ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿದ್ದು, ಕರ್ನಾಟಕದಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ತನ್ನ ಬ್ರಾಂಚ್ ಹೊಂದಿದೆ. ಈ ಬ್ಯಾಂಕ್ 190 ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 10, 2025 ಕೊನೆಯ ದಿನವಾಗಿರುತ್ತದೆ. ಈ ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ, ವೇತನ, ವಯೋಮಿತಿ, ಅರ್ಜಿ ಸಲ್ಲಿಕೆ ದಿನಾಂಕ, ಅರ್ಜಿ ಸಲ್ಲಿಸುವ ಹಂತಗಳ ಸಂಪೂರ್ಣ ಮಾಹಿತಿಯನ್ನು ಕೆಳಗೆ ವಿವರಿಸಲಾಗಿದೆ.
ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 01-09-2025 ಕ್ಕೆ, ಅಭ್ಯರ್ಥಿಗಳಿಗೆ ಕನಿಷ್ಠ 23 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಪ.ಜಾತಿ /ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ಸ್ಕ್ರೀನಿಂಗ್
ಸಂದರ್ಶನ
ವೇತನ:
ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಅಧಿಸೂಚನೆಯಂತೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 64,820/ ರಿಂದ ರೂ. 93,960/ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಪ.ಜಾತಿ/ಪ.ಪಂಗಡ/ವಿಕಲಚೇತನ ಅಭ್ಯರ್ಥಿಗಳು – ರೂ. 100/
ಒಬಿಸಿ, ಜನರಲ್, ಆರ್ಥಿಕ ದುರ್ಭಲ ಅಭ್ಯರ್ಥಿಗಳು – ರೂ. 850/
ಅರ್ಜಿ ಸಲ್ಲಿಸುವ ವಿಧಾನ:
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಬೇಕು.
ಅರ್ಜಿ ಸಲ್ಲಿಸಲು ಬ್ಯಾಂಕ್ ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಥವಾ Online Application Link ಆಯ್ಕೆಯನ್ನು ಕ್ಲಿಕ್ ಮಾಡಿ. ನಂತರದ ಪರದೆಯಲ್ಲಿ ಕಾಣುವ Click Here for New Registration ಮೇಲೆ ಕ್ಲಿಕ್ ಮಾಡಿ.
Punjab And Sind Bank Online Application Form
ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಯಕ್ತಿಕ, ಶೈಕ್ಷಣಿಕ, ಅವಶ್ಯಕ ಮಾಹಿತಿಗಳನ್ನು ಪೂರೈಸಿರಿ. ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್ಲೋಡ್ ಮಾಡಿ.
ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿರಿ. (ಅನ್ವಯಿಸಿದರೆ ಮಾತ್ರ)
ನೀವು ನೀಡಿದ ಎಲ್ಲ ಮಾಹಿತಿಗಳು ಸರಿಯಾಗಿವೆಯೇ ಎಂದು ಪರೀಕ್ಷಿಸಿ, ಅರ್ಜಿ ಸಲ್ಲಿಸಿ. ಬಹು ಮುಖ್ಯವಾಗಿ ಅರ್ಜಿ ಸಂಖ್ಯೆ ಅಥವಾ ಹೆಚ್ಚಿನ ಉಲ್ಲೇಖಕ್ಕಾಗಿ ವಿನಂತಿ ಸಂಖ್ಯೆಯನ್ನು ಸೆರೆಹಿಡಿಯಿರಿ.
ರಾಮಕೃಷ್ಣ ಬಿ ಹೆಚ್ ಅವರು 2020ರಿಂದ ಉದ್ಯೋಗ ಸುದ್ದಿಯ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.