ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಪಾಲಿಸಿ ಕನ್ಸಲ್ಟೆಂಟ್ (Policy Consultant) ಹುದ್ದೆಯ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಅಭ್ಯರ್ಥಿಯನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಅಧಿಸೂಚನೆಯ ದಿನಾಂಕ – 07-07-2025
- ಅರ್ಜಿ ನಮೂನೆ ಡೌನ್ಲೋಡ್ ಮಾಡುವ ಪ್ರಾರಂಭ ದಿನಾಂಕ – 08-07-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 17-07-2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವ್ಯವಹಾರ ಆಡಳಿತದಲ್ಲಿ ಸ್ನಾತಕೋತ್ತರ ಪದವಿ (MBA) ಅಥವಾ ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿ (MPP) ಪೂರ್ಣಗೊಳಿಸಿರಬೇಕು.
ವೃತ್ತಿ ಅನುಭವ:
ಸಂಶೋಧನೆ ಮತ್ತು ನೀತಿ ವಿಶ್ಲೇಷಣೆಯಲ್ಲಿ ಕನಿಷ್ಠ 2 ವರ್ಷಗಳ ಸಂಬಂಧಿತ ಅನುಭವ. ಸರ್ಕಾರಿ ಸಂಸ್ಥೆಗಳೊಂದಿಗೆ ಸಮನ್ವಯದಲ್ಲಿ ಕೆಲಸದ ಜ್ಞಾನ ಮತ್ತು ಅನುಭವವು ಆದ್ಯತೆಯಾಗಿದೆ.
ವಯೋಮಿತಿ:
- ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50,000 ರೂ. ವೇತನ ನೀಡಲಾಗುತ್ತದೆ.
ಹುದ್ದೆಯ ಕನಿಷ್ಠ ಅವಧಿ:
ಕನಿಷ್ಠ ಒಂದು ವರ್ಷ ಆಗಿದ್ದು ಅಭ್ಯರ್ಥಿಯ ಕಾರ್ಯಕ್ಷಮತೆ ತೃಪ್ತಿಕರವಾಗಿ ಪೂರೈಸಿದ್ದಾರೆಂದು ಘೋಷಿಸಿದಲ್ಲಿ ಮಾತ್ರ ಮುಂದಿನ ವರ್ಷಕ್ಕೆ ಅಭ್ಯರ್ಥಿಯನ್ನು ಮುಂದುವರೆಸಲಾಗುವುದು.
ಅರ್ಜಿ ಸಲ್ಲಿಸುವ ವಿಧಾನ:
- ರಾಯಚೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಅಧಿಕೃತ ವೆಬ್ಸೈಟ್ https://raichur.nic.in/ ಗೆ ಭೇಟಿ ನೀಡಿ.
- ಹೊಸತೇನಿದೆ ವಿಭಾಗದಲ್ಲಿ ಜಿಲ್ಲಾಧಿಕಾರಿಗಳ, ರಾಯಚೂರು ಕಚೇರಿಗೆ ಅವಶ್ಯವಿರುವ Policy Consultant-01 ಹುದ್ದೆಗೆ ಅರ್ಜಿ ಆಹ್ವಾನ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನೇಮಕಾತಿಯ ಅಧಿಸೂಚನೆ ಹಾಗೂ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಸ್ವ-ವಿವರದೊಂದಿಗೆ ಎಲ್ಲಾ, ಅಂಕಪಟ್ಟಿಗಳು, ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟ ಎಲ್ಲಾ ಪ್ರಮಾಣ ಪತ್ರ / ದಾಖಲೆಗಳನ್ನು ನೇಮಕಾತಿ ಆದೇಶಗಳನ್ನು, ಅನುಭವ ಪ್ರಮಾಣ ಪತ್ರಗಳನ್ನು ಹಾಗೂ ಒಂದು ಭಾವಚಿತ್ರ ಮತ್ತು ಆಧಾರ್ ಜೆರಾಕ್ಸ್ ಪ್ರತಿಯನ್ನು ಅರ್ಜಿಯೊಂದಿಗೆ ದೃಢೀಕರಿಸಿ ಲಗತ್ತಿಸಿ.
ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಳಾಸ;
ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾಡಳಿತ ಕಟ್ಟಡ, ನೆಲ ಮಹಡಿ, ಕೊಠಡಿ ಸಂಖ್ಯೆ-ಸಿ-15, ಏಕಲಾಸ್‌ಪುರ, ರಾಯಚೂರು-584101
Important Direct Links:
Official Notification and Application Form PDF | Download |
Official Website | raichur.nic.in |
More Updates | KarnatakaHelp.in |