ರಾಯಚೂರು ಜಿಲ್ಲಾ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಡಿ.24 ಕೊನೆಯ ದಿನವಾಗಿದೆ.
ತಾಂತ್ರಿಕ ಸಂಯೋಜಕ(02), ಎಂಐಎಸ್ ಸಂಯೋಜಕ(02), ಆಡಳಿತ ಸಹಾಯಕ(03) ಹಾಗೂ (ಅನುಷ್ಠಾನ ಇಲಾಖೆ ಗಣಕಯಂತ್ರ ನಿರ್ವಾಹಕ(02) ಸೇರಿದಂತೆ ಒಟ್ಟು 09 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ರಾಯಚೂರು ಜಿಲ್ಲಾ ಪಂಚಾಯತ್ ಅಧಿಕೃತ ಜಾಲತಾಣ https://zpraichur.karnataka.gov.in/enದಲ್ಲಿ ಲಭ್ಯವಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು.
✓ ತಾಂತ್ರಿಕ ಸಂಯೋಜಕರು ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಬಿ.ಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.
✓ ಎಂಐಎಸ್ ಸಂಯೋಜಕರು ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಬಂಧಿತ (ಕಂಪ್ಯೂಟರ್ ಸೈನ್ಸ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ಮಾಹಿತಿ ವಿಜ್ಞಾನ) ವಿಭಾಗದಲ್ಲಿ ಬಿ.ಇ/ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು. ಅಥವಾ ಬಿಸಿಎ/ಬಿಎಸ್ಸಿ ಇನ್ ಕಂಪ್ಯೂಟರ್ ಸೈನ್ಸ್/ಡಿಪ್ಲೊಮಾ ಇನ್ ಕಂಪ್ಯೂಟರ್ ಸೈನ್ಸ್ ಪೂರ್ಣಗೊಳಿಸಿರಬೇಕು.
✓ ಆಡಳಿತ ಸಹಾಯಕರು ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ವಾಣಿಜ್ಯ ವಿಭಾಗದಲ್ಲಿ ಪದವಿ ಅಥವಾ ಇತರ ಸಮಾನ ಅರ್ಹತೆಯೊಂದಿಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು ಮತ್ತು ಕನ್ನಡ ಹಾಗೂ ಆಂಗ್ಲ ಭಾಷೆ ಟೈಪಿಂಗ್ ತಿಳಿದಿರಬೇಕು.
✓ ಗಣಕಯಂತ್ರ ನಿರ್ವಾಹಕರು ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ಅಥವಾ ಇತರ ಸಮಾನ ಅರ್ಹತೆಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಮತ್ತು ಕನ್ನಡ ಹಾಗೂ ಆಂಗ್ಲ ಭಾಷೆ ಟೈಪಿಂಗ್ ತಿಳಿದಿರಬೇಕು.
ವಯೋಮಿತಿ:
24-12-2025 ರಂತೆ;
ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು
ಆಯ್ಕೆ ವಿಧಾನ:
• ತಾತ್ಕಾಲಿಕ ಆಯ್ಕೆಪಟ್ಟಿ • ದಾಖಲಾತಿ ಪರಿಶೀಲನೆ • ಅಂತಿಮ ಮೆರಿಟ್ ಪಟ್ಟಿ
ಮಾಸಿಕ ಸಂಭಾವನೆ:
ತಾಂತ್ರಿಕ ಸಂಯೋಜಕರು ಹುದ್ದೆಗೆ – 33,000ರೂ. ಹಾಗೂ ಪ್ರಯಾಣ ಭತ್ಯೆ 2,000ರೂ., ತಾಲೂಕು ಎಂ.ಐ.ಎಸ್ ಸಂಯೋಜಕರ ಹುದ್ದೆಗೆ – 28,000ರೂ., ಆಡಳಿತ ಸಹಾಯಕರು ಹುದ್ದೆಗೆ – 22,000ರೂ. ಹಾಗೂ ಗಣಕಯಂತ್ರ ನಿರ್ವಾಹಕರು ಹುದ್ದೆಗೆ 18,000ರೂ. ಮಾಹೆಯಾನ ಸಂಭಾವನೆಯನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ ಹೇಗೆ.?
ಮೇಲಿನ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರಾಯಚೂರು ಜಿಲ್ಲಾ ಪಂಚಾಯತ್ ಅಧಿಕೃತ ಜಾಲತಾಣ https://zpraichur.karnataka.gov.in/en ಕ್ಕೆ ಭೇಟಿ ನೀಡಿ.
• ನಂತರ ಇತ್ತೀಚಿನ ಸೂಚನೆಗಳು(Notification) ವಿಭಾಗದಲ್ಲಿ ನೀಡಲಾಗಿರುವ “ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ 2025″ನಲ್ಲಿ ಹುದ್ದೆಗಳ ಆಧಾರಿತವಾಗಿ ಅರ್ಜಿ ಸಲ್ಲಿಕೆ ನೀಡಲಾಗಿದ್ದು, ನೀವು ಅರ್ಜಿ ಸಲ್ಲಬಯಸುವ ಹುದ್ದೆಯ ಅರ್ಜಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
• ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.