ರಾಯಚೂರು ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಉದ್ಯೋಗಾವಕಾಶ, ಅಪ್ಲೈ ಮಾಡಿ

ಜಿಲ್ಲಾಧಿಕಾರಿಗಳ ಕಾರ್ಯಾಲಯ ರಾಯಚೂರಿನಲ್ಲಿ ಖಾಲಿ ಇರುವ ಪಾಲಿಸಿ ಕನ್ಸಲ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

Published on:

ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಖಾಲಿ ಇರುವ ಪಾಲಿಸಿ ಕನ್ಸಲ್ಟೆಂಟ್ (Policy Consultant) ಹುದ್ದೆಯ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಅಭ್ಯರ್ಥಿಯನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ತಪ್ಪದೇ ಕೊನೆಯವರೆಗೂ ಓದಿ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಅಧಿಸೂಚನೆಯ ದಿನಾಂಕ – 07-07-2025
  • ಅರ್ಜಿ ನಮೂನೆ ಡೌನ್ಲೋಡ್ ಮಾಡುವ ಪ್ರಾರಂಭ ದಿನಾಂಕ – 08-07-2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 17-07-2025

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವ್ಯವಹಾರ ಆಡಳಿತದಲ್ಲಿ ಸ್ನಾತಕೋತ್ತರ ಪದವಿ (MBA) ಅಥವಾ ಸಾರ್ವಜನಿಕ ನೀತಿಯಲ್ಲಿ ಸ್ನಾತಕೋತ್ತರ ಪದವಿ (MPP) ಪೂರ್ಣಗೊಳಿಸಿರಬೇಕು.

ವೃತ್ತಿ ಅನುಭವ:

ಸಂಶೋಧನೆ ಮತ್ತು ನೀತಿ ವಿಶ್ಲೇಷಣೆಯಲ್ಲಿ ಕನಿಷ್ಠ 2 ವರ್ಷಗಳ ಸಂಬಂಧಿತ ಅನುಭವ. ಸರ್ಕಾರಿ ಸಂಸ್ಥೆಗಳೊಂದಿಗೆ ಸಮನ್ವಯದಲ್ಲಿ ಕೆಲಸದ ಜ್ಞಾನ ಮತ್ತು ಅನುಭವವು ಆದ್ಯತೆಯಾಗಿದೆ.

ವಯೋಮಿತಿ:

  • ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು

ವೇತನ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50,000 ರೂ. ವೇತನ ನೀಡಲಾಗುತ್ತದೆ.

ಹುದ್ದೆಯ ಕನಿಷ್ಠ ಅವಧಿ:

ಕನಿಷ್ಠ ಒಂದು ವರ್ಷ ಆಗಿದ್ದು ಅಭ್ಯರ್ಥಿಯ ಕಾರ್ಯಕ್ಷಮತೆ ತೃಪ್ತಿಕರವಾಗಿ ಪೂರೈಸಿದ್ದಾರೆಂದು ಘೋಷಿಸಿದಲ್ಲಿ ಮಾತ್ರ ಮುಂದಿನ ವರ್ಷಕ್ಕೆ ಅಭ್ಯರ್ಥಿಯನ್ನು ಮುಂದುವರೆಸಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:

  • ರಾಯಚೂರು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಅಧಿಕೃತ ವೆಬ್ಸೈಟ್ https://raichur.nic.in/ ಗೆ ಭೇಟಿ ನೀಡಿ.
  • ಹೊಸತೇನಿದೆ ವಿಭಾಗದಲ್ಲಿ ಜಿಲ್ಲಾಧಿಕಾರಿಗಳ, ರಾಯಚೂರು ಕಚೇರಿಗೆ ಅವಶ್ಯವಿರುವ Policy Consultant-01 ಹುದ್ದೆಗೆ ಅರ್ಜಿ ಆಹ್ವಾನ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನೇಮಕಾತಿಯ ಅಧಿಸೂಚನೆ ಹಾಗೂ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಸ್ವ-ವಿವರದೊಂದಿಗೆ ಎಲ್ಲಾ, ಅಂಕಪಟ್ಟಿಗಳು, ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟ ಎಲ್ಲಾ ಪ್ರಮಾಣ ಪತ್ರ / ದಾಖಲೆಗಳನ್ನು ನೇಮಕಾತಿ ಆದೇಶಗಳನ್ನು, ಅನುಭವ ಪ್ರಮಾಣ ಪತ್ರಗಳನ್ನು ಹಾಗೂ ಒಂದು ಭಾವಚಿತ್ರ ಮತ್ತು ಆಧಾರ್ ಜೆರಾಕ್ಸ್ ಪ್ರತಿಯನ್ನು ಅರ್ಜಿಯೊಂದಿಗೆ ದೃಢೀಕರಿಸಿ ಲಗತ್ತಿಸಿ.

ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಳಾಸ;

ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾಡಳಿತ ಕಟ್ಟಡ, ನೆಲ ಮಹಡಿ, ಕೊಠಡಿ ಸಂಖ್ಯೆ-ಸಿ-15, ಏಕಲಾಸ್‌ಪುರ, ರಾಯಚೂರು-584101

Important Direct Links:

Official Notification and Application Form PDFDownload
Official Websiteraichur.nic.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “ರಾಯಚೂರು ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ಉದ್ಯೋಗಾವಕಾಶ, ಅಪ್ಲೈ ಮಾಡಿ”

Leave a Comment