿಪರ ಪದವಿಪೂರ್ವ ಕೋರ್ಸ್ಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಉಚಿತ ಶಿಕ್ಷಣ/ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ನೀಟ್/ಐಐಟಿ/ಜೆಇಇ/ಕೆ-ಸಿಇಟಿ/ಐಸಿಎಆರ್/ಸಿಯುಇಟಿ/ಸಿಎಲ್ಎಟಿ/ಸಿಎ-ಪೊಂಡೇಷನ್ ಪದವಿಪೂರ್ವ ಕೋರ್ಸ್ಗಳ ಪ್ರವೇಶ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ಒದಗಿಸಲಿದೆ. ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಕಲಿಕಾ ಕೇಂದ್ರಗಳ ವ್ಯವಸ್ಥೆಯಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಮಾ.31ರೊಳಗೆ ತಮ್ಮ ಜಿಲ್ಲೆ/ತಾಲೂಕಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
• ಅಭ್ಯರ್ಥಿಯು ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಜನಾಂಗಕ್ಕೆ ಸೇರಿದವರಾಗಿರಬೇಕು.
• ಅಭ್ಯರ್ಥಿಯು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿರಬೇಕು.
• ಅಭ್ಯರ್ಥಿಯು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು.
• ಅಭ್ಯರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯವು ₹8ಲಕ್ಷ ಮಿತಿಯೊಳಗಿರಬೇಕು.
ವಯೋಮಿತಿ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನಿಯಮಗಳ ಅನುಸಾರ
ತರಬೇತಿಯ ವಿವರ:
• ಸದರಿ ಯೋಜನೆ ಅಡಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಪೂರ್ಣ ಊಟ ವಸತಿ ಮತ್ತು ಇತರೆ ಅನುಕೂಲತೆಗಳೊಂದಿಗೆ ಉಚಿತ ತರಬೇತಿಯನ್ನು ನೀಡಲಾಗುತ್ತದೆ.
• ವಿದ್ಯಾರ್ಥಿಗಳಿಗೆ 02 ವರ್ಷಗಳ ಪಿ.ಯು.ಸಿ ಶಿಕ್ಷಣದೊಂದಿಗೆ ವಿಶೇಷ ಪದವಿಪೂರ್ವ (NEET/IIT-JEE/K-CET/ICAR/CUET/CLAT/CA-FOUNDATION ಪ್ರವೇಶ ಪರೀಕ್ಷೆಗಳಿಗೆ ತರಬೇತಿಯನ್ನು ಒದಗಿಸಲಾಗುತ್ತದೆ.
• ವಿದ್ಯಾರ್ಥಿಗಳಿಗೆ ಅಧ್ಯಯನದ ಸಮಯದಲ್ಲಿ ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಕಲಿಕಾ ಕೇಂದ್ರಗಳು ಇರುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ:
ಸದರಿ ಯೋಜನೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಸಂಬಂಧಪಟ್ಟ ಅಲ್ಪಸಂಖ್ಯಾತರ ಜಿಲ್ಲಾ ಕಚೇರಿ/ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ/ಅಲ್ಪಸಂಖ್ಯಾತರ ಪದವಿ ಪೂರ್ವ ಕಾಲೇಜುಗಳು/ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಕ್ಕೆ ಭೇಟಿ ನೀಡಿ.
• ಯೋಜನೆಯ ಮಾಹಿತಿ ಪಡೆದು ಮಾರ್ಗಸೂಚಿಗಳನ್ವಯ ಆಫ್ ಲೈನ್ ಅಥವಾ ಆನ್ ಲೈನ್ ಮೂಲಕ ಅರ್ಜಿಯಲ್ಲಿ ಕೇಳಲಾಗುವ ವಿವರಗಳು ಹಾಗೂ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ.
• ಮಾರ್ಚ್ 31ರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ: ಸಂಬಂಧಪಟ್ಟ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ – 8277799990 ಅನ್ನು ಸಂಪರ್ಕಿಸಿ.