ಬ್ಯಾಂಕಿಂಗ್ ವಲಯದಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸುವವರಿಗೆ ಇದೊಂದು ಉತ್ತಮ ಅವಕಾಶ. ಪಂಜಾಬ್ ನ್ಯಾಷನಲ್ ಬ್ಯಾಂಕ್ 2025-26ನೇ ಸಾಲಿಗೆ ಅಪ್ರೆಂಟಿಸ್ ಕಾಯ್ದೆಯಡಿ ಅಪ್ರೆಂಟಿಸ್ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 5138 ಸೀಟುಗಳಿದ್ದು, ಕರ್ನಾಟಕಕ್ಕೆ 64 ಸೀಟುಗಳು ಮೀಸಲಿವೆ. ದೇಶದಲ್ಲಿನ ತನ್ನ ಬ್ಯಾಂಕಿನ ಶಾಖೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡು ತರಬೇತಿ ನೀಡಲಿದೆ. ವಿವಿಧ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳು ಆಯ್ಕೆ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಆಸಕ್ತಿ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಅಧಿಕೃತ ಜಾಲತಾಣ https://pnb.bank.in/ ಅಥವಾ www.bfsissc.comಕ್ಕೆ ಭೇಟಿ ನೀಡಿ. ಫೆ.08 ರಿಂದ ಫೆ.24ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಫೆಬ್ರವರಿ 24, 2026
ಆನ್ಲೈನ್ ಪರೀಕ್ಷೆಯ ತಾತ್ಕಾಲಿಕ ದಿನಾಂಕ – ಮಾರ್ಚ್ 2026
ಶೈಕ್ಷಣಿಕ ಅರ್ಹತೆ:
ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ/ಅನುಮೋದಿತ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿರುವ ರಾಜ್ಯ/ಕೇಂದ್ರಾಡಳಿತ ಪ್ರದೇಶದ ಸ್ಥಳೀಯ ಭಾಷೆಯಲ್ಲಿ ಓದುವುದು, ಬರೆಯುವುದು, ಮಾತನಾಡುವುದು ಮತ್ತು ಅರ್ಥಮಾಡಿಕೊಳ್ಳುವುದರಲ್ಲಿ ಪ್ರವೀಣರಾಗಿರಬೇಕು.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 20 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು
ವಯೋಮಿತಿ ಸಡಿಲಿಕೆ: ಇತರ ಹಿಂದುಳಿದ ವರ್ಗಗಳು (ಒಬಿಸಿ) ಅಭ್ಯರ್ಥಿಗಳಿಗೆ – 03 ವರ್ಷಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷಗಳು.
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಲಿಖಿತ ಪರೀಕ್ಷೆ ದಾಖಲೆ ಪರಿಶೀಲನೆ ಸ್ಥಳೀಯ ಭಾಷಾ ಪರೀಕ್ಷೆ ವೈದ್ಯಕೀಯ ಪರೀಕ್ಷೆ
ಸ್ಟೈಫಂಡ್:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರು ಆಯ್ಕೆ ಮಾಡಿರುವ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಿಗೆ ಅನುಗುಣವಾಗಿ ಪ್ರತಿ ತಿಂಗಳು ₹12,300-15,000ವರೆಗೆ ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ (ಪುರುಷ) ಅಭ್ಯರ್ಥಿಗಳಿಗೆ – ₹944 ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ (ಮಹಿಳಾ) ಅಭ್ಯರ್ಥಿಗಳಿಗೆ – ₹708 ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ₹236 ತೃತೀಯಲಿಂಗಿ ಅಭ್ಯರ್ಥಿಗಳಿಗೆ – ₹236
ಅರ್ಜಿ ಸಲ್ಲಿಸುವ ಸುಲಭ ವಿಧಾನ ಇಲ್ಲಿದೆ:
•ಅಭ್ಯರ್ಥಿಗಳು BFSISSC ಅಧಿಕೃತ ಜಾಲತಾಣ www.bfsissc.comಕ್ಕೆ ಭೇಟಿ ನೀಡಿ.
• “ಉದ್ಯೋಗ ಅವಕಾಶಗಳು” ವಿಭಾಗದಲ್ಲಿ ನೀಡಲಾಗಿರುವ “ಶಿಷ್ಯವೃತ್ತಿ ಅವಕಾಶಗಳು” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ನಂತರ ಪಂಜಾಬ್ ನ್ಯಾಷನಲ್ ಬ್ಯಾಂಕ್ ಶೀರ್ಷಿಕೆಯ ಅಡಿಯಲ್ಲಿ ನೀಡಲಾಗಿರುವ “PNB ಶಿಷ್ಯವೃತ್ತಿ ಕಾರ್ಯಕ್ರಮ 2025-26 ಶಿಷ್ಯವೃತ್ತಿ ಅರ್ಜಿ ನಮೂನೆ” ವಿಭಾಗದ ಅಡಿಯಲ್ಲಿ ಲಭ್ಯವಿರುವ ಶಿಷ್ಯವೃತ್ತಿ ಪ್ರವೇಶ ಪರೀಕ್ಷೆಗೆ ನೋಂದಾಯಿಸಿಕೊಳ್ಳಬೇಕು.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.