ಪಂಜಾಬ್ ಮತ್ತು ಸಿಂಧ್ ಬ್ಯಾಂಕ್‌ನಲ್ಲಿ ಅಪ್ರೆಂಟಿಸ್‌ಶಿಪ್‌

ಮೆರಿಟ್‌ ಆಧಾರಿತ ಆಯ್ಕೆ ಪ್ರಕ್ರಿಯೆ

Published on:

ನವದೆಹಲಿ: ಪಂಜಾಬ್ ಮತ್ತು ಸಿಂಧ್ ಬ್ಯಾಂಕಿನಲ್ಲಿ ಅಪ್ರೆಂಟಿಸ್‌ಶಿಪ್‌ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಮೇ 21ರಿಂದ ಜೂನ್ 06 ರವರೆಗೆ ಕಾಲಾವಕಾಶವಿದೆ. ದೇಶದ ವಿವಿಧ ರಾಜ್ಯದಲ್ಲಿನ ತನ್ನ ಬ್ಯಾಂಕ್‌ ಶಾಖೆಗಳಿಗೆ ಒಟ್ಟು 635 ಸ್ಥಾನಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 12 ತಿಂಗಳ ತರಬೇತಿ ಒದಗಿಸಲಿದೆ. ಆಸಕ್ತರು ಐಬಿಪಿಎಸ್‌ನ ಅಧಿಕೃತ ಜಾಲತಾಣ https://ibpsreg.ibps.in/psbeoaapr26/ಕ್ಕೆ ಭೇಟಿ ನೀಡಿ, ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು.

ನೇಮಕಾತಿಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಮೇ 21, 2026
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ – ಜೂನ್ 06, 2026
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜೂನ್ 06, 2026

ರಾಜ್ಯವಾರು ಖಾಲಿ ಇರುವ ಅಪ್ರೆಂಟಿಸ್‌ ಹುದ್ದೆಗಳ ವಿವರ:

ಆಂಧ್ರಪ್ರದೇಶ-20
ಅರುಣಾಚಲ ಪ್ರದೇಶ-05
ಅಸ್ಸಾಂ-05
ಬಿಹಾರ-40
ಚಂಡೀಗಢ-15
ಛತ್ತೀಸ್‌ಗಢ-10
ದೆಹಲಿ (NCT)-30
ಗುಜರಾತ್-20
ಹರಿಯಾಣ-50
ಹಿಮಾಚಲ ಪ್ರದೇಶ-20
ಜಮ್ಮು ಮತ್ತು ಕಾಶ್ಮೀರ-10
ಜಾರ್ಖಂಡ್-10
ಕರ್ನಾಟಕ-10
ಕೇರಳ-05
ಮಧ್ಯಪ್ರದೇಶ-20
ಮಹಾರಾಷ್ಟ್ರ-30
ಮಣಿಪುರ-05
ಮಿಜೋರಾಂ-05
ನಾಗಾಲ್ಯಾಂಡ್-05
ಒಡಿಶಾ-15
ಪಂಜಾಬ್-90
ರಾಜಸ್ಥಾನ-30
ಸಿಕ್ಕಿಂ-10
ತಮಿಳುನಾಡು-20
ತೆಲಂಗಾಣ-20
ತ್ರಿಪುರ-05
ಉತ್ತರ ಪ್ರದೇಶ ಪ್ರದೇಶ-100
ಉತ್ತರಖಂಡ-10
ಪಶ್ಚಿಮ ಬಂಗಾಳ-20

ಶೈಕ್ಷಣಿಕ ಅರ್ಹತೆ:

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಅಭ್ಯರ್ಥಿಗಳು ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸುತ್ತಿರುವ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಸ್ಥಳೀಯ ಭಾಷೆಯಲ್ಲಿ ಓದಲು, ಬರೆಯಲು, ಮಾತನಾಡಲು ಮತ್ತು ಅರ್ಥಮಾಡಿಕೊಳ್ಳುವುದರಲ್ಲಿ ಪ್ರವೀಣರಾಗಿರಬೇಕು.

• ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಹಾಗೂ ಒಂದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಕೆಲಸದ ಅನುಭವ ಹೊಂದಿರುವ ವಿದ್ಯಾರ್ಥಿಗಳು ಅಪ್ರೆಂಟಿಸ್‌ಶಿಪ್ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.

ವಯೋಮಿತಿ:

01-05-2026 ರಂತೆ;

ಕನಿಷ್ಠ ವಯಸ್ಸಿನ ಮಿತಿ 20 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ 28 ವರ್ಷಗಳು

ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳು.

ಆಯ್ಕೆ ಪ್ರಕ್ರಿಯೆ:

ಅರ್ಹ ಅಭ್ಯರ್ಥಿಗಳ ಮೆರಿಟ್ ಲಿಸ್ಟ್
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

ಸ್ಟೈಫಂಡ್:

ಮಾಸಿಕ ₹12,300ವರೆಗೆ ಸ್ಟೈಫಂಡ್ ಅನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – 200ರೂ. + ಅನ್ವಯವಾಗುವ ತೆರಿಗೆ + ಪಾವತಿ ಗೇಟ್‌ವೇ ಶುಲ್ಕಗಳು
ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 100ರೂ. + ಅನ್ವಯವಾಗುವ ತೆರಿಗೆ + ಪಾವತಿ ಗೇಟ್‌ವೇ ಶುಲ್ಕಗಳು

ಅರ್ಜಿ‌ ಸಲ್ಲಿಸುವ ಸುಲಭ ವಿಧಾನ ಇಲ್ಲಿದೆ

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಪ್ರೆಂಟಿಸ್‌ ಅಧಿಕೃತ ಜಾಲತಾಣಗಳಾದ https://www.apprenticeshipindia.gov.in/ ಮತ್ತು https://nats.education.gov.in/ನಲ್ಲಿ ನೋಂದಣಿಯಾಗಿರಬೇಕು.

• ಮೊದಲಿಗೆ IBPS ನ‌ ಅಧಿಕೃತ ಜಾಲತಾಣದ ಲಿಂಕ್‌ https://ibpsreg.ibps.in/psbeoaapr26/ಕ್ಕೆ ಭೇಟಿ ನೀಡಿ.

• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಈಗಾಗಲೇ ನೋಂದಾಯಿಸಿದ್ದಲ್ಲಿ ನೋಂದಣಿ ಸಂಖ್ಯೆ, ಪಾಸ್ವರ್ಡ್ ಹಾಗೂ ಭದ್ರತಾ ಕೋಡ್ ನಮೂದಿಸಿ ಲಾಗಿನ್ ಆಗಿ.

• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.

• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitepunjabandsind.bank.in
More UpdatesKarnatakaHelp.in

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment