ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಗಿದ್ದು, ಕರ್ನಾಟಕದಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ತನ್ನ ಬ್ರಾಂಚ್ ಹೊಂದಿದೆ. ಈ ಬ್ಯಾಂಕ್ 190 ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 10, 2025 ಕೊನೆಯ ದಿನವಾಗಿರುತ್ತದೆ. ಈ ಹುದ್ದೆಯ ಭರ್ತಿಗೆ ಸಂಬಂಧಿಸಿದಂತೆ ಶೈಕ್ಷಣಿಕ ಅರ್ಹತೆ, ವೇತನ, ವಯೋಮಿತಿ, ಅರ್ಜಿ ಸಲ್ಲಿಕೆ ದಿನಾಂಕ, ಅರ್ಜಿ ಸಲ್ಲಿಸುವ ಹಂತಗಳ ಸಂಪೂರ್ಣ ಮಾಹಿತಿಯನ್ನು ಕೆಳಗೆ ವಿವರಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಸೆಪ್ಟೆಂಬರ್ 19, 2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 10, 2025
ಖಾಲಿಯಿರುವ ಹುದ್ದೆಗಳು:
- ಕ್ರೆಡಿಟ್ ಮ್ಯಾನೇಜರ್ – 130
- ಅಗ್ರಿಕಲ್ಚರ್ ಮ್ಯಾನೇಜರ್ – 60
ಶೈಕ್ಷಣಿಕ ಅರ್ಹತೆ:
- ಕ್ರೆಡಿಟ್ ಮ್ಯಾನೇಜರ್ – ಯಾವುದೇ ಪದವಿ ಅಥವಾ ಸಿಎ/ ಸಿಎಂಎ/ ಸಿಎಫ್ಎ/ ಎಂಬಿಎ.
- ಅಗ್ರಿಕಲ್ಚರ್ ಮ್ಯಾನೇಜರ್ – ಅಗ್ರಿಕಲ್ಚರ್/ ಹೊರ್ಟಿಕಲ್ಚರ್/ ಡೈರಿ/ ಪಶುಸಂಗೋಪನೆ/ ಫಾರೆಸ್ಟ್ರಿ/ ವೆಟರಿನರಿ ಸೈನ್ಸ್/ ಅಗ್ರಿಕಲ್ಚರ್ ಇಂಜಿನಿಯರಿಂಗ್/ ಫಿಸಿಕಲ್ಚರ್ ನಲ್ಲಿ ಪದವಿ.
ವಯೋಮಿತಿ:
ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 01-09-2025 ಕ್ಕೆ, ಅಭ್ಯರ್ಥಿಗಳಿಗೆ ಕನಿಷ್ಠ 23 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಪ.ಜಾತಿ /ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆ ವಿಧಾನ:
- ಲಿಖಿತ ಪರೀಕ್ಷೆ
- ಸ್ಕ್ರೀನಿಂಗ್
- ಸಂದರ್ಶನ
ವೇತನ:
ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಅಧಿಸೂಚನೆಯಂತೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 64,820/ ರಿಂದ ರೂ. 93,960/ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
- ಪ.ಜಾತಿ/ಪ.ಪಂಗಡ/ವಿಕಲಚೇತನ ಅಭ್ಯರ್ಥಿಗಳು – ರೂ. 100/
- ಒಬಿಸಿ, ಜನರಲ್, ಆರ್ಥಿಕ ದುರ್ಭಲ ಅಭ್ಯರ್ಥಿಗಳು – ರೂ. 850/
ಅರ್ಜಿ ಸಲ್ಲಿಸುವ ವಿಧಾನ:
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟುಕೊಳ್ಳಬೇಕು.
- ಅರ್ಜಿ ಸಲ್ಲಿಸಲು ಬ್ಯಾಂಕ್ ನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅಥವಾ Online Application Link ಆಯ್ಕೆಯನ್ನು ಕ್ಲಿಕ್ ಮಾಡಿ. ನಂತರದ ಪರದೆಯಲ್ಲಿ ಕಾಣುವ Click Here for New Registration ಮೇಲೆ ಕ್ಲಿಕ್ ಮಾಡಿ.
- ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಯಕ್ತಿಕ, ಶೈಕ್ಷಣಿಕ, ಅವಶ್ಯಕ ಮಾಹಿತಿಗಳನ್ನು ಪೂರೈಸಿರಿ. ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್ಲೋಡ್ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿರಿ. (ಅನ್ವಯಿಸಿದರೆ ಮಾತ್ರ)
- ನೀವು ನೀಡಿದ ಎಲ್ಲ ಮಾಹಿತಿಗಳು ಸರಿಯಾಗಿವೆಯೇ ಎಂದು ಪರೀಕ್ಷಿಸಿ, ಅರ್ಜಿ ಸಲ್ಲಿಸಿ. ಬಹು ಮುಖ್ಯವಾಗಿ ಅರ್ಜಿ ಸಂಖ್ಯೆ ಅಥವಾ ಹೆಚ್ಚಿನ ಉಲ್ಲೇಖಕ್ಕಾಗಿ ವಿನಂತಿ ಸಂಖ್ಯೆಯನ್ನು ಸೆರೆಹಿಡಿಯಿರಿ.
Important Direct Links:
| Official Notification PDF | Download |
| Online Application Form Link | Apply Now |
| Official Website | https://punjabandsindbank.co.in/ |
| More Updates | KarnatakaHelp.in |