ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ನಲ್ಲಿ ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.
ಭಾರತದಾದ್ಯಂತ ತನ್ನ 17 ರಾಜ್ಯಗಳಲ್ಲಿರುವ ಶಾಖೆಗಳ ವಿವಿಧ ವೃಂದಗಳಲ್ಲಿ ಖಾಲಿ ಇರುವ ಒಟ್ಟು 750 ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆಯ ಮುಖಾಂತರ ಭರ್ತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು IBPS ನ ಅಧಿಕೃತ ಜಾಲತಾಣ https://ibpsreg.ibps.in/pnboct25/ಕ್ಕೆ ಭೇಟಿ ನೀಡಿ. ನ.23ರೊಳಗೆ ಅರ್ಜಿ ಸಲ್ಲಿಸಬಹುದು.
ಆನ್ಲೈನ್ ಪರೀಕ್ಷೆಯ ತಾತ್ಕಾಲಿಕ ದಿನಾಂಕ – ಡಿಸೆಂಬರ್ 2025/ಜನವರಿ 2026
ರಾಜ್ಯವಾರು ಖಾಲಿ ಇರುವ ಹುದ್ದೆಗಳ ವಿವರ:
ಆಂಧ್ರಪ್ರದೇಶ – 05 ಹುದ್ದೆಗಳು ಗುಜರಾತ್ – 95 ಹುದ್ದೆಗಳು ಕರ್ನಾಟಕ – 85 ಹುದ್ದೆಗಳು ಮಹಾರಾಷ್ಟ್ರ- 135 ಹುದ್ದೆಗಳು ತೆಲಂಗಾಣ – 88 ಹುದ್ದೆಗಳು ತಮಿಳುನಾಡು – 85 ಹುದ್ದೆಗಳು ಪಶ್ಚಿಮ ಬಂಗಾಳ – 90 ಹುದ್ದೆಗಳು ಜಮ್ಮು ಮತ್ತು ಕಾಶ್ಮೀರ – 20 ಹುದ್ದೆಗಳು ಲಡಾಖ್ – 03 ಹುದ್ದೆಗಳು ಅರುಣಾಚಲ ಪ್ರದೇಶ – 05 ಹುದ್ದೆಗಳು ಅಸ್ಸಾಂ – 86 ಹುದ್ದೆಗಳು ಮಣಿಪುರ – 08 ಹುದ್ದೆಗಳು ಮೇಘಾಲಯ – 08 ಹುದ್ದೆಗಳು ಮಿಜೋರಾಮ್ – 05 ಹುದ್ದೆಗಳು ನಾಗಲ್ಯಾಂಡ್ – 05 ಹುದ್ದೆಗಳು ಸಿಕ್ಕಿಂ – 05 ಹುದ್ದೆಗಳು ತ್ರಿಪುರಾ – 22 ಹುದ್ದೆಗಳು
ಒಟ್ಟು – 750 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ/ಅನುಮೋದಿತ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 23 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
ವಯೋಮಿತಿ ಸಡಿಲಿಕೆ; ಇತರ ಹಿಂದುಳಿದ ವರ್ಗಗಳು (ಒಬಿಸಿ) ಅಭ್ಯರ್ಥಿಗಳಿಗೆ – 03 ವರ್ಷಗಳು, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – 05 ವರ್ಷಗಳು, ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳಿಗೆ – 10 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಪರೀಕ್ಷೆ(OWT)
ಸ್ಕ್ರೀನಿಂಗ್ (ದಾಖಲೆ ಪರಿಶೀಲನೆ)
ಸ್ಥಳೀಯ ಭಾಷಾ ಪರೀಕ್ಷೆ
ವೈಯಕ್ತಿಕ ಸಂದರ್ಶನ
ವೈದ್ಯಕೀಯ ಪರೀಕ್ಷೆ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ (48480-2000/7-62480-2340/2-67160-2680/7-85920) ಮೂಲ ವೇತನದ ಜೊತೆಗೆ ಡಿಎ, ಸಿಸಿಎ, ಎಚ್ಆರ್ಎ/ಲೀಸ್ಡ್ ಅಕಾಮಡೇಷನ್, ರಜೆ ದರ ರಿಯಾಯಿತಿ, ವೈದ್ಯಕೀಯ ವಿಮೆ, ನಿವೃತ್ತಿ ಸೌಲಭ್ಯಗಳು ಮತ್ತು ಇತರ ಭತ್ಯೆಗಳನ್ನು ಬ್ಯಾಂಕ್ ನಿಯಮಗಳ ಪ್ರಕಾರ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – 1180ರೂ. ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 59ರೂ.
ಅರ್ಜಿ ಸಲ್ಲಿಸುವ ಸುಲಭ ವಿಧಾನ ಇಲ್ಲಿದೆ
• ಮೊದಲಿಗೆ IBPS ನ ಅಧಿಕೃತ ಜಾಲತಾಣ https://ibpsreg.ibps.in/pnboct25/ ಕ್ಕೆ ಭೇಟಿ ನೀಡಿ.
Panjab National Bank Local Bank Officer In Jmgs I Application Form 2025
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಈಗಾಗಲೇ ನೋಂದಾಯಿಸಿದ್ದಲ್ಲಿ ನೋಂದಣಿ ಸಂಖ್ಯೆ, ಪಾಸ್ವರ್ಡ್ ಹಾಗೂ ಭದ್ರತಾ ಕೋಡ್ ನಮೂದಿಸಿ ಲಾಗಿನ್ ಆಗಿ.
• ಬಳಿಕ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ನೇಮಕಾತಿ – 2025 ಅರ್ಜಿ ನಮೂನೆ ಆಯ್ಕೆ ಮಾಡಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಿ.