ರೈಲ್ವೆ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF)ನಲ್ಲಿ ಉದ್ಯೋಗಾವಕಾಶ – ಈಗಲೇ ಅರ್ಜಿ ಸಲ್ಲಿಸಿ

Published on:

ಭಾರತ ಸರ್ಕಾರದ ರೈಲ್ವೆ ಸಚಿವಾಲಯದ ಅಡಿಯಲ್ಲಿ ಬರುವ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF)ನಲ್ಲಿ ಖಾಲಿ ಇರುವ 1010 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF)ನಲ್ಲಿ ಗೊತ್ತುಪಡಿಸಿದ ಟ್ರೇಡ್‌ಗಳ ಅಡಿಯಲ್ಲಿ ಒಟ್ಟು 1010 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಫಿಟ್ಟರ್, ಮೆಷಿನಿಸ್ಟ್ ಪೇಂಟರ್ ಮತ್ತು ವೆಲ್ಡರ್‌ ಹುದ್ದೆಗಳಿಗೆ ತರಬೇತಿಯನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ICF ನ ಅಧಿಕೃತ ವೆಬ್ಸೈಟ್ https://pb.icf.gov.in/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – 12-07-2025
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ -11-08-2025

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಕನಿಷ್ಠ 50% ಅಂಕಗಳೊಂದಿಗೆ (ವಿಜ್ಞಾನ ವಿಭಾಗದೊಂದಿಗೆ) 10ನೇ, 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಸಂಬಂಧಿಸಿದ ವಿಷಯಗಳಲ್ಲಿ ಐಟಿಐ(ITI) ಉತ್ತೀರ್ಣರಾಗಿರಬೇಕು.

ವಯೋಮಿತಿ:

11-08-2025 ರಂತೆ

ಕನಿಷ್ಠ ಮಿತಿ – 15 ವರ್ಷಗಳು
ಗರಿಷ್ಠ ಮಿತಿ – 24 ವರ್ಷಗಳು

ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಆಯ್ಕೆ ವಿಧಾನ:

  • ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಅರ್ಜಿ ಶುಲ್ಕ:

  • ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – 100ರೂ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.

How to Apply For Railway ICF Apprentice Recruitment 2025

ಅರ್ಜಿ‌ ಸಲ್ಲಿಸುವ ವಿಧಾನ;

  • ICF ನ ಅಧಿಕೃತ ವೆಬ್ಸೈಟ್
    https://pb.icf.gov.in/ಗೆ ಭೇಟಿ ನೀಡಿ.
  • 2025-26ನೇ ಸಾಲಿನ ಆಕ್ಟ್ ಅಪ್ರೆಂಟಿಸ್‌ಗೆ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಹೌದು ವಿಭಾಗ ಆಯ್ಕೆ ಮಾಡಿ ಸಲ್ಲಿಸಿ.
  • ಅಪ್ರೆಂಟಿಸ್ ನೇಮಕಾತಿ ಆನ್ಲೈನ್ ಅರ್ಜಿ-2025-26 – ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  • ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
  • ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitepb.icf.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

10 thoughts on “ರೈಲ್ವೆ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ICF)ನಲ್ಲಿ ಉದ್ಯೋಗಾವಕಾಶ – ಈಗಲೇ ಅರ್ಜಿ ಸಲ್ಲಿಸಿ”

  1. Name:sumanth c p
    DOB:07-07-2002
    District:mysore
    Chikkahanasoge village, kr nagara thalok, channam gere post
    Study education :ITI electrician complete
    Collage adress :mysore district saligrama thalok
    Mother:vinoda
    Father:(late) partharaja

    Reply

Leave a Comment