Raichur University Assistant Professor recruitment 2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಯಚೂರು ವಿವಿಯಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 6 ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿರುವ 18 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ವಿವಿಧ ವಿಷಯಗಳ ಒಟ್ಟು 24 ಸಹಾಯಕ ಪ್ರಾಧ್ಯಾಪಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಸಂಬಂಧಿಸಿದ ವಿಷಯದಲ್ಲಿ ಪಿ.ಜಿ ಪದವಿ ಪಾಸಾಗಿರಬೇಕು ಮತ್ತು ಎನ್ಇಟಿ, ಕೆ-ಸೆಟ್, ಪಿಹೆಚ್ ಡಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://cetonline.karnataka.gov.in/ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ರಾಯಚೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of Raichur University Recruitment 2024
- Organization Name – Raichur University
- Recruitment Board – Karnataka Examinations Authority (KEA)
- Post Name – Assistant Professor
- Total Vacancy – 24
- Application Process: Online
- Job Location – Raichur
ನೇಮಕಾತಿಯ ಪ್ರಮುಖ ದಿನಾಂಕಗಳು:
- ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 5, 2024 (ಬೆಳಗ್ಗೆ 11 ರಿಂದ)
- ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 30, 2024
- ಅರ್ಜಿ ಸುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ – ಆಗಸ್ಟ್ 31, 2024
- ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ದಿನಾಂಕ – ಅಕ್ಟೋಬರ್ 3 ಮತ್ತು 4 , 2024
ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ವಿವರ:
ಕಲ್ಯಾಣ ಕರ್ನಾಟಕ ವೃಂದದಲ್ಲಿರುವ ಹುದ್ದೆಗಳು
- ಕೆಮಿಸ್ಟ್ರಿ -2
- ಅರ್ಥಶಾಸ್ತ್ರ-2
- ಇಂಗ್ಲಿಷ್ -2
- ಇತಿಹಾಸ ಮತ್ತು ಆರ್ಕ್ಯಾಲಜಿ -2
- ಗಣಿತ -2
- ಭೌತಶಾಸ್ತ್ರ-2
- ರಾಜ್ಯಶಾಸ್ತ್ರ-2
- ಸೋಶಿಯಲ್ ವರ್ಕ್-2
- ಸಮಾಜಶಾಸ್ತ್ರ-2
ಒಟ್ಟು -18 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಉಳಿಕೆ ಮೂಲ ವೃಂದದಲ್ಲಿರುವ ಖಾಲಿ ಹುದ್ದೆಗಳು
- ಸಸ್ಯಶಾಸ್ತ್ರ-1
- ವಾಣಿಜ್ಯಶಾಸ್ತ್ರ-1
- ಕಂಪ್ಯೂಟರ್ ಸೈನ್ಸ್-1
- ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ-1
- ಮೈಕ್ರೋ ಬಯಾಲಜಿ-1
- ಪ್ರಾಣಿಶಾಸ್ತ್ರ-1
ಒಟ್ಟು -06ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇರಬೇಕಾದ ವಿದ್ಯಾರ್ಹತೆ:
- ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ವಿಷಯದಲ್ಲಿ ಶೇಕಡ.55 ಅಂಕಳೊಂದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು.
- ಅಂಗವಿಕಲ ಅಭ್ಯರ್ಥಿಗಳಗೆ ಕನಿಷ್ಠ ಶೇಕಡ.50 ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪಾಸಾಗಿರಬೇಕು.
- NET, KSET ಅರ್ಹತೆ ಪಡೆದುಕೊಂಡಿರಬೇಕು.
- ಪಿಹೆಚ್‌ಡಿ ಪದವಿ / ಎಂಫಿಲ್ ಪದವಿ ಪಡೆದವರಿಗೆ ಎನ್‌ಇಟಿ, ಎಸ್‌ಎಲ್‌ಇಟಿ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುತ್ತದೆ.
ವಯೋಮಿತಿ:
ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿಯು 22 ಆಗಿದ್ದು, ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿಲ್ಲ.
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ, ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ:
ಅರ್ಜಿ ಸಲ್ಲಿಸಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ 57,770 ರಿಂದ 1,82,400 ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
ಪರೀಕ್ಷಾ ವಿಧಾನ:
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪರೀಕ್ಷಾ ಪ್ರಾಧಿಕಾರರು ಒಟ್ಟು 200 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ನಿಗದಿತ ಪತ್ರಿಕೆ -1 ಮತ್ತು ವಿಷಯವಾರು ಪತ್ರಿಕೆ -2 ಪ್ರತಿ ಪತ್ರಿಕೆಗೆ 100 ಅಂಕಗಳಂತೆ ಒಟ್ಟು 200 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಈ ಪರೀಕ್ಷೆಗಳನ್ನು ಬೆಂಗಳೂರು ಧಾರವಾಡ ಕಲ್ಬುರ್ಗಿ ಜಿಲ್ಲಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಅರ್ಜಿ ಶುಲ್ಕ:
- ಸಾಮಾನ್ಯ ಅಭ್ಯರ್ಥಿಗಳಿಗೆ – ₹2,000
- SC/ST, ಪ್ರವರ್ಗ-1 ಅಭ್ಯರ್ಥಿಗಳಿಗೆ – ₹1000
ಅರ್ಜಿ ಶುಲ್ಕ ಪಾವತಿಸುವ ವಿಧಾನ – ಅರ್ಜಿ ಶುಲ್ಕವನ್ನು ಅಂಚೆ ಕಚೇರಿಗಳಲ್ಲಿ ಮಾತ್ರ ಪಾವತಿಸಬೇಕು. ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದ್ದಲ್ಲಿ ಒಂದೇ ಅರ್ಜಿಯಲ್ಲಿ ಸಲ್ಲಿಸಬೇಕು ಆದರೆ ಹುದ್ದೆಗೆ ಪ್ರತ್ಯೇಕ ಶುಲ್ಕವನ್ನು ಪಾವತಿಸಬೇಕು.
How to Apply for Raichur University Assistant Professor recruitment 2024
ಅರ್ಜಿ ಸಲ್ಲಿಸುವ ವಿಧಾನ;
- ಮೊದಲಿಗೆ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/ ಗೆ ಭೇಟಿ ನೀಡಿ.
- ಮುಖಪುಟದಲ್ಲಿ ಕಾಣುವ ‘ನೇಮಕಾತಿ’ ಮೇಲೆ ಕ್ಲಿಕ್ ಮಾಡಿ.
- ಮತ್ತೊಂದು ಪೇಜ್ ತೆರೆಯುತ್ತದೆ ಅಲ್ಲಿ ‘ರಾಯಚೂರು ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರ ನೇಮಕಾತಿ’ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ‘ಅರ್ಜಿ ಸಲ್ಲಿಸು’ ಮೇಲೆ ಕ್ಲಿಕ್ ಮಾಡಿ.
- ಅಗತ್ಯ ವಿವರಗಳನ್ನು ಭರ್ತಿ ಮಾಡಿ.
- ಎಲ್ಲಾ ದಾಖಲೆಗಳು ಮತ್ತು ನಂತರ ಫೋಟೋ ಮತ್ತು ಸಿಗ್ನೇಚರ್ ಅಪ್ಲೋಡ್ ಮಾಡಿ.
- ಕೊನೆದಾಗಿ ಅರ್ಜಿ ಸಲ್ಲಿಸಿ ಮತ್ತು ಅರ್ಜಿ ಸಂಖ್ಯೆಯನ್ನು ಉಳಿಸಿಕೊಳ್ಳಿ.
Important Direct Links:
Online Application Last Date Extended Notice PDF (Dated on 25/08/2024) | Download |
Official Notification PDF(HK) | Download |
Official Notification PDF(Non-HK) | Download |
Online Application Form Link (HK) | Apply Here |
Online Application Form Link (Non-HK) | Apply Here |
Official Website | kea.kar.nic.in |
More Updates | Karnataka Help.in |
FAQs – Raichur University Notification 2024
How to Apply for Raichur University Recruitment 2024?
Visit the official website of kea.kar.nic.in to Apply online
What is the Last Date of Raichur University Assistant Professor Recruitment 2024
August 25, 2024